Homeಮುಖಪುಟವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

ವಕ್ಫ್ ಸಭೆಯಲ್ಲಿ ಅಧ್ಯಕ್ಷರತ್ತ ಎಸೆದು ಬಾಟಲಿ ಎಸೆದ ಕಲ್ಯಾಣ್ ಬ್ಯಾನರ್ಜಿ ಸಮಿತಿಯಿಂದ ಅಮಾನತು

- Advertisement -
- Advertisement -

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯಿಂದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ನಡೆದ ಸಭೆಯಲ್ಲಿ ಬಿಜೆಪಿಯ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ನಡೆದ ವಾಕ್ಸಮರ ನಡೆಸಿದ್ದರು. ಈ ವೇಳೆ ಅವರು ಗಾಜಿನ ನೀರಿನ ಬಾಟಲಿಯನ್ನು ಒಡೆದು ಕುರ್ಚಿಯತ್ತ ಎಸೆದಿದ್ದರು. ಹಾಗಾಗಿ ಅವರ ಬೆರಳುಗಳಿಗೆ ಗಾಯವಾಗಿತ್ತು.

ಸಮಿತಿಯ ಅಧ್ಯಕ್ಷ ಮತ್ತು ಹಿರಿಯ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ಅವರು ಸಂಸದ ಕಲ್ಯಾಣ್ ಬ್ಯಾನರ್ಜಿ ಅವರ ನಡವಳಿಕೆಯನ್ನು ಖಂಡಿಸಿದ್ದಾರೆ. ಅಂತಹ ಕ್ರಮಗಳು “ಗಂಭೀರವಾಗಿದ್ದು” ಎಲ್ಲಾ ಮಿತಿಗಳನ್ನು ದಾಟಿವೆ ಎಂದು ಅವರು ಹೇಳಿದ್ದಾರೆ. “ಸಂಸದರಾಗಿ ಎಲ್ಲರೂ ಸವಲತ್ತುಗಳನ್ನು ಅನುಭವಿಸುತ್ತಾರೆ, ನಾಳೆ ಯಾರಾದರೂ ರಿವಾಲ್ವರ್‌ನೊಂದಿಗೆ ಕಾಣಿಸಿಕೊಂಡರೆ ಏನರ್ಥ?, ನಾನು ಸ್ವಲ್ಪದರಲ್ಲೇ ಪಾರಾಗಿದೆ” ಎಂದು ಜಗದಾಂಬಿಕ ಪಾಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಮಿತಿಯ ಸಭೆಯಲ್ಲಿ, ಕಲ್ಯಾಣ್ ಬ್ಯಾನರ್ಜಿ ಅವರು ಬಿಜೆಪಿ ಸಂಸದ ಅಭಿಜಿತ್ ಗಂಗೋಪಾಧ್ಯಾಯ ಅವರೊಂದಿಗೆ ವಾಕ್ಸಮರ ನಡೆಸಿದ್ದು, ಇಬ್ಬರೂ ಬಂಗಾಳಿ ಭಾಷೆಯಲ್ಲಿ ಪರಸ್ಪರ ದಾಳಿ ಮಾಡಿದ್ದಾರೆ ಎಂದು ವರದಿಯಾಗಿದೆ. ವಿರೋಧ ಪಕ್ಷದ ಸದಸ್ಯರು ಘಟನೆಗೆ ಅಭಿಜಿತ್ ಅವರನ್ನು ಗುರಿಯಾಗಿಸಿದ್ದಾರೆ.

ಘರ್ಷಣೆಯಲ್ಲಿ ಕಲ್ಯಾಣ್ ಬ್ಯಾನರ್ಜಿ ಅವರ ಹೆಬ್ಬೆರಳು ಮತ್ತು ತೋರುಬೆರಳಿಗೆ ಗಾಯವಾಗಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರು ಸಭೆಯ ಕೋಣೆಗೆ ಮರಳಿ ಕರೆದೊಯ್ದರು.

ಘಟನೆಯ ಕಾರಣಕ್ಕೆ ಅವರ ವಿರುದ್ಧ ಕ್ರಮಕೈಗೊಳ್ಳಲು, ಮುಂದಿನ ಸಭೆ ನಡೆಯುವಾಗ ಕಲ್ಯಾಣ್ ಬ್ಯಾನರ್ಜಿ ಅವರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸುವಂತೆ ಬಿಜೆಪಿ ಸದಸ್ಯರೊಬ್ಬರು ಸೂಚಿಸಿದ್ದಾರೆ. ಇದಕ್ಕೆ ಆಡಳಿತಾರೂಢ ಮೈತ್ರಿಕೂಟ ಮತ್ತು ವಿರೋಧ ಪಕ್ಷದ ಸದಸ್ಯರು ಪಕ್ಷಾತೀತವಾಗಿ ಮತ ಚಲಾಯಿಸಿದ್ದು 10-8 ಮತಗಳು ಚಲಾವಣೆಯಾಗಿವೆ.

ಓದಿ: ಕಳೆದ 24 ಗಂಟೆಗಳಲ್ಲಿ 79 ವಿಮಾನಗಳಿಗೆ ಬಾಂಬ್ ಬೆದರಿಕೆ; ಕಳೆದ ವಾರದಿಂದ 160 ಬೆದರಿಕೆ ಕರೆಗಳು

ಈ ನಡುವೆ ಕಲ್ಯಾಣ್ ಬ್ಯಾನರ್ಜಿ ಅವರು ಬಾಟಲಿ ಒಡೆದಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದು, ತಾನು ಅದನ್ನು ಜಗದಾಂಬಿಕ ಪಾಲ್ ಕಡೆಗೆ ಎಸೆಯಲು ಎಂದಿಗೂ ಉದ್ದೇಶಿಸಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಆದರೆ ಅವರು “ಪಕ್ಷಪಾತ” ವರ್ತನೆ ತೋರುತ್ತಿದ್ದಾರೆ ಎಂದು ಅವರು  ಆರೋಪಿಸಿದ್ದಾರೆ.

ಕಲ್ಯಾಣ್ ಬ್ಯಾನರ್ಜಿ ಅವರಿಗೆ ಕೇವಲ ಒಂದು ದಿನದ ಅಮಾನತು ಶಿಕ್ಷೆಯನ್ನು ನೀಡಿದ್ದನ್ನು ಅಭಿಜಿತ್ ಗಂಗೋಪಾಧ್ಯಾಯ ಅವರು ಆಕ್ಷೇಪ ವ್ಯಕ್ತಪಡಿಸಿದ್ದು, ಕಲ್ಯಾಣ್ ಬ್ಯಾನರ್ಜಿ ಅವರು ತನ್ನ ಮೇಲೆ ನಡೆಸಿದ ಮೌಖಿಕ ದಾಳಿಯ ಬಗ್ಗೆ ಯಾವುದೆ ಪ್ರಸ್ತಾಪ ಮಾಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಈ ಪ್ರಕಣವನ್ನು ಉನ್ನತ ಮಟ್ಟದಲ್ಲಿ ವ್ಯವಹರಿಸುವ ಆಗ್ರಹಿಸುವ ಸಾಧ್ಯತೆಯಿದೆ ಎಂದು ಮೂಲವೊಂದು ತಿಳಿಸಿದೆ.

ವಕ್ಫ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸದೀಯ ಸಮಿತಿಯ ಸಭೆಯಲ್ಲಿ ಆಗಾಗ್ಗೆ ವಿರೋಧ ಪಕ್ಷದ ಸದಸ್ಯರೊಂದಿಗೆ ವಾಕ್ಸಮರ ನಡೆಯುತ್ತಲೆ ಇವೆ. ಸಮಿತಿಯ ಅಧ್ಯಕ್ಷರು, ವಕ್ಫ್ ಸಮಸ್ಯೆಗಳಲ್ಲಿ ಯಾವುದೇ ಪಾಲು ಇಲ್ಲದ ಹಿಂದೂಗಳ ಪರವಾಗಿ ಕೆಲಸ ಮಾಡುವವರು ಸೇರಿದಂತೆ ವಿವಿಧ ಸಂಘಟನೆಗಳನ್ನು ಸಭೆಗೆ ಆಹ್ವಾನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಓದಿ: ಬಾಂಗ್ಲಾ ಲೇಖಕಿ ತಸ್ಲೀಮಾ ನಸ್ರೀನ್ ‘ವಾಸದ ಪರವಾನಗಿ’ ನವೀಕರಿಸಿದ ಕೇಂದ್ರ ಸರ್ಕಾರ?

ಮಂಗಳವಾರ ಸಮಿತಿಯು ಒಡಿಶಾ ಮೂಲದ ಎರಡು ಸಂಸ್ಥೆಗಳಾದ ಜಸ್ಟೀಸ್ ಇನ್ ರಿಯಾಲಿಟಿ ಮತ್ತು ಪಂಚಸಖ ಬನಿ ಪ್ರಚಾರ್ ಅವರ ಅಭಿಪ್ರಾಯಗಳನ್ನು ಆಲಿಸುತ್ತಿತ್ತು. ಇವೆರಡೂ ಸಂಘಟನೆಗಳು ನಿವೃತ್ತ ನ್ಯಾಯಾಧೀಶರು ಮತ್ತು ವಕೀಲರನ್ನು ಒಳಗೊಂಡಿವೆ. ಈ ಎರಡೂ ಸಂಸ್ಥೆಗಳು ತಿದ್ದುಪಡಿಗಳನ್ನು ಬೆಂಬಲಿಸಿದ್ದು, ಹೆಚ್ಚಿನ ಸಲಹೆಗಳನ್ನು ನೀಡಿವೆ.

ಮುಂಗಾರು ಅಧಿವೇಶನದಲ್ಲಿ ಲೋಕಸಭೆಯಲ್ಲಿ ಮಂಡಿಸಲಾದ ಕೂಡಲೇ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಪರಿಶೀಲನೆಗಾಗಿ ಸದನಗಳ ಜಂಟಿ ಸಮಿತಿಗೆ ನೀಡಲಾಗಿತ್ತು.

ವಕ್ಫ್ ಮಂಡಳಿಗಳನ್ನು ನಿಯಂತ್ರಿಸುವ ಕಾನೂನನ್ನು ಈ ಮಸೂದೆ ತಿದ್ದುಪಡಿ ಮಾಡುತ್ತಿದೆ. ವಕ್ಪ್ ಆಡಳಿತದಲ್ಲಿ ಮುಸ್ಲಿಂ ಮಹಿಳೆಯರು ಮತ್ತು ಮುಸ್ಲಿಮೇತರರ ಪ್ರಾತಿನಿಧ್ಯವನ್ನು ತಿದ್ದುಪಡಿಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿದು ಮೂವರು ಸಾವು; 17 ಕಾರ್ಮಿಕರು ಅಪಾಯದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...