Homeಕರ್ನಾಟಕಯುದ್ಧವೇ ಏಕೈಕ ಆಯ್ಕೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಯುದ್ಧವೇ ಏಕೈಕ ಆಯ್ಕೆಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ‌ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ. ಯುದ್ಧದ ಕುರಿತು ತಾವು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು.
ಪಹಲ್ಗಾಮ್ ನಲ್ಲಿ ನಡೆದ ಪಾಕ್‍ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ ಎಂದು ಅವರು ಹೇಳಿದ್ದಾರೆ.

ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಯುದ್ಧವೇ ಏಕೈಕ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...