Homeಕರ್ನಾಟಕವಾರ್ ಅಂಡ್ ಪೀಸ್ ಬರೆಯುವವರೇ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ...

ವಾರ್ ಅಂಡ್ ಪೀಸ್ ಬರೆಯುವವರೇ ಗಮನಿಸಿ ಪ್ಲೀಸ್, ಗದಗಿಗೂ ಬಂತು ಎಚ್ಚರವಿರಲಿ…

- Advertisement -
- Advertisement -

ಮೊನ್ನೆ ರಾತ್ರಿ 11 ಗಂಟೆ ಹೊತ್ತು. ಮೈಸೂರಿನ ಕುವೆಂಪು ನಗರದ ಪೊಲೀಸ್ ಠಾಣೆಯ ಪೊಲೀಸರು ಗದಗಿನ ಒಂದು ಪುಸ್ತಕ ಪ್ರಕಾಶನದ ಪುಟ್ಟ ಆಫೀಸಿನ ಬಾಗಿಲು ಬಡಿದರು!

ಅಲ್ಲಿಗೆ ನ್ಯಾಯಾಧೀಶರ ವಾರ್ ಅ್ಯಂಡ್ ಪೀಸ್ ಅಜ್ಞಾನ ಪೊಲೀಸರ ಮೂಲಕ ಮೈಸೂರಿನಿಂದ 500 ಕಿ.ಮೀ ದೂರದ ಗದಗಿಗೂ ಬಂತು. ಮಧ್ಯ ಅದು ಬೆಂಗಳೂರು ದಾಟಿಯೇ ಬಂತು!

ಹೊಸ ಸರ್ಕಾರದ ಬಂದಿದೆ. ಈಗಷ್ಟೇ ಆಟ ಶುರುವಾಗಿದೆ, ಬರಹಗಾರರು, ಪ್ರಕಾಶಕರು ಮತ್ತು ಜನಸ್ನೇಹಿ ಪತ್ರಕರ್ತರು ಎಚ್ಚೆತ್ತುಕೊಳ್ಳುವ ಸಮಯವಿದು.

ಪ್ರಗತಿಪರ ನಿಲುವಿನ ವಿಚಾರಧಾರೆಗಳನ್ನು ಪ್ರಕಟಿಸುತ್ತ ಬಂದಿರುವ ಗದಗಿನ ಲಡಾಯಿ ಪ್ರಕಾಶನದ ಬಸವರಾಜ ಸೂಳಿಭಾವಿರವರ ವಿಚಾರಣೆಗೆ ರಾತ್ರಿ 11 ಗಂಟೆಗೆ ಆಗಮಿಸುವ ಮೈಸೂರು ಪೊಲೀಸರು, ಪುಸ್ತಕವೊಂದರ ಬಗ್ಗೆ ವಿಚಾರಣೆ ನಡೆಸಿ, ಪ್ರಕಾಶಕರು ಎರಡು ಮೂರು ದಿನದಲ್ಲಿ ಮೈಸೂರಿನ ಪೊಲೀಸ್ ಸ್ಟೇಷನ್‍ಗೆ ವಿಚಾರಣೆಗೆ ಬರಬೇಕು ಎಂದು ಆದೇಶ ಮಾಡಿ ಹೋಗಿದ್ದಾರೆ!

‘ರಾಮ ಮಂದಿರ ಏಕೆ ಬೇಡ?’ ಎಂಬ ಪುಸ್ತಕವನ್ನು ಮೈಸೂರಿನ ಕೆ.ಎಸ್ ಭಗವಾನ್ ಬರೆದಿದ್ದರು. ಅದನ್ನು ಕಳೆದ ವರ್ಷ ಬಸವರಾಜ ಸೂಳಿಭಾವಿ (ಬಸೂ) ಅವರ ಲಡಾಯಿ ಪ್ರಕಾಶನ ಪ್ರಕಟಿಸಿತು. ಹೋದ ವರ್ಷದ ಡಿಸೆಂಬರ್ ನಲ್ಲಿ ಆ ಪುಸ್ತಕದ ಎರಡನೇ ಮುದ್ರಣ ಹಾಕಿದ ಭಗವಾನ್ ಅವರು (ಇದನ್ನು ಅವರು ಲಡಾಯಿ ಪ್ರಕಾಶನದ ಅನುಮತಿ ಪಡೆಯದೇ ಮಾಡಿದರು ಎಂಬ ಆರೋಪವಿದೆ, ಅದು ಬೇರೆ ವಿಷಯ), ಅದರ ಬಿಡುಗಡೆ ಸಮಾರಂಭದಲ್ಲಿ ‘ಪ್ರಚೋದನಾತ್ಮಕ’ವಾಗಿ ಮಾತಾಡಿದರು ಎಂದು ಒಬ್ಬರು ದೂರು ನೀಡಿದ್ದರು.

ಇಲ್ಲಿವರೆಗೆ ಸುಮ್ಮನಿದ್ದ ಪೊಲೀಸರು ದಿಢೀರ್ ಅಂತಾ ಅಲರ್ಟ್ ಆಗಿಬಿಟ್ಟು ಮೈಸೂರಿಂದ ಗದಗಿಗೆ ಬಂದು ರಾದ್ಧಾಂತ ಮಾಡಿ ಹೋಗಿದ್ದಾರೆ. ಭಗವಾನ್ ‘ಪ್ರಚೋದನಾತ್ಮಕ’ವಾಗಿ ಮಾತಾಡಿದ್ದರೆ ಅವರನ್ನೇ ಅದೇ ಮೈಸೂರಲ್ಲಿ ವಿಚಾರಿಸಬೇಕಿತ್ತಲ್ಲ? ಅದು ಬಿಟ್ಟು ಪುಸ್ತಕ ಮೊದಲ ಬಾರಿಗೆ ಆ ಪ್ರಕಟಿಸಿದವರ ಕಚೇರಿಗೆ ರಾತ್ರೋರಾತ್ರಿ ದಾಳಿ ಇಡುವುದು, ವಿಚಾರಣೆಗೆ ಬನ್ನಿ ಅನ್ನುವುದು ಏನನ್ನು ಸೂಚಿಸುತ್ತದೆ?
ವಾರ್ ಅ್ಯಂಡ್ ಪೀಸ್ ಶುರುವಾಗಿದೆ ಸೈಲೆಂಟ್ ಯುದ್ಧ… ಶಾಂತಿ ಅಂತಾ ಕೂತುಬಿಡೋಣವೇ ಬರಹಗಾರರೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...