Homeಕರ್ನಾಟಕರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ರೈತರಿಗೆ ಮಂಜೂರಾದ ಭೂಮಿಯನ್ನು ವಕ್ಫ್‌ ಬೋರ್ಡ್ ಹಿಂಪಡೆಯುತ್ತಿಲ್ಲ : ಸಚಿವ ಕೃಷ್ಣಬೈರೇಗೌಡ

ಹೊನವಾಡದ 11 ಎಕರೆ ಮಾತ್ರ ವಕ್ಫ್‌ ಆಸ್ತಿ : ಸುದ್ದಿಗೋಷ್ಠಿ ನಡೆಸಿ ಮಾಹಿತಿ ಕೊಟ್ಟ ಸಚಿವರು

- Advertisement -
- Advertisement -

ಭೂ ಸುಧಾರಣೆ ಕಾಯ್ದೆ ಹಾಗೂ ಇನಾಮ್ ರದ್ಧತಿ ಕಾಯ್ದೆಯಡಿ ವಿಜಯಪುರದಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ವಕ್ಫ್ ಬೋರ್ಡ್ ಹಿಂಪಡೆಯುತ್ತಿಲ್ಲ. ಬಿಜೆಪಿ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬಿ.ವೈ ವಿಜಯೇಂದ್ರ ನಡುವಿನ ಸಂಘರ್ಷದಿಂದಾಗಿ ಇದಕ್ಕೆ ವಿವಾದದ ರೂಪ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಸೋಮವಾರ (ಅ.28) ಸಂಜೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರಾದ ಝಮೀರ್ ಅಹ್ಮದ್ ಮತ್ತು ಎಂ.ಬಿ ಪಾಟೀಲ್ ಜೊತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ 14,201 ಎಕರೆ ವಕ್ಫ್ ಆಸ್ತಿ ಎಂದು ಅಧಿಸೂಚನೆ ಆಗಿದೆ. ಈ ಪೈಕಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಮ್ಯುಟೇಷನ್ ಆಗಿರುವುದು ಕೇವಲ 773 ಎಕರೆ ಮಾತ್ರ ಎಂದು ಹೇಳಿದರು.

ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1,459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ. 133 ಎಕರೆ 17 ಗುಂಟೆ ಬೆರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರ್ಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಉಳಿದಿರುವ 1,319 ಎಕರೆ ಭೂಮಿಯು ಯಾರ ಅನುಭೋದಲ್ಲಿಯೂ ಇಲ್ಲ. ಅದು ಯಾರಿಗೂ ಮಂಜೂರು ಆಗಿಲ್ಲ. ಮುಸ್ಲಿಂ ಸಮುದಾಯದ ವಿವಿಧ ಸಂಸ್ಥೆಗಳು, ಮುತವಲ್ಲಿಗಳ ಹೆಸರಿನಲ್ಲಿದೆ. ಅವುಗಳನ್ನು ಇಂದೀಕರಣ ಮಾಡುವುದರಿಂದ ಒಬ್ಬ ರೈತನಿಗೂ ಅನ್ಯಾಯವಾಗುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಇಂಡಿ ತಾಲೂಕಿನಲ್ಲಿ ರೈತರಿಗೆ ನೋಟಿಸ್ ನೀಡದೆ 41 ಆಸ್ತಿಗಳನ್ನು ಅಲ್ಲಿನ ತಹಶೀಲ್ದಾರ್ ಇಂದೀಕರಣ ಮಾಡಿದ್ದು ಕರ್ತವ್ಯ ಲೋಪವಾಗಿದೆ. ಈಗಾಗಲೇ ಸಹಾಯಕ ಆಯುಕ್ತರು ಅದನ್ನು ರದ್ದು ಮಾಡಿ, ತಹಶೀಲ್ದಾರ್‌ಗೆ ರೈತರ ಅಹವಾಲು ಆಲಿಸಲು ಸೂಚನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಹೊನವಾಡ ಗ್ರಾಮದ 11 ಎಕರೆ ಮಾತ್ರ ವಕ್ಫ್‌ ಆಸ್ತಿ

ಹೊನವಾಡ ಗ್ರಾಮದಲ್ಲಿ 1,200 ಎಕರೆ ಜಮೀನನ್ನು ವಕ್ಫ್‌ಗೆ ಸೇರಿಸಲಾಗುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. 1974ರಲ್ಲಿ ಮಹಲ್ ಬಗಾಯತ್ ಎಂಬ ಗ್ರಾಮದ ದಾಖಲೆಗಳಲ್ಲಿ ಬ್ರ್ಯಾಕೆಟ್‍ನಲ್ಲಿ ಹೊನವಾಡ ಎಂದು ಸೇರಿಸಲಾಗಿತ್ತು. ಅದನ್ನು 1977ರಲ್ಲಿ ವಕ್ಫ್ ಬೋರ್ಡ್‍ನವರೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹೊನವಾಡ ಎಂಬುವುದನ್ನು ತೆಗೆಸಿದ್ದಾರೆ. ಸರ್ಕಾರ ಅಧಿಸೂಚನೆಯೂ ಹೊರಡಿಸಿದೆ ಎಂದು ಕೃಷ್ಣಬೈರೇಗೌಡ ವಿವರಿಸಿದರು.

ಹೊನವಾಡದಲ್ಲಿ ವಕ್ಫ್ ಭೂಮಿ ಇರುವುದು 11 ಎಕರೆ ಮಾತ್ರ. ಈ ಬಗ್ಗೆ ವ್ಯವಸ್ಥಿತವಾಗಿ ಗೊಂದಲ ಮೂಡಿಸಿ, ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿಸಿ, ಜನರ ನಡುವೆ ಸಂಘರ್ಷ ಉಂಟು ಮಾಡಲು ಬಿಜೆಪಿಯವರು ಪ್ರಯತ್ನ ಮಾಡುತ್ತಿದ್ದಾರೆ. ಇದು ಯತ್ನಾಳ್ ಹಾಗೂ ವಿಜಯೇಂದ್ರ ನಡುವಿನ ರಾಜಕೀಯ ಸಂಘರ್ಷದ ಪ್ರತಿಬಿಂಬ ಎಂದು ಟೀಕಿಸಿದರು.

ವಿಜಯಪುರ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು. ಅದರಲ್ಲಿ, ಸಹಾಯಕ ಆಯುಕ್ತರು, ಎಲ್ಲ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು, ವಕ್ಫ್ ಅಧಿಕಾರಿಗಳು ಇರುತ್ತಾರೆ. 1973-74ರಲ್ಲಿ ಅಧಿಸೂಚನೆಯಾಗುವ ಪೂರ್ವದಲ್ಲಿನ ದಾಖಲೆಗಳನ್ನು ರೈತರು ಸಲ್ಲಿಸಿದರೆ, ಅಂತಹ ಅಧಿಸೂಚಿತ ಜಾಗಗಳನ್ನು ಕೈ ಬಿಡಲು ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದರು.

ಅಧಿಸೂಚಿತವಾಗಿದ್ದ ಭೂಮಿಯ ಇಂದೀಕರಣ ಆಗಬೇಕಿತ್ತು. ಆದರೆ, ಕಂದಾಯ ಇಲಾಖೆಯವರು ಮಾಡಿಲ್ಲ, ವಕ್ಫ್ ಇಲಾಖೆಯವರು ಮಾಡಿಸಿಕೊಂಡಿಲ್ಲ. ಬಗರ್‍ಹುಕುಂ ಸಮಿತಿ, ನ್ಯಾಯಾಧೀಕರಣಗಳಲ್ಲಿ ರೈತರಿಗೆ ಮಂಜೂರು ಆಗಿರುವ ಭೂಮಿಯನ್ನು ಹಿಂಪಡೆಯುವುದಿಲ್ಲ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಅಧೀನದಲ್ಲಿರುವುದು 773 ಎಕರೆ ಮಾತ್ರ. ಬಿಜೆಪಿಯವರು 1974ರ ಅಧಿಸೂಚನೆ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. 1974ಕ್ಕಿಂತ ಮುಂಚಿತವಾದ ದಾಖಲೆಗಳಿದ್ದರೆ ಅದನ್ನು ಕಾರ್ಯಪಡೆ ಎದುರು ಹಾಜರುಪಡಿಸಬಹುದು. ಅಲ್ಲದೇ, 1964 ರಿಂದ 1974ರವರೆಗಿನ ವಕ್ಫ್ ಆಸ್ತಿಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ವಕ್ಫ್ ಖಾತೆ ಸಚಿವ ಝಮೀರ್ ಅಹ್ಮದ್ ಖಾನ್ ಮಾತನಾಡಿ, ವಕ್ಫ್ ಭೂಮಿ ಸಮುದಾಯದ ದಾನಿಗಳು ದಾನ ಮಾಡಿರುವಂತದ್ದು. ವಕ್ಫ್ ಭೂಮಿ ಸರ್ಕಾರ ನೀಡಿರುವುದು ಎಂಬ ತಪ್ಪು ಕಲ್ಪನೆ ಬಹಳಷ್ಟು ಜನರಲ್ಲಿದೆ. ಸ್ಮಶಾನ ಹೊರತುಪಡಿಸಿ ವಕ್ಫ್ ಅಧೀನದಲ್ಲಿ ಸರ್ಕಾರದ ಒಂದಿಂಚು ಜಾಗವೂ ಇಲ್ಲ. 1.12 ಲಕ್ಷ ಎಕರೆ ವಕ್ಫ್ ಭೂಮಿ ದಾನವಾಗಿ ಬಂದಿದೆ. ಅದರಲ್ಲಿ ಉಳಿದಿರುವುದು 23,860 ಎಕರೆ ಮಾತ್ರ. ಅದನ್ನು ಉಳಿಸಲು ವಕ್ಫ್ ಅದಾಲತ್‍ಗಳನ್ನು ಪ್ರತಿಯೊಂದು ಜಿಲ್ಲೆಯಲ್ಲಿ ಮಾಡುತ್ತಿದ್ದೇನೆ ಎಂದು ಹೇಳಿದರು.

ಅ.9ರಂದು ವಿಜಯಪುರದಲ್ಲಿ ವಕ್ಫ್ ಅದಾಲತ್ ಮಾಡಿದಾಗ ಬಿಜೆಪಿ ಶಾಸಕ ಯತ್ನಾಳ್ ಅವರಿಗೂ ಆಹ್ವಾನ ನೀಡಲಾಗಿತ್ತು. ಅವರಿಗೆ ರೈತರ ಬಗ್ಗೆ ಕಾಳಜಿಯಿದ್ದಿದ್ದರೆ ಆ ಸಭೆಗೆ ಬಂದು ವಿಚಾರ ಮಂಡನೆ ಮಾಡಬಹುದಿತ್ತು. ವಕ್ಫ್ ಅದಾಲತ್ ಆದ ನಾಲ್ಕು ದಿನಗಳ ನಂತರ ಪ್ರತಿಭಟನೆ ಮಾಡಿದ್ದಾರೆ. ಯತ್ನಾಳ್ ಹಾಗೂ ತೇಜಸ್ವಿ ಸೂರ್ಯ ವಕ್ಫ್ ಆಸ್ತಿಗಳ ಬದಲಾಗಿ, ಒತ್ತುವರಿಯಾಗಿರುವ 740 ಎಕರೆ ಮುಜುರಾಯಿ ಆಸ್ತಿಯನ್ನು ರಕ್ಷಿಸಲು ಹೋರಾಟ ಮಾಡಲಿ ಎಂದು ಅವರು ಹೇಳಿದರು.

ಇದನ್ನೂ ಓದಿ : ವಕ್ಫ್ ಜಟಾಪಟಿ | ರೈತರಿಗೆ ಕೊಟ್ಟಿರುವ ನೋಟಿಸ್ ವಾಪಸ್ ಪಡೆಯುತ್ತೇವೆ : ಸಚಿವ ಹೆಚ್‌.ಕೆ ಪಾಟೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...