Homeಕರ್ನಾಟಕವಕ್ಫ್ ಒತ್ತುವರಿ ತೆರವು ನೋಟಿಸ್ ಜಾರಿ ಮಾಡಿದರೆ ಕ್ರಮ | ಬಿಜೆಪಿ ಒತ್ತಡಕ್ಕೆ ಮಣಿದ ಕಾಂಗ್ರೆಸ್...

ವಕ್ಫ್ ಒತ್ತುವರಿ ತೆರವು ನೋಟಿಸ್ ಜಾರಿ ಮಾಡಿದರೆ ಕ್ರಮ | ಬಿಜೆಪಿ ಒತ್ತಡಕ್ಕೆ ಮಣಿದ ಕಾಂಗ್ರೆಸ್ ಸರ್ಕಾರ?

- Advertisement -
- Advertisement -

ಭೂ ಮ್ಯುಟೇಶನ್ ದಾಖಲೆಗಳನ್ನು ಬದಲಾಯಿಸುವ ಮತ್ತು ವಕ್ಫ್ ಕಾಯ್ದೆಯಡಿ ರೈತರಿಗೆ ಒತ್ತುವರಿ ತೆರವು ನೋಟಿಸ್ ನೀಡುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಸಿದೆ. ಕರ್ನಾಟಕ ವಕ್ಫ್ ಮಂಡಳಿಯ ಪರವಾಗಿ ಕೆಲವು ಭೂ ಆಸ್ತಿಗಳ ಬಗ್ಗೆ ಮಾಡಿರುವ ದೂರುಗಳು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸಭೆ ನಡೆಸಿದ್ದರು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಜಿಲ್ಲೆಗಳ ಎಲ್ಲಾ ಪ್ರಾದೇಶಿಕ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಪತ್ರದಲ್ಲಿ ನೆನಪಿಸಿದ್ದಾರೆ. ವಕ್ಫ್ ಒತ್ತುವರಿ

ಮ್ಯುಟೇಶನ್ ದಾಖಲೆಗಳನ್ನು ಬದಲಾಯಿಸಲು ಯಾವುದೇ ಸರ್ಕಾರಿ ಕಚೇರಿ ಅಥವಾ ಪ್ರಾಧಿಕಾರವು ಈ ಹಿಂದೆ ನೀಡಿದ್ದ ಎಲ್ಲಾ ನಿರ್ದೇಶನಗಳನ್ನು ಹಿಂಪಡೆಯಲಾಗಿದೆ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಪತ್ರದಲ್ಲಿ ತಿಳಿಸಲಾಗಿದೆ. ಈ ಹಿಂದೆ ನೀಡಲಾಗಿದ್ದ ಎಲ್ಲಾ ನೋಟಿಸ್‌ಗಳನ್ನು ಸಹ ಹಿಂಪಡೆಯಲಾಗಿದ್ದು, ಸದರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ರೈತರು ಮತ್ತು ಭೂ ಮಾಲೀಕರಿಗೆ ನವೆಂಬರ್ 7 ರಂದು ಸಲ್ಲಿಸಿದ ಹಿಂದಿನ ಪತ್ರಗಳು ಮತ್ತು ಇತ್ತೀಚಿನ ಜ್ಞಾಪನೆಗಳನ್ನು ಹಿಂಪಡೆಯಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದ ಹೊರತಾಗಿಯೂ ಜ್ಞಾಪನೆ-2 ನೋಟಿಸ್ ನೀಡಿದ ಅಧಿಕಾರಿಗಳು ಸೂಕ್ತ ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಕಟಾರಿಯಾ ತಮ್ಮ ಪತ್ರದಲ್ಲಿ ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಗಳ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನವೆಂಬರ್ 13 ರಂದು ಮೂರು ನಿರ್ಣಾಯಕ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನಲೆ ರಾಜ್ಯದಲ್ಲಿ ಹೊಸ ನಿರ್ದೇಶನವನ್ನು ನೀಡಲಾಗಿದೆ. ಉತ್ತರ ಕರ್ನಾಟಕದ ವಿಜಯಪುರದ ಹೊನವಾಡ ಗ್ರಾಮದ ಕೆಲವು ರೈತರು ವಕ್ಫ್‌ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದು, ಅದನ್ನು ತೆರವು ಮಾಡಬೇಕು ಎಂದು ಕಳೆದ ತಿಂಗಳು ವಕ್ಫ್ ಮಂಡಳಿಯು ತೆರವು ನೋಟಿಸ್ ನೀಡಿತ್ತು. ಇದರ ನಂತರ ರಾಜ್ಯದಾದ್ಯಂತ ವಿವಾದ ಸೃಷ್ಟಿಯಾಗಿದ್ದು, ಇದೇ ರೀತಿ ದೂರುಗಳು ರಾಜ್ಯದ ಇತರ ಕೆಲವು ಭಾಗಗಳಿಂದ ಬಂದಿದ್ದವು.

ಅಕ್ಟೋಬರ್ 25 ರಂದು, ಬಿಜೆಪಿ ಮುಖಂಡ ತೇಜಸ್ವಿ ಸೂರ್ಯ ರಾಜ್ಯ ವಕ್ಫ್ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್ ಅವರು ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಅಧಿಕಾರಿಗಳಿಗೆ ವಕ್ಫ್ ಬೋರ್ಡ್ ಪರವಾಗಿ ಜಮೀನುಗಳನ್ನು 15 ದಿನಗಳಲ್ಲಿ ನೋಂದಾಯಿಸಲು ಸೂಚಿಸಿದ್ದಾರೆ ಎಂದು ಆರೋಪಿಸಿದ್ದರು. ಇದು ತೀವ್ರ ವಿವಾದವಾಗಿ ಮಾರ್ಪಾಡಾಗಿತ್ತು.

ಸೂರ್ಯ ಅವರ ಕೋರಿಕೆಯ ಮೇರೆಗೆ, ವಕ್ಫ್ (ತಿದ್ದುಪಡಿ) ಮಸೂದೆಯ ಸಂಸತ್ತಿನ ಜಂಟಿ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರು ನವೆಂಬರ್ 7 ರಂದು ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ಹುಬ್ಬಳ್ಳಿ, ವಿಜಯಪುರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ತಮ್ಮ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಗುರುತಿಸಲಾಗಿದೆ ಎಂದು ಆರೋಪಿಸಿರುವ ರೈತರನ್ನು ಭೇಟಿ ಮಾಡಿದ್ದರು.

ಇದನ್ನೂ ಓದಿ: ‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

‘ಮಹಾರಾಷ್ಟ್ರದ ಜನರು ಇದನ್ನು ಇಷ್ಟಪಡುವುದಿಲ್ಲ..’; ಬಿಜೆಪಿಯ ‘ಬಾಟಂಗೆ ತೋ ಕಟೆಂಗೆ’ ಘೋಷಣೆ ತಿರಸ್ಕರಿಸಿದ ಅಜಿತ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...