Homeಕರ್ನಾಟಕವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ - ಸಿಎಂ...

ವಕ್ಫ್‌ ಕಬಳಿಕೆ ಬಗ್ಗೆ ಮೌನವಾಗಿರಲು 150 ಕೋಟಿ ಆಮಿಷವೊಡ್ಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ – ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

- Advertisement -
- Advertisement -

ವಕ್ಪ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದ್ದು, ಪ್ರಧಾನಮಂತ್ರಿ ಈ ಆರೋಪವನ್ನು ಗಂಭೀರವಾಗಿ ಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸುತ್ತಿದ್ದೇನೆ ಎಂದು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ವಕ್ಫ್‌ ಕಬಳಿಕೆ

ಈ ಬಗ್ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಪ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದಿ ಬಗ್ಗೆ ಮೌನವಹಿಸುವಂತೆ ಕೇಳಿಕೊಂಡಿದ್ದರು. ಮಾತ್ರವಲ್ಲ ಇದಕ್ಕಾಗಿ 150 ಕೋಟಿ ರೂಪಾಯಿಗಳ ಆಮಿಷವೊಡ್ಡಿದ್ದರು. ನಾನು ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು ಎಂದು  ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

‘‘ನಾ ಖಾವೂಂಗಾ, ನಾ ಖಾನೆ ದೂಂಗಾ’’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ, ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ? ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಕ್ಫ್‌ ಕಬಳಿಕೆ

ವಕ್ಪ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನ ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಪ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಷಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ರಾಜ್ಯ ಬಿಜೆಪಿಯ ಮಹಾಮಹಿಮರೆಲ್ಲರೂ ಷಾಮೀಲಾಗಿರುವ ಸಂಶಯ ಇದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

“ಬಿ.ಎಸ್.ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಕ್ಪ್ ಆಸ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ‍್ಯೆಯಲ್ಲಿ ನೋಟೀಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪ್ಪಾಡಿ ಅವರ ಬಾಯಿಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಷಾಮೀಲಾಗಿದ್ದಾರೆ? ವಕ್ಪ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ? ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ” ಎಂದು ಸಿಎಂ ಹೇಳಿದ್ದಾರೆ.

“ಆಶ್ಚರ್ಯದ ಸಂಗತಿಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ , ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿತ್ತು ಎಂದು ಆರೋಪಿಸಬೇಕಾಗುತ್ತದೆ” ಎಂದು ಸಿಎಂ ಹೇಳಿದ್ದಾರೆ.

“ಪ್ರಧಾನಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರದಿಂದ ಹಿಡಿದು ವಕ್ಪ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.” ಎಂದು ಸಿದ್ದರಾಮಯ್ಯ ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ | ಪ್ರತಿಭಟನಾನಿರತ ರೈತರ ಮೇಲೆ ಮತ್ತೊಮ್ಮೆ ಅಶ್ರುವಾಯು, ಜಲಫಿರಂಗಿ ಪ್ರಯೋಗಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...