Homeಮುಖಪುಟವಕ್ಫ್ ಮಸೂದೆ | ಸದನ ಸಮಿತಿ ಸಭೆಯಿಂದ ಹೊರ ನಡೆದ ಪ್ರತಿಪಕ್ಷ ಸಂಸದರು

ವಕ್ಫ್ ಮಸೂದೆ | ಸದನ ಸಮಿತಿ ಸಭೆಯಿಂದ ಹೊರ ನಡೆದ ಪ್ರತಿಪಕ್ಷ ಸಂಸದರು

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆ ಪರಿಶೀಲನೆಗೆ ರಚಿಸಿರುವ ಜಂಟಿ ಸದನ ಸಮಿತಿ ಕಾನೂನು ಹಾಗೂ ನಿಯಮಾವಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಆರೋಪಿಸಿರುವ ಪ್ರತಿ ಪಕ್ಷಗಳ ಸಂಸದರು, ಸೋಮವಾರ ನಡೆದ ಸಭೆಯಿಂದ ಹೊರ ನಡೆದರು.

ಸಂಸತ್‌ನಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷಗಳ ಸಂಸದರ ನಡುವೆ ಮಾತಿನ ಚಕಮಕಿ ನಡೆಯಿತು. ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ವಕ್ಫ್ ಸಮಿತಿಯ ಸಭೆಗೆ ಹಿಂದುತ್ವ ಮುಖಂಡರನ್ನು ಆಹ್ವಾನಿಸಿದ್ದಕ್ಕೆ ಸಮಿತಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರ ಹೆಸರೆತ್ತಿದ ಮಾಣಿಪ್ಪಾಡಿ 

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡ ರೆಹಮಾನ್ ಖಾನ್ ಅವರು ವಕ್ಫ್‌ಗೆ ಸಂಬಂಧಿಸಿದ ಆಸ್ತಿಗಳ ಕಬಳಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಬಿಜೆಪಿಯ ಮಾಜಿ ಉಪಾಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಆರೋಪಿಸಿದರು.

ಉನ್ನತ ನಾಯಕರ ಮೇಲೆ ಆರೋಪ ಸಾಭೀತಾಗದೆ ಅವರ ಹೆಸರು ಉಲ್ಲೇಖಿಸಿದ್ದಕ್ಕೆ ಪ್ರತಿಪಕ್ಷ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು. ಆದರೆ, ಸಮಿತಿಯ ಅಧ್ಯಕ್ಷ ಜಗದಾಂಬಿಕ ಪಾಲ್ ಅವರು ಪ್ರತಿಪಕ್ಷ ಸಂಸದರ ವಿರೋಧ ಲೆಕ್ಕಿಸದೆ ಅನ್ವರ್ ಮಾಣಿಪ್ಪಾಡಿ ಅವರಿಗೆ ಮಾತನಾಡಲು ಅವಕಾಶ ಕೊಟ್ಟರು.

ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ಸಂಸದರಾದ ಗೌರವ್ ಗೊಗೋಯ್, ಇಮ್ರಾನ್ ಮಸೂದ್, ಡಿಎಂಕೆಯ ಎ.ರಾಜಾ, ಶಿವಸೇನೆ (ಯುಬಿಟಿ) ಯ ಅರವಿಂದ್ ಸಾವಂತ್, ಎಐಎಂಐಎಂನ ಅಸಾದುದ್ದೀನ್ ಓವೈಸಿ, ಸಮಾಜವಾದಿ ಪಕ್ಷದ ಮೊಹಿಬ್ಬುಲ್ಲಾ, ಆಮ್‌ ಆದ್ಮಿ ಪಕ್ಷದ ಸಂಜಯ್ ಸಿಂಗ್ ಅವರು ಸಭೆಯಿಂದ ಹೊರ ನಡೆದರು.

ವಕ್ಫ್ (ತಿದ್ದುಪಡಿ) ಮಸೂದೆ ಪರಿಶೀಲನೆ ನಡೆಸುತ್ತಿರುವ ಜಂಟಿ ಸದನ ಸಮಿತಿ ಕಾನೂನಿಗೆ ತಕ್ಕಂತೆ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಶಿವಸೇನೆಯ ಅರವಿಂದ್ ಸಾವಂತ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮುಂದಿನ ಕಾರ್ಯವಿಧಾನಗಳ ಕುರಿತು ಪ್ರತಿಪಕ್ಷಗಳ ಸಂಸದರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಈ ಕುರಿತು ಲೋಕಸಭಾ ಸ್ವೀಕರ್‌ಗೆ ಇಂದು (ಮಂಗಳವಾರ) ಪತ್ರ ಬರೆಯುವ ಸಾಧ್ಯತೆ ಇದೆ.

ಹಿಂದುತ್ವ ನಾಯಕರ ಆಹ್ವಾನಕ್ಕೆ ವಿರೋಧ

ವಕ್ಫ್‌ ಮಸೂದೆಗೆ ಸಂಬಂಧಿಸಿದ ಸಮಿತಿಯ ಸಭೆಗೆ ಹಿಂದುತ್ವ ಸಂಘಟನೆಗಳ ನಾಯಕರನ್ನು ಆಹ್ವಾನಿಸಿದ್ದಕ್ಕೆ ಪ್ರತಿಪಕ್ಷಗಳ ಸಂಸದರು ವಿರೋಧ ವ್ಯಕ್ತಪಡಿಸಿದರು. ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ವಕ್ಫ್ ಕುರಿತು ಹಿಂದುತ್ವ ನಾಯಕರ ಅಭಿಪ್ರಾಯ ಕೇಳುವ ಔಚಿತ್ಯವನ್ನು ಪ್ರಶ್ನಿಸಿದರು.

ಮೂಲಭೂತ ಸಿದ್ದಾಂತ ಹೊಂದಿರುವ ಸನಾತನ ಸಂಸ್ಥೆ, ಹಿಂದೂ ಜನಜಾಗೃತಿ ಸಂಸ್ಥೆಯು ‘ಹಿಂದೂ ರಾಷ್ಟ್ರ ನಿರ್ಮಾಣ’ದ ಗುರಿ ಹೊಂದಿವೆ. ಇಂತವರಿಗೆ ಆಹ್ವಾನ ನೀಡಿರುವುದು ಸರಿಯಲ್ಲ ಎಂದು ಸಮಿತಿ ಅಧ್ಯಕ್ಷ ಜಗದಾಂಬ ಪಾಲ್‌ಗೆ ಬರೆದ ಪತ್ರದಲ್ಲಿ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಹಿಂದುತ್ವ ಪರ ವಕೀಲರಾದ ವಿಷ್ಣು ಶಂಕರ್ ಜೈನ್, ಅಶ್ವಿನಿ ಉಪಾಧ್ಯಾಯ್, ಮಹಾರಾಷ್ಟ್ರದ ನಾಸಿಕ್‌ನ ಕಾಲಾರಾಮ್ ದೇಗುಲದ ಮಹಾಂತ ಸುಧೀರ್‌ಧಾಸ್ ಮಹಾರಾಜ್ ಅವರನ್ನು ಸಭೆಗೆ ಕರೆದಿದ್ದಕ್ಕೆ ಓವೈಸಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಭೆಯಲ್ಲಿ ಜಂ-ಇಯತುಲ್-ಉಲೇಮಾ-ಎ-ಹಿಂದ್‌ನ ಮುಹಮ್ಮದ್ ಮದನಿ ಕೂಡ ಭಾಗವಹಿಸಿದ್ದರು. ತಿದ್ದುಪಡಿ ಮಸೂದೆಗೆ ಜಂ-ಇಯತುಲ್-ಉಲೇಮಾ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ : ಬಂಗಾಳದ ಪ್ರತಿಭಟನಾನಿರತ ಕಿರಿಯ ವೈದ್ಯರ ಬೆಂಬಲಕ್ಕೆ ನಿಂತ ಐಎಂಎ; ರಾಷ್ಟ್ರವ್ಯಾಪಿ ಉಪವಾಸ ಸತ್ಯಾಗ್ರಹಕ್ಕೆ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...