Homeಮುಖಪುಟವಕ್ಫ್ ಕಾಯ್ದೆ ಬಗ್ಗೆ ರಾಹುಲ್ ಗಾಂಧಿ ಮೌನ ಪ್ರಶ್ನಿಸಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ

ವಕ್ಫ್ ಕಾಯ್ದೆ ಬಗ್ಗೆ ರಾಹುಲ್ ಗಾಂಧಿ ಮೌನ ಪ್ರಶ್ನಿಸಿದ ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ

- Advertisement -
- Advertisement -

ವಕ್ಫ್ (ತಿದ್ದುಪಡಿ) ಕಾಯ್ದೆಯ ಕುರಿತು ಸಂಸತ್ತಿನಲ್ಲಿ ನಡೆದ ಸುದೀರ್ಘ ಚರ್ಚೆಯ ಸಂದರ್ಭದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಮಾತನಾಡದಿದ್ದಕ್ಕಾಗಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದಲಿತರು, ಅಲ್ಪಸಂಖ್ಯಾತರ ವಿಚಾರದಲ್ಲಿ ಸಮಾನವಾಗಿ ವಿಫಲವಾಗಿದೆ ಎಂದು ಹೇಳಿದ್ದಾರೆ. ವಕ್ಫ್ ಕಾಯ್ದೆ

“ರಾಹುಲ್ ಗಾಂಧಿ ಅವರು ವಕ್ಫ್ ವಿಚಾರದಲ್ಲಿ ಮಾತನಾಡದೆ ಇರುವುದರಿಂದ ಮುಸ್ಲಿಮರು ತೀವ್ರಗಾಗಿ ಕೋಪಗೊಳ್ಳುವುದು ಮತ್ತು ಇಂಡಿಯಾ ಮೈತ್ರಿಯ ಪಕ್ಷಗಳು ಈ ವಿಷಯದ ಬಗ್ಗೆ ಆಕ್ರೋಶಗೊಳ್ಳುವುದು ಸಹಜ” ಎಂದು ಮಾಯಾವತಿ ಹೇಳಿದ್ದಾರೆ.

“ವಿರೋಧ ಪಕ್ಷಗಳು ವಕ್ಫ್ (ತಿದ್ದುಪಡಿ) ಮಸೂದೆಯನ್ನು ಖಂಡಿಸಿ, ಸಿಎಎಯಂತೆ ಸಂವಿಧಾನವನ್ನು ಉಲ್ಲಂಘಿಸಿದ ಪ್ರಕರಣ ಎಂದು ಕರೆದರೂ, ಲೋಕಸಭೆಯಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತು ವ್ಯಾಪಕ ಚರ್ಚೆ ನಡೆದಿದ್ದರೂ ಸಹ, ಸದನದಲ್ಲಿ ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತು ಮಾತನಾಡದಿರಲು ವಿಪಕ್ಷ ನಾಯಕ ತೆಗೆದುಕೊಂಡ ನಿರ್ಧಾರ ಸಮರ್ಥನೀಯವೇ?” ಎಂದು ಅವರು ಎಕ್ಸ್‌ನಲ್ಲಿ ಕೇಳಿದ್ದಾರೆ.

ಯಾವುದೇ ಸಂದರ್ಭ ಇರಲಿ, ಕಾಂಗ್ರೆಸ್ ಮತ್ತು ಬಿಜೆಪಿ ದಲಿತರ ಕಲ್ಯಾಣ, ಸರ್ಕಾರಿ ಉದ್ಯೋಗಗಳು, ಶಿಕ್ಷಣದಿಂದ ವಾಸ್ತವದಲ್ಲಿ ವಂಚಿತಗೊಳಿಸಿದ್ದಕ್ಕಾಗಿ ಸಮಾನವಾಗಿ ತಪ್ಪಿತಸ್ಥರು ಎಂದು ಮಾಯಾವತಿ ಹೇಳಿದ್ದಾರೆ. “ಈ ಪಕ್ಷಗಳ ವಂಚನೆಯಿಂದ ತಪ್ಪಿಸಿಕೊಳ್ಳುವ ಅಗತ್ಯವನ್ನು ಧಾರ್ಮಿಕ ಅಲ್ಪಸಂಖ್ಯಾತರು ಅರಿತುಕೊಳ್ಳುವುದು ಮುಖ್ಯ” ಎಂದು ಅವರು ಹೇಳಿದ್ದಾರೆ.

ಈ ಪಕ್ಷಗಳ ಇಂತಹ ತಂತ್ರಗಳಿಂದಾಗಿ ಬಹುಜನರು ಎಲ್ಲಾ ವಲಯದಲ್ಲೂ ಕಳಪೆ ಸಾಧನೆ ಮಾಡಿದ್ದಾರೆ ಎಂದು ಮಾಯಾವತಿ ಪ್ರತಿಪಾದಿಸಿದ್ದಾರೆ. “ಅಧಿಕಾರ ಮತ್ತು ಇತರ ಕ್ಷೇತ್ರಗಳಲ್ಲಿ ಖಾಸಗೀಕರಣದ ವಿಷಯವು ಸಹ ಆತಂಕಕಾರಿಯಾಗಿದೆ ಮತ್ತು ಸರ್ಕಾರವು ಜನರ ಕಲ್ಯಾಣದ ಕಡೆಗೆ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು” ಎಂದು ಅವರು ಹೇಳಿದ್ದಾರೆ.

ಹೊಸ ವಕ್ಫ್ ಕಾನೂನಿನಲ್ಲಿರುವ ನಿಬಂಧನೆಗಳನ್ನು ಮರುಪರಿಶೀಲಿಸುವಂತೆ ಮತ್ತು ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಬಿಎಸ್‌ಪಿಯ ಮುಖ್ಯಸ್ಥರೂ ಆಗಿರುವ ಮಾಯಾವತಿ ಅವರು ಗುರುವಾರ ಕೇಂದ್ರ ಸರ್ಕಾರವನ್ನು ಕೇಳಿದ್ದರು. ಇತ್ತೀಚೆಗೆ ಅಂಗೀಕರಿಸಲಾದ ವಕ್ಫ್ ಕಾಯ್ದೆಯಲ್ಲಿ, ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರನ್ನು ಸೇರಿಸುವ ಕಾಯ್ದೆಯ ನಿಬಂಧನೆಯು ಪ್ರಾಥಮಿಕ ನೋಟದಲ್ಲಿ ಉತ್ತಮವಾಗಿಲ್ಲ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಮಂಗಳವಾರ ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅನ್ನು ಅಧಿಸೂಚನೆ ಹೊರಡಿಸಿದೆ. ಇದು ಎರಡೂ ಸದನಗಳಲ್ಲಿ ಬಿಸಿ ಚರ್ಚೆಗಳ ನಂತರ ಸಂಸತ್ತಿನಲ್ಲಿ ಅಂಗೀಕಾರವಾಗಿತ್ತು. ಅದರ ನಂತರ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಯನ್ನು ಪಡೆಯಿತು. ಮಸೂದೆಯನ್ನು ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸುವ ಮೂಲಕ ಅಂಗೀಕರಿಸಲಾಯಿತು. ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿದರು ಮತ್ತು 232 ಸದಸ್ಯರು ವಿರೋಧಿಸಿ ಮತ ಚಲಾಯಿಸಿದರು. ವಕ್ಫ್ ಕಾಯ್ದೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಛತ್ತೀಸ್‌ಗಢ | ಪ್ರೇಮ ಸಂಬಂಧ ಆರೋಪಿಸಿ ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Man evolved and then came religion/caste/restrictions etc?
    For such evolution man/woman mating relations were necssary and essential?
    Persons of different religions mating will result in children, family etc?

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...