Homeಮುಖಪುಟವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

ವಕ್ಫ್‌ ವಿವಾದ| ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಹೋರಾಟಕ್ಕೆ ಪ್ರತಿಯಾಗಿ ಹಿಂದುತ್ವ ಗುಂಪಿನಿಂದ ಪ್ರತಿಭಟನೆ!

- Advertisement -
- Advertisement -

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಮ್‌ಪಿಎಲ್‌ಬಿ) ಮಾರ್ಚ್ 10 ರಂದು ಸಂಸತ್ತಿನ ಬಳಿಯ ಐತಿಹಾಸಿಕ ಜಂತರ್ ಮಂತರ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬೃಹತ್ ಹೋರಾಟ ನಡೆಸುವ ಯೋಜನೆಯನ್ನು ಘೋಷಿಸಿದ ಕೆಲವು ದಿನಗಳ ನಂತರ, ಹಿಂದೂ ರಕ್ಷಾ ದಳದ ಮುಖ್ಯಸ್ಥೆ ಪಿಂಕಿ ಚೌಧರಿ ಕೂಡ ಅದೇ ಸ್ಥಳದಲ್ಲಿ ಮಸೂದೆಯನ್ನು ಬೆಂಬಲಿಸಿ ಪ್ರತಿಭಟನೆ ನಡೆಸುವ ಯೋಜನೆಯನ್ನು ಬಹಿರಂಗಪಡಿಸಿದ್ದಾರೆ.

ವಕ್ಫ್ ಸಂಸ್ಥೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ತಮ್ಮ ಸಂಘಟನೆ ಪ್ರತಿಭಟನೆ ನಡೆಸಲಿದೆ ಎಂದು ಚೌಧರಿ ಬುಧವಾರ ಹೇಳಿದ್ದಾರೆ.

ಈ ಬಗ್ಗೆ ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಚೌಧರಿ, “ದೆಹಲಿ ಪೊಲೀಸರು ವಕ್ಫ್ ಮಸೂದೆಯ ವಿರುದ್ಧ ಪ್ರತಿಭಟಿಸಲು ಮುಸ್ಲಿಮರಿಗೆ ಅನುಮತಿ ನೀಡಿದ್ದಾರೆ ಎಂದು ಹೇಳುತ್ತಾರೆ. ಹಿಂದೂಗಳು ಆ ಸ್ಥಳದಲ್ಲಿ ಮುಸ್ಲಿಮರು ಸೇರದಂತೆ ನೋಡಿಕೊಳ್ಳಬೇಕು” ಎಂದು ಅವರು ಕರೆ ನೀಡಿದ್ದಾರೆ.

“ನಾವೆಲ್ಲರೂ ಹಿಂದೂ ಸಹೋದರರು ಒಟ್ಟಾಗಿ ಹೋರಾಡಿದರೆ, ವಕ್ಫ್ ಮಂಡಳಿಯನ್ನು ಮುಗಿಸಬಹುದು. ಇತರರು ಅದನ್ನು ಮಾಡಲು ಸಾಧ್ಯವಿಲ್ಲ, ಮಾರ್ಚ್ 10 ರಂದು ವಕ್ಫ್ ಸಂಸ್ಥೆಯನ್ನು ವಿರೋಧಿಸಲು ನಾವು ಪೂರ್ಣ ಬಲದಿಂದ ಜಂತರ್ ಮಂತರ್‌ಗೆ ಆಗಮಿಸುತ್ತೇವೆ ಎಂದು ನಾನು ಎlfl ಹಿಂದೂ ಸಹೋದರರಿಗೆ ಹೇಳಲು ಬಯಸುತ್ತೇನೆ” ಎಂದು ಅವರು ಹೇಳಿದರು.

ಸರ್ಕಾರವು ವಕ್ಫ್ ಕಾಯ್ದೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದ ಅವರು, ಮತ್ತು ದೇಶಾದ್ಯಂತ ಅದರ ವಿರುದ್ಧ ಪ್ರತಿಭಟನೆಗಳನ್ನು ನಡೆಸುವಂತೆ ತಮ್ಮ ಬೆಂಬಲಿಗರನ್ನು ಕೇಳಿಕೊಂಡರು.

ಜಂತರ್ ಮಂತರ್‌ನಲ್ಲಿ ಮುಸ್ಲಿಂ ಪ್ರತಿಭಟನಾಕಾರರೊಂದಿಗೆ ದೈಹಿಕ ಘರ್ಷಣೆಗೆ ತಮ್ಮ ಬೆಂಬಲಿಗರು ಹಿಂಜರಿಯುವುದಿಲ್ಲ. ವಕ್ಫ್ ಮಂಡಳಿಯನ್ನು ಬೆಂಬಲಿಸಲು ಈ ಮುಲ್ಲಾಗಳು ಒಟ್ಟುಗೂಡಲು ನಾವು ಅನುಮತಿಸುವುದಿಲ್ಲ ಎಂದು ಚೌಧರಿ ಪ್ರಚೋಧನಾತ್ಮಕ ಹೇಳಕೆ ನೀಡಿದ್ದಾರೆ.

ಮುಸ್ಲಿಮರು ಪ್ರತಿಭಟಿಸದಿದ್ದರೆ ಜನರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಿಸುತ್ತಾರೆ ಎಂದು ಸುಳ್ಳು ಹೇಳುವ ಮೂಲಕ ಅವರು ಭಯ ಹುಟ್ಟಿಸುವ ಪ್ರಚಾರವನ್ನು ಸಹ ಮಾಡಿದರು.

ಮಾರ್ಚ್ 1 ರಂದು, ಎಐಎಮ್‌ಪಿಎಲ್‌ಬಿ ವಕ್ತಾರ ಡಾ. ಸೈಯದ್ ಖಾಸಿಂ ರಸೂಲ್ ಇಲ್ಯಾಸ್, ಆ ದಿನ ಸಂಸತ್ತಿನಲ್ಲಿ ಮಂಡಿಸಲಿರುವ ವಕ್ಫ್ ಮಸೂದೆಯ ವಿರುದ್ಧ ಮಂಡಳಿಯು ಪ್ರತಿಭಟನೆಯನ್ನು ಆಯೋಜಿಸುತ್ತದೆ ಎಂದು ಹೇಳಿದರು.

ಮಂಡಳಿಯು ಹಲವಾರು ಮುಸ್ಲಿಂ ಸಂಘಟನೆಗಳು ಮತ್ತು ಸಾಮಾನ್ಯ ಮುಸ್ಲಿಂ ಸಮುದಾಯದೊಂದಿಗೆ ಕೇಂದ್ರ ಸರ್ಕಾರ, ಅದರ ಮಿತ್ರ ಪಕ್ಷಗಳು ಮತ್ತು ವಿಶೇಷವಾಗಿ ಸಂಬಂಧಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಮುಂದೆ ತನ್ನ ನಿಲುವನ್ನು ಬಲವಾಗಿ ಮಂಡಿಸಿದೆ ಎಂದು ಅವರು ಹೇಳಿದರು. ಪ್ರಸ್ತಾವಿತ ಮಸೂದೆಯು ವಕ್ಫ್ ಆಸ್ತಿಗಳನ್ನು ವಶಪಡಿಸಿಕೊಳ್ಳುವ, ಅದನ್ನು ನಾಶಮಾಡುವ ಒಂದು ದುಷ್ಟ ಪಿತೂರಿಯಾಗಿದ್ದು, ನಿರ್ಧಾರವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಅವರು ಒತ್ತಿ ಹೇಳಿದರು. ಆದರೆ, ಕೇಂದ್ರ ಸರ್ಕಾರವು ಈ ಕಳವಳಗಳಿಗೆ ಕಿವಿಗೊಡಲಿಲ್ಲ.

“ಸರ್ಕಾರವು ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಯೋಜಿಸುತ್ತಿರುವುದರಿಂದ, ಮಂಡಳಿಯ ಕಾರ್ಯಕಾರಿ ಸಮಿತಿಯು ಮಾರ್ಚ್ 10 ರಂದು ಸಂಸತ್ತಿನ ಮುಂದೆ ಜಂತರ್ ಮಂತರ್‌ನಲ್ಲಿ ಧರಣಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಆತ್ಮಸಾಕ್ಷಿಯನ್ನು ಜಾಗೃತಗೊಳಿಸಲು ಹಾಗೂ ಅವರ ಪ್ರತಿಭಟನೆಯನ್ನು ನೋಂದಾಯಿಸಲು. ವಿವಿಧ ಧಾರ್ಮಿಕ, ರಾಷ್ಟ್ರೀಯ ಮತ್ತು ಸಾಮಾಜಿಕ ಸಂಘಟನೆಗಳ ಕೇಂದ್ರ ನಾಯಕತ್ವದೊಂದಿಗೆ ಎಐಎಮ್‌ಪಿಎಲ್‌ಬಿಯ ಸಂಪೂರ್ಣ ನಾಯಕತ್ವವು ಈ ಪ್ರತಿಭಟನೆಯಲ್ಲಿ ಭಾಗವಹಿಸುತ್ತದೆ. ಎಲ್ಲ ವಿರೋಧ ಪಕ್ಷಗಳು, ನಾಗರಿಕ ಸಮಾಜ ಚಳುವಳಿಗಳನ್ನು ಈ ಧರಣಿ ಪ್ರತಿಭಟನೆಯಲ್ಲಿ ಸೇರುವಂತೆ ಹಾಗೂ ಈ ಅನ್ಯಾಯ, ದಬ್ಬಾಳಿಕೆಯ ವಿರುದ್ಧ ನಿಲ್ಲುವಂತೆ ಎಐಎಮ್‌ಪಿಎಲ್‌ಬಿ ಒತ್ತಾಯಿಸಿದೆ.

ಈ ಪ್ರತಿಭಟನೆಯಲ್ಲಿ ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳ ಸಾಮಾಜಿಕ ಮತ್ತು ರಾಜಕೀಯ ನಾಯಕತ್ವ, ಸಿಖ್ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಧಾರ್ಮಿಕ ಮುಖಂಡರು ಸಹ ಭಾಗವಹಿಸಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ. ಹೆಚ್ಚುವರಿಯಾಗಿ, ಮಾರ್ಚ್ 7 ರಂದು, ವಿಜಯವಾಡ (ಆಂಧ್ರಪ್ರದೇಶ) ಮತ್ತು ಪಾಟ್ನಾ (ಬಿಹಾರ) ದಲ್ಲಿನ ರಾಜ್ಯ ಸಭೆಗಳ ಮುಂದೆ ಪ್ರತಿಭಟನೆಗಳು ನಡೆಯಲಿವೆ.

ದೇಶದ ಮುಖ್ಯವಾಹಿನಿಯ ಮಾಧ್ಯಮಗಳು ಕೋಮು ಶಕ್ತಿಗಳಿಂದ ನಡೆಸಲ್ಪಡುವ ಆಧಾರರಹಿತ, ದಾರಿತಪ್ಪಿಸುವ ನಿರೂಪಣೆಗಳನ್ನು ಪ್ರಚಾರ ಮಾಡುತ್ತಿರುವುದರ ಬಗ್ಗೆಯೂ ಮಂಡಳಿಯು ಆಕ್ರೋಶ ವ್ಯಕ್ತಪಡಿಸಿದೆ. ಮಿಲಿಟರಿ ಮತ್ತು ರೈಲ್ವೆಗಳ ನಂತರ, ವಕ್ಫ್ ಆಸ್ತಿಗಳು ದೇಶದಲ್ಲಿ ಅತಿ ದೊಡ್ಡದಾಗಿದೆ ಎಂದು ಅವರು ಹೇಳಿಕೊಳ್ಳುತ್ತಾರೆ. ಆದರೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿರುವ ಹಿಂದೂ ವಕ್ಫ್ ಆಸ್ತಿಗಳು ಹಾಗೂ ಒಡಿಶಾದಲ್ಲಿನ ದೇವಾಲಯ ಆಸ್ತಿಗಳು ಒಟ್ಟು ವಕ್ಫ್ ಆಸ್ತಿಗಳಿಗಿಂತ ಹೆಚ್ಚಿನದಾಗಿದೆ.

“ಇನ್ನೊಂದು ನಿರ್ಣಾಯಕ ಅಂಶವೆಂದರೆ, ಈ ಎಲ್ಲ ವಕ್ಫ್ ಆಸ್ತಿಗಳು ಮೂಲತಃ ಧಾರ್ಮಿಕ ಮತ್ತು ದತ್ತಿ ಉದ್ದೇಶಗಳಿಗಾಗಿ ಮುಸ್ಲಿಂ ಪೂರ್ವಜರು ದಾನ ಮಾಡಿದ ವೈಯಕ್ತಿಕ ಆಸ್ತಿಗಳಾಗಿದ್ದವು. ವಕ್ಫ್ ಕಾನೂನು ಅವುಗಳ ರಕ್ಷಣೆಯನ್ನು ಖಚಿತಪಡಿಸುತ್ತದೆ ಮತ್ತು ಅವುಗಳ ದುರುಪಯೋಗವನ್ನು ತಡೆಯುತ್ತದೆ” ಎಂದು ಡಾ. ಇಲ್ಯಾಸ್ ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

‘ಭಾರತವನ್ನು ‘ಹಿಂದಿಯನ್ನಾಗಿ’ಸಲು ಪ್ರಯತ್ನಿಸುತ್ತಿದ್ದೀರಾ..?’; ಹಿಂದಿ ಹೇರಿಕೆ ವಿರುದ್ಧ ವಾಗ್ದಾಳಿ ಮುಂದುವರಿಸಿದ ಕಮಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...