Homeಕರ್ನಾಟಕ‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

‘ಬೆಡ್‌ ಬ್ಲಾಕ್‌’ ವಿವಾದ: ಬಿಬಿಎಂಪಿ ಜಂಟಿ ಆಯುಕ್ತ ಸರ್ಫರಾಜ್ ಖಾನ್ ಬರೆದ ಭಾವನಾತ್ಮಕ ಪತ್ರ

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ?

- Advertisement -
- Advertisement -

ಆತ್ಮೀಯ ಸ್ನೇಹಿತರೆ,

ಕೊವಿಡ್ ಪೀಡಿತರಿಗೆ ಬೆಡ್ ಹಂಚುವ BBMP ವಾರ್ ರೂಮಿನಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹೆಸರನ್ನು ಸೇರಿಸಿಕೊಂಡ ಒಂದು ಸಂದೇಶ ಓಡಾಡುತ್ತಿರುವುದು ನನಗೆ ಅಪಾರವಾದ ನೋವು ತಂದಿದೆ.

ವಾರ್ ರೂಮಿನಲ್ಲಿ ನನ್ನ ಯಾವುದೇ ಪಾತ್ರವಿಲ್ಲ ಮಾತ್ರವಲ್ಲ ಅಲ್ಲಿ ಯಾವುದೇ ವೈದ್ಯರೂ ನನಗೆ ಗೊತ್ತಿಲ್ಲ. ಹೀಗಿದ್ದರೂ ನನ್ನನ್ನೂ ಆರೋಪಿಯನ್ನಾಗಿಸಿರುವುದು ನನಗೆ ಆಘಾತ ತಂದಿದೆ.‌ ವಾರ್ ರೂಮನ್ನು ನಡೆಸುತ್ತಿರುವುದು ವಿಶೇಷ ಆರೋಗ್ಯ ಆಯುಕ್ತರು. ನನ್ನ ಕಾರ್ಯವೇನಿದ್ದರೂ BBMP ಕೊವಿಡ್ ಕೇರ್ ಸೆಂಟರ್‌ಗಳ ಉಸ್ತುವಾರಿ ಮತ್ತು ಘನ ತ್ಯಾಜ್ಯ ಇಲಾಖೆಯ ನಿರ್ವಹಣೆ.‌

ವಾರ್ ರೂಮ್ಗೆ ಬೇಕಾದ ವೈದ್ಯರು ಅಥವಾ ಸಿಬ್ಬಂದಿಯ ನೇಮಕ ಮಾಡಿಕೊಳ್ಳುವುದು ಆರೋಗ್ಯ ಇಲಾಖೆಯ ಮತ್ತು ಆಯಾ ಬಿಬಿಎಂಪಿ ವಲಯಗಳ ಕೆಲಸವಾಗಿದೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಈ ವಿಷಯಕ್ಕೆ ಕೋಮು ಬಣ್ಣ ಹಚ್ಚಿರುವುದು ಮತ್ತು ಅದರಲ್ಲಿ ಆ ಇಲಾಖೆಗೆ ಯಾವ ರೀತಿಯಲ್ಲಿಯೂ ಸಂಬಂಧವೇ ಇರದ ನನ್ನ ಹೆಸರು ಸೇರಿಸಿರುವುದು ನನಗೆ ನಿಜಕ್ಕೂ ನೋವು ತಂದಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ಎಲ್ಲಾ ಕೊವಿಡ್ ಕೇರ್ ಕೇಂದ್ರಗಳಿಗೆ ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರುಗಳನ್ನು ವ್ಯವಸ್ಥೆ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಲು ನಾನು ಹಗಲು ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದೇನೆ.

ಹಜ್ ಭವನವನ್ನು 140 ಬೆಡ್ ವ್ಯವಸ್ಥೆಯುಳ್ಳ ಆಕ್ಸಿಜನ್ ಸೌಲಭ್ಯವುಳ್ಳ ಕೊವಿಡ್ ಕೇರ್ ಕೇಂದ್ರವಾಗಿ ನಾನು ಪರಿವರ್ತಿಸಿದ್ದೇನೆ.‌ ಅಷ್ಟಲ್ಲದೇ ಹಜ್ ಕಮಿಟಿ ನಿಧಿಯಿಂದಲೇ 50 ICU ಗಳನ್ನು ಇಲ್ಲಿ ಹಾಕಿಸಿದ್ದೇನೆ.
ನಾನು ಹೇಳ ಬಯಸುವುದೇನೆಂದರೆ ಈ ಹಜ್ ಭವನದಲ್ಲಿ ಸೇರಿಸಿಕೊಂಡು ಆರೈಕೆ ಮಾಡುತ್ತಿರುವ ಕೊವಿಡ್ ರೋಗಿಗಳಲ್ಲಿ 90% ರೋಗಿಗಳು ಇತರೆ ಧರ್ಮದ ನನ್ನ ಸಹೋದರರಾಗಿದ್ದಾರೆ, ಕೇವಲ 10% ರೋಗಿಗಳು ಮಾತ್ರ ಮುಸ್ಲಿಮರಾಗಿದ್ದಾರೆ.

ನಾನು ನಂಬಿಕೊಂಡು ಬಂದ ಮತ್ತು ಈಗಲೂ ನಂಬಿರುವ ತತ್ವ ಏನೆಂದರೆ ಅಲ್ಲಾಹ್ ಇರಲಿ, ಈಶ್ವರನಿರಲಿ, ಜೀಸಸ್ ಇರಲಿ ದೇವರೆಂಬುವನು ಎಲ್ಲರಿಗೂ ಒಬ್ಬನೇ. ನಾಮ ಹಲವು. ಮತ್ತು ನಾವೆಲ್ಲರೂ ಅವನ ಮಕ್ಕಳು.

ಇದನ್ನೂ ಓದಿ: ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಕಳೆದ ವರ್ಷ ನಾನು ಬಡವರಿಗೆ ಮತ್ತು ಅಗತ್ಯವಿರುವ ಜನರಿಗೆ ಆಹಾರದ ಕಿಟ್‌ಗಳನ್ನು ಒದಗಿಸಲು ಕೆಲಸ ಮಾಡಿದ್ದೆ. ಆಗ ಅವರೆಲ್ಲಾ ಯಾವ ಧರ್ಮದವರು ಯಾವ ಪ್ರದೇಶದವರು ಎಂದು ನಾನು ನೋಡಲಿಲ್ಲ. ಸಾವಿರಾರು ವಲಸೆ ಕಾರ್ಮಿಕರೊಂದಿಗೆ ನಿಂತು ಅವರಿಗೆ ಅಗತ್ಯ ಆಹಾರ ನೀಡಿ ಧೈರ್ಯ ಹೇಳುವ ಕೆಲಸ ಮಾಡಿದೆ.‌ ಅವರಿಗೆ ತಂತಮ್ಮ ಊರುಗಳಿಗೆ ತಲುಪುವಂತೆ ರೈಲು ಪ್ರಯಾಣ ಮಾಡಲು ಸಹಕರಿಸಿದೆ.‌

ಇದೆಲ್ಲಾ ಮಾಡುವಾಗಲೂ ನಾನು ಅವರು ಯಾವ ಧರ್ಮದವರು ಎಂದಾಗಲೀ ಯಾವ ಊರೆಂದಾಲೀ ನೋಡಲಿಲ್ಲ. ನನ್ನ ದೃಷ್ಟಿಯಲ್ಲಿ ಅವರೆಲ್ಲರೂ ಬಹಳ ಕಷ್ಟದಲ್ಲಿರುವ ನನ್ನ ಸಹೋದರ ಸಹೋದರಿಯರಾಗಿದ್ದರು. ಅವರು ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಿ ತಮ್ಮ ಪ್ರೀತಿಪಾತ್ರರನ್ನು ಸೇರಿಕೊಳ್ಳಲಿ ಎನ್ನುವುದಷ್ಟೇ ನನ್ನ ಕಾಳಜಿಯಾಗಿತ್ತು. ಇದರ ಪರಿಣಾಮವಾಗಿ ನನ್ನ ಇಡೀ ಕುಟುಂಬದವರಿಗೆ ನನ್ನಿಂದಾಗಿ ಕೊವಿಡ್ ಸೋಂಕು ತಗುಲಿತ್ತು.

ನಾನೂ ಸಹ ನಿಮ್ಮಲ್ಲಿ ಒಬ್ಬನಾಗಿರುವುದಕ್ಕೆ ಮತ್ತು ಯಾರೋ ಹೊರಗಿನ ವ್ಯಕ್ತಿ ಅಲ್ಲ ಎನ್ನುವುದಕ್ಕೆ ಇಷ್ಟು ಸಾಕ್ಷಿ ಸಾಲದೆ? ಯಾವತ್ತಿಗೂ ನನ್ನ ಬದ್ಧತೆ ನನ್ನ ದೇಶ, ನನ್ನ ಸರ್ಕಾರ ಮತ್ತು ಈ ದೇಶದ ಸಂವಿಧಾನಕ್ಕೆ.
ಕೆಲವು ಜನರ ಅಜ್ಞಾನ ಮತ್ತು ಮೂರ್ಖತನ ನಿಜಕ್ಕೂ ನನಗೆ ನೋವುಂಟುಮಾಡಿದೆ.‌ ಇದರ ಕುರಿತು ಕಾನೂನು ಪ್ರಕಾರ ತನಿಖೆ ನಡೆದು, ಇಂತಹ ಕಷ್ಟದ ಸಮಯದಲ್ಲಿ ಸಹ ವಿಷವನ್ನು ಹರಡುತ್ತಿರುವವರ ಮೇಲೆ ಕ್ರಮ ಜರುಗಿಸಲಿ ಎಂದು ಆಶಿಸುತ್ತೇನೆ.

ಇದನ್ನೂ ಓದಿ: ‘ಎಲ್ಲಾ ಬಿಟ್ಟ ಬಿಜೆಪಿ’- ಕೊರೊನಾ ವಿರುದ್ಧ ಹೋರಾಡಲಿಲ್ಲ, ವೈರಸ್ ಜೊತೆಗೇ ಒಳ ಒಪ್ಪಂದ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

  1. Iddaddu idda Haage Heli ddeera
    Sarfaraz ravre Satya Yendigu Satya
    Satyakke Jayawagali.
    Bjp Communal Mind
    Kelsa Maadakke Nalayakku
    Kelsa Maadu vavrannu kandre Tika uri

  2. ಬಿಜೆಪಿ ಯವರು ಹುಚ್ಚರಾಗಿದ್ದರೆ ಇವರ ಮಾತಿನಲ್ಲಿ ಹಿಡಿತ ಇಲ್ಲ ನೀವು ತಲೆ ಕೆಡಿಸಿ ಕೊಳ್ಳಬೇಡಿ ಸರ್ ಅಲ್ಲ ಮೇಲೆ ನಂಬಿಕೆ ಇರಲಿ

  3. ಸರ್ಫರಾಜ್ ಕಾನ್ ರವರೆ, ನಿಮ್ಮ ವಿಚಾರದಲ್ಲಿ ಕೋಮುವಾದಿಗಳು ಅವರ ಜಾಯಮಾನಕ್ಕೆ ತಕ್ಕಂತೆ ವರ್ತಿಸಿದ್ದಾರೆ, ನೊಂದುಕೊಳ್ಳಬೇಡಿ. ಮಾನವೀಯತೆಗೆ ಬೆಲೆ ಕೊಡುವ ನಿಮ್ಮ ಕೆಲಸವನ್ನು ಮುಂದುವರೆಸಿ.

LEAVE A REPLY

Please enter your comment!
Please enter your name here

- Advertisment -

‘ನಾನು ಹಿಂದೂ ಅಲ್ಲ, ಮನುಷ್ಯ’: ಎಸ್‌ಪಿ ನಾಯಕ ಶಿವರಾಜ್ ಸಿಂಗ್ ಯಾದವ್ ಹೇಳಿಕೆ ತಿರುಚಿ ವಿವಾದ ಸೃಷ್ಟಿಸಿದ ಬಿಜೆಪಿ ಬೆಂಬಲಿಗರು

ಸಮಾಜವಾದಿ ಪಕ್ಷದ ನಾಯಕ, ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಆಪ್ತ ಸಹಾಯಕ ಹಾಗೂ ಉತ್ತರ ಪ್ರದೇಶದ ಫಿರೋಜಾಬಾದ್‌ನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಸಿಂಗ್ ಯಾದವ್ ‘ನಾನು ಹಿಂದೂ ಅಲ್ಲ, ನಾನು...

ಛತ್ತೀಸ್‌ಗಢ : ಎಂಟು ಮಂದಿ ಬಂಗಾಳಿ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಬಜರಂಗದಳ ಕಾರ್ಯಕರ್ತರಿಂದ ಹಲ್ಲೆ; ವರದಿ

ಛತ್ತೀಸ್‌ಗಢದ ರಾಯ್‌ಪುರದಲ್ಲಿ ಭಾನುವಾರ (ಜ.4) ಬಜರಂಗದಳ ಕಾರ್ಯಕರ್ತರು ಎಂಟು ಮಂದಿ ಬಂಗಾಳಿ ಮಾತನಾಡುವ ಮುಸ್ಲಿಂ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದು, ಒಬ್ಬ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರಾಯ್‌ಪುರ ಜಿಲ್ಲೆಯ ಕಟೋವಾಲಿ...

‘ಉಮರ್ ಮತ್ತು ಶಾರ್ಜಿಲ್ ಜಾಮೀನು ನಿರಾಕರಣೆ’: ಶಾಸಕಾಂಗ, ನ್ಯಾಯಾಂಗದ ಕಾರ್ಯವೈಖರಿಯಲ್ಲಿನ ವೈರುಧ್ಯಗಳಿಗೆ ಉದಾಹರಣೆ: ಶ್ರೀಪಾದ್ ಭಟ್

ಇಂಡಿಯನ್ ಎಕ್ಸ್ಪ್ರೆಸ್ ನಲ್ಲಿನ ವರದಿಯ ಪ್ರಕಾರ ಈ ಪ್ರಕರಣದ ವಿಚಾರಣೆಯಲ್ಲಿರುವ ಮುಖ್ಯ ಪ್ರಶ್ನೆ: ಬಂಧನವಾಗಿ ಐದು ವರ್ಷಗಳಾದರೂ ಸಹ ಇನ್ನೂ ವಿಚಾರಣೆ ಆರಂಭವಾಗಿಲ್ಲ. ದೀರ್ಘಕಾಲದ ಜೈಲುವಾಸವನ್ನು ಭಯೋತ್ಪಾದಕ ವಿರೋಧಿ ಕಾನೂನಿನ ಅಡಿಯಲ್ಲಿ ಸಮರ್ಥಿಸಬಹುದೇ?...

ಉತ್ತರ ಪ್ರದೇಶ SIR : ಮತದಾರರ ಪಟ್ಟಿಯಿಂದ 2.89 ಕೋಟಿ ಹೆಸರು ಡಿಲೀಟ್

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐರ್‌) ಬಳಿಕ ಸುಮಾರು 2.89 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ನವದೀಪ್ ರಿನ್ವಾ...

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...