Homeಮುಖಪುಟ‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ...”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

‘ವಿಶ್ವವಿದ್ಯಾಲಯದ ವಿರುದ್ಧ ಯುದ್ಧ…”: ರಾಜ್ಯಪಾಲರ ಆದೇಶಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್

- Advertisement -
- Advertisement -

ಒಂಬತ್ತು ವಿಶ್ವವಿದ್ಯಾಲಯಗಳ ಉಪಕುಲಪತಿಗಳಿಗೆ ತಮ್ಮ ಸ್ಥಾನವನ್ನು ತ್ಯಜಿಸುವಂತೆ ಕೇಳಿಕೊಂಡಿದ್ದ ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರ ವಿವಾದಾತ್ಮಕ ನಿರ್ದೇಶನವನ್ನು ಪ್ರಶ್ನಿಸಿ ಪಿಣರಾಯಿ ವಿಜಯನ್ ನೇತೃತ್ವದ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿಗಳನ್ನು ಪರಿಗಣಿಸುವ ಬಗ್ಗೆ ಕೇರಳ ಹೈಕೋರ್ಟ್ ಇಂದು ಸಂಜೆ ವಿಶೇಷ ವಿಚಾರಣೆ ನಡೆಸಲಿದೆ.

ಹಿಂದಿನ ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲೇಖಿಸಿರುವ ರಾಜ್ಯಪಾಲ ಆರಿಫ್‌ ಖಾನ್ ಅವರು ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ನೇಮಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ಹೊಂದಿಲ್ಲ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜ್ಯಪಾಲರ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲರು ರಾಜ್ಯದ ವಿಶ್ವವಿದ್ಯಾನಿಲಯಗಳನ್ನು ‘ನಾಶಮಾಡುವ’ ಉದ್ದೇಶದಿಂದ ಯುದ್ಧ ನಡೆಸುತ್ತಿದ್ದು, ಸಂಘ ಪರಿವಾರದ ನಾಯಕನಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ವಿಶ್ವವಿದ್ಯಾಲಯಗಳ ಉಪಕುಲಪತಿ ನೇಮಕದಲ್ಲಿ ರಾಜ್ಯಪಾಲರ ಅಧಿಕಾರ ಕಡಿತಗೊಳಿಸುವ ಮಸೂದೆ ಅಂಗೀಕರಿಸಿದ ತಮಿಳುನಾಡು

ರಾಜ್ಯಪಾಲರ ಈ ಕ್ರಮವು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರದ ಅಧಿಕಾರ ಮತ್ತು ಶೈಕ್ಷಣಿಕವಾಗಿ ಸ್ವತಂತ್ರವಾಗಿರಬೇಕಾದ ವಿಶ್ವವಿದ್ಯಾಲಯಗಳ ಮೇಲಿನ ಅತಿಕ್ರಮಣವಾಗಿದೆ ಎಂದು ಮುಖ್ಯಮಂತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳ ಸರ್ಕಾರವು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಉಪಕುಲಪತಿಗಳನ್ನು ತಮ್ಮದೇ ನಿರ್ಧಾರದ ಮೇಲೆ ನೇಮಕ ಮಾಡಿತ್ತು. ಆದರೆ ಇದನ್ನು ವಿರೋಧಿಸಿರುವ ರಾಜ್ಯಪಾಲರು, ಉಪ ಕುಲಪತಿಗಳನ್ನು ನೇಮಿಸುವುದು ತಮ್ಮ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.

ಕೇರಳ ವಿಶ್ವವಿದ್ಯಾಲ, ಮಹಾತ್ಮ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ತ್‌‌ ಎಳುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ ಉಪ ಕುಲಪತಿಗಳಿಗೆ ತಮ್ಮ ಸ್ಥಾನಗಳನ್ನು ತೊರೆಯುವಂತೆ ರಾಜ್ಯಪಾಲರು ಕೇಳಿದ್ದಾರೆ.

ರಾಜ್ಯಪಾಲರ ಈ ತೀರ್ಮಾನದ ವಿರುದ್ಧ ಆಡಳಿತರೂಢ ಎಡ ಡೆಮಾಕ್ರಟಿಕ್ ಫ್ರಂಟ್ ಮುಂದಿನ ತಿಂಗಳು ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಭಾರಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಇದನ್ನೂ ಓದಿ: ಹಂಪಿಯ ಕನ್ನಡ ವಿಶ್ವವಿದ್ಯಾಲಯ ಅಧೋಗತಿಯ ಹಾದಿ ಹಿಡಿದದ್ದು ಹೇಗೆ?

“ಇಂತಹ ನಿರ್ದೇಶನವನ್ನು ನೀಡಲು ರಾಜ್ಯಪಾಲರಿಗೆ ಯಾವುದೇ ಅಧಿಕಾರವಿಲ್ಲ. ಇದು ಅನಿಯಂತ್ರಿತವಾಗಿದ್ದು, ಕಾನೂನು ಬಾಹಿರ ಮತ್ತು ರಾಜಕೀಯ ಪ್ರೇರಿತವಾಗಿದೆ. ಅವರು ಕೇರಳದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಮತ್ತು ನಾಶಮಾಡಲು ಬಯಸುತ್ತಾರೆ” ಎಂದು ಸಿಪಿಐ (ಎಂ) ನಾಯಕ ಸೀತಾರಾಮ್ ಯೆಚೂರಿ ಹೇಳಿದ್ದಾರೆ.

“ಆರೆಸ್ಸೆಸ್ಸ್‌‌ ಕಾರ್ಯಕರ್ತರನ್ನು ನೇಮಿಸಿ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ನಿಯಂತ್ರಿಸಲು ಅವರು ಬಯಸಿದ್ದು, ಈ ಮೂಲಕ  ಶಿಕ್ಷಣ ಸಂಸ್ಥೆಗಳಲ್ಲಿ ಹಿಂದುತ್ವ ಸಿದ್ಧಾಂತವನ್ನು ಪ್ರಚಾರ ಮಾಡಲು ಹೊರಟಿದ್ದಾರೆ. ಸಂವಿಧಾನವು ಅಂತಹ ಯಾವುದೇ ಆದೇಶವನ್ನು ನೀಡಲು ರಾಜ್ಯಪಾಲರಿಗೆ ಅನುಮತಿ ನೀಡದ ಕಾರಣ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನೆ ಮಾಡಲಾಗುತ್ತದೆ” ಅವರು ಹೇಳಿದ್ದಾರೆ.

ಕೇರಳ ರಾಜ್ಯಪಾಲರು ನಿರಂತರವಾಗಿ ರಾಜ್ಯ ಸರ್ಕಾರದ ಜೊತೆಗೆ ಸಂಘರ್ಷ ನಡೆಸುತ್ತಲೆ ಬಂದಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರ ವಿರುದ್ಧದ ತಮ್ಮ ದಾಳಿಯನ್ನು ತೀವ್ರಗೊಳಿಸಿದ್ದು,“ಪ್ರಜಾಪ್ರಭುತ್ವವನ್ನು ಗೌರವಿಸುವ ಯಾರೂ ಇಂತಹ ಅತಿಯಾದ ಪ್ರವೃತ್ತಿಯನ್ನು ಸ್ವೀಕರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಿವೃತ್ತ ಉಪ-ಕುಲಪತಿ ಸೇರಿದಂತೆ ಹಲವು ನಿವೃತ್ತ ಪ್ರಾಧ್ಯಾಪಕರ ಲಕ್ಷಾಂತರ ರೂ. ಪಿಂಚಣಿ ಸಂದಾಯ ಮಾಡದ ಹಂಪಿ ಕನ್ನಡ ವಿಶ್ವವಿದ್ಯಾಲಯ

ರಾಜ್ಯಪಾಲರ ಕಚೇರಿ ಇರುವುದು ರಾಜ್ಯ ಸರ್ಕಾರವನ್ನು ಬಿಕ್ಕಟ್ಟಿಗೆ ಸಿಲುಕಿಸಲೊ ಅಥವಾ ಸರ್ಕಾರದ ವಿರುದ್ಧ ಕ್ರಮ ಕೈಗೊಳ್ಳಲು ಇರುವುದು ಅಲ್ಲ. ಸಂವಿಧಾನವು ರಾಜ್ಯಪಾಲರಿಗೆ ನೀಡಿದ ಅಧಿಕಾರ ಮತ್ತು ಕರ್ತವ್ಯ ರಾಜ್ಯ, ಜನರು ಮತ್ತು ಸಂವಿಧಾನದ ಘನತೆಯನ್ನು ಕಾಪಾಡುವುದಾಗಿದೆ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಮತ್ತು ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ “ಸಂಘ ಪರಿವಾರ ಹಸ್ತಕ್ಷೇಪ” ನಡೆಸಿದೆ ಎಂದು ಪಿಣರಾಯಿ ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...