Homeಕರ್ನಾಟಕವಕ್ಫ್ ಜಟಾಪಟಿ : ಪ್ರಣಾಳಿಕೆಯಲ್ಲಿ ಒತ್ತುವರಿ ತೆರವು ಭರವಸೆ ನೀಡಿತ್ತು ಬಿಜೆಪಿ

ವಕ್ಫ್ ಜಟಾಪಟಿ : ಪ್ರಣಾಳಿಕೆಯಲ್ಲಿ ಒತ್ತುವರಿ ತೆರವು ಭರವಸೆ ನೀಡಿತ್ತು ಬಿಜೆಪಿ

- Advertisement -
- Advertisement -

ರಾಜ್ಯದಲ್ಲಿ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಕಬಳಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸರ್ಕಾರದ ವಿರುದ್ದ ಮುಗಿಬಿದ್ದಿದ್ದಾರೆ. ಇದರಿಂದ ಭೂ ವ್ಯಾಜ್ಯವೊಂದು ಕೋಮು ಆಯಾಮ ಪಡೆದುಕೊಂಡಿದೆ.

ಬಿಜೆಪಿ ನಾಯಕರ ಆರೋಪಗಳಿಗೆ ಸರ್ಕಾರದ ಕಡೆಯಿಂದ ಸಿಎಂ ಆದಿಯಾಗಿ ಸಚಿವರು ಸ್ಪಷ್ಟನೆ ಕೊಟ್ಟರೂ, ರೈತರಿಗೆ ನೋಟಿಸ್ ಕೊಟ್ಟಿದ್ದರೆ ವಾಪಸ್ ಪಡೆಯುವುದಾಗಿ ಸರ್ಕಾರ ಹೇಳಿದ್ದರೂ, ಬಿಜೆಪಿ ಪ್ರತಿಭಟನೆ ನಡೆಸುದಾಗಿ ಹೇಳಿದೆ. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ ಜಾರಿಗೊಳಿಸಲು ಮುಂದಾಗಿರುವುದು, ಅದಕ್ಕೆ ದೇಶದಾದ್ಯಂತ ವಿರೋಧ ವ್ಯಕ್ತವಾಗಿರುವಾಗ ಕರ್ನಾಟಕದಲ್ಲಿ ವಕ್ಫ್ ಜಮೀನು ವಿಚಾರ ಮುನ್ನಲೆಗೆ ತಂದಿರುವ ಬಿಜೆಪಿ, ವಕ್ಫ್ ಬೋರ್ಡ್‌ಗಳನ್ನೇ ರದ್ದುಗೊಳಿಸಬೇಕು ಎಂದು ಅಗ್ರಹಿಸುತ್ತಿದೆ.

ಆದರೆ, ಇದೇ ಬಿಜೆಪಿ 2014ರ ಲೋಕಸಭೆ ಚುನಾವಣೆಯ ತನ್ನ ಪ್ರಣಾಳಿಕೆಯಲ್ಲಿ ಒತ್ತುವರಿಯಾಗಿರುವ ವಕ್ಫ್‌ ಭೂಮಿಯನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿತ್ತು.

ಬಿಜೆಪಿ ಪ್ರಣಾಳಿಕೆಯ 17ನೇ ಪುಟದಲ್ಲಿ ‘ಅಲ್ಪಸಂಖ್ಯಾತರು-ಸಮಾನ ಅವಕಾಶ‘ ಎಂಬ ಶೀರ್ಷಿಕೆಯಡಿ “ಧಾರ್ಮಿಕ ನಾಯಕರ ಜೊತೆ ಸಮಾಲೋಚನೆ ನಡೆಸಿ ವಕ್ಫ್ ಮಂಡಳಿಗಳ ಸಬಲೀಕರಣ ನಡೆಸಲಾಗುವುದು. ಅನಧಿಕೃತವಾಗಿ ಒತ್ತುವರಿಯಾಗಿರುವ ವಕ್ಫ್‌ ಜಮೀನುಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಸ್ಪಷ್ಟವಾಗಿ ಹೇಳಿದೆ.

ಅಲ್ಲಿಯೇ ಕೆಳಗಿನ ಪ್ಯಾರಾದಲ್ಲಿ “ಅಲ್ಪ ಸಂಖ್ಯಾತರ ಸಂಸ್ಕೃತಿ ಮತ್ತು ಸ್ಮಾರಕಗಳನ್ನು ರಕ್ಷಣೆ ಮಾಡಲಾಗುವುದು. ಉರ್ದು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ ಮಾಡಲಾಗುವುದು” ಎಂದು ಭರವಸೆ ಕೊಟ್ಟಿರುವುದು ಗಮನಾರ್ಹ.

ಇಲ್ಲಿ ಬಿಜೆಪಿ ಕೊಟ್ಟ ಭರವಸೆಗಳು ತಪ್ಪು ಎಂದಲ್ಲ. ಆದರೆ, ಇದೇ ಬಿಜೆಪಿ ನಾಯಕರು ಕರ್ನಾಟಕ ಸರ್ಕಾರದ ವಕ್ಫ್ ಸಚಿವರಾದ ಝಮೀರ್ ಅಹ್ಮದ್ ಅವರು ವಕ್ಫ್ ಭೂ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ವಕ್ಫ್ ಅದಾಲತ್ ನಡೆಸಿರುವುದನ್ನು ಮತ್ತು ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿರುವುದನ್ನು ವಿರೋಧಿಸಿ, ಅದಕ್ಕೆ ಕೋಮು ಬಣ್ಣ ಬಳಿದಿರುವುದು ವಿಪರ್ಯಾಸ.

ಪ್ರಸ್ತುತ ವಕ್ಫ್ ವಿಚಾರದಲ್ಲಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ “ವಕ್ಫ್ ಅಲ್ಲಾಹನ ಆಸ್ತಿ, ಅದು ಸಮುದಾಯದ ಏಳಿಗಾಗಿ ನೀಡಿರುವ ಸ್ವತ್ತು. ಅದನ್ನು ಅತಿಕ್ರಮಣ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು” ಎಂದಿದ್ದರು.

ಬೊಮ್ಮಾಯಿ ಅವರ ಹಳೆಯ ಹೇಳಿಕೆಯ ವಿಡಿಯೋವನ್ನು ಕೆಲ ಮಾಧ್ಯಮಗಳು ಪ್ರಸಾರ ಮಾಡಿದಾಗ, “ಸಚಿವರಾದ ಝಮೀರ್ ಅಹ್ಮದ್ ಅವರು ನಾನು ವಕ್ಪ್ ಬೋರ್ಡ್ ಸಮಾರಂಭದಲ್ಲಿ ಮಾತನಾಡಿರುವ ಹಳೆಯ ವಿಡಿಯೋ ಹರಿಬಿಟ್ಟು ಅಪಪ್ರಚಾರ ಮಾಡುತ್ತಿದ್ದಾರೆ” ಎಂದು ಹೇಳುತ್ತಿದ್ದಾರೆ.

ಒಟ್ಟಿನಲ್ಲಿ, ವಕ್ಫ್ ಜಮೀನು ವಿಚಾರದಲ್ಲಿ ರಾಜಕೀಯ ನಾಯಕರು ನೀಡುತ್ತಿರುವ ಹೇಳಿಕೆಗಳು ಸಮಸ್ಯೆಗಳನ್ನು ಇತ್ಯರ್ಥಪಡಿಸುವ ಬದಲು, ಪರಸ್ಪರ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ಜೊತೆಗೆ ಸಿವಿಲ್ ವ್ಯಾಜ್ಯಕ್ಕೆ ಕೋಮು ಬಣ್ಣ ನೀಡಿದೆ.

ಇದನ್ನೂ ಓದಿ : ದೊಡ್ಡಬಳ್ಳಾಪುರ | ದೀಪಾವಳಿ ಹಬ್ಬದಂದೇ ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...