Homeಮುಖಪುಟಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ - ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

ಯುದ್ಧ ಪೀಡಿತ ಇಸ್ರೇಲ್‌ನಲ್ಲಿ ಭಾರತೀಯ ಯುವಕರಿಗೆ ಉದ್ಯೋಗ – ಹೆಮ್ಮೆ ವ್ಯಕ್ತಪಡಿಸಿದ ಯುಪಿ ಸಿಎಂ

- Advertisement -
- Advertisement -

ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಮಂಗಳವಾರ ವಿಧಾನಸಭೆಯಲ್ಲಿ ಮಾತನಾಡಿ, ರಾಜ್ಯದ 5,600ಕ್ಕೂ ಹೆಚ್ಚು ಜನರು ಇಸ್ರೇಲ್‌ನಲ್ಲಿ ನಿರ್ಮಾಣ ಕಾರ್ಯದ ಉದ್ಯೋಗಿಯಾಗಿದ್ದಾರೆ. ಆದರೆ ಮುಖ್ಯಮಂತ್ರಿಯ ಹೇಳಿಕೆಗೆ ಪ್ರತಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಜನರನ್ನು ಯುದ್ಧ ವಲಯಕ್ಕೆ ಕಳುಹಿಸುವುದನ್ನು ಸಾಧನೆ ಎಂದು ಹೇಗೆ ಉಲ್ಲೇಖಿಸುತ್ತೀರಿ ಎಂದು ಪ್ರಶ್ನಿಸಿವೆ. ಯುದ್ಧ ಪೀಡಿತ

ಉತ್ತರ ಪ್ರದೇಶ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಆದಿತ್ಯನಾಥ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಉಲ್ಲೇಖಿಸಿ, “ನಾವು ನಮ್ಮ ಯುವಕರನ್ನು ಇಸ್ರೇಲ್‌ಗೆ ಅವಕಾಶಗಳಿಗಾಗಿ ಕಳುಹಿಸುತ್ತಿರುವಾಗ, ನಿನ್ನೆ ಕಾಂಗ್ರೆಸ್ ನಾಯಕರೊಬ್ಬರು ಪ್ಯಾಲೆಸ್ತೀನ್ ಚೀಲವನ್ನು ಹಿಡಿದುಕೊಂಡು ಸಂಸತ್ತಿನಲ್ಲಿ ನಡೆಯುತ್ತಿರುವುದು ಕಂಡುಬಂದಿದೆ.” ಎಂದು ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿರುವವರಿಗೆ ಉಚಿತ ಊಟ ಮತ್ತು ವಸತಿ, ಜೊತೆಗೆ ಮಾಸಿಕ 1.5 ಲಕ್ಷ ರೂಪಾಯಿ ಸಂಬಳ ಸಿಗುತ್ತದೆ ಎಂದು ಆದಿತ್ಯನಾಥ್ ಹೇಳಿದ್ದು, ಜೊತೆಗೆ “ಸುರಕ್ಷತೆಯ ಸಂಪೂರ್ಣ ಗ್ಯಾರಂಟಿಯೂ ಇದೆ” ಎಂದು ಅವರು ಹೇಳಿದ್ದಾರೆ. ಈ ಕಾರ್ಮಿಕರು ಮನೆಗೆ ಹಣವನ್ನು ಕಳುಹಿಸಿದಾಗ ಅದು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡುತ್ತದೆ ಎಂದು ಅವರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಉತ್ತರ ಪ್ರದೇಶದಲ್ಲಿ ಕಾರ್ಮಿಕರು ಕೇವಲ 20,000 ರಿಂದ 30,000 ರೂ.ಗಳವರೆಗೆ ಗಳಿಸುತ್ತಿದ್ದರು ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ರಾಜ್ಯದ ಕಡಿಮೆ ತಲಾ ಆದಾಯಕ್ಕೆ ಹಿಂದಿನ ಸರ್ಕಾರಗಳನ್ನು ಅವರು ದೂಷಿಸಿದ್ದಾರೆ. ಇಸ್ರೇಲಿ ಅಧಿಕಾರಿಗಳ ತಂಡವು ಇತ್ತೀಚೆಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿ ರಾಜ್ಯದಿಂದ ಹೆಚ್ಚಿನ ಯುವಕರನ್ನು ನೇಮಿಸಿಕೊಳ್ಳಲು ಆಸಕ್ತಿಯನ್ನು ವ್ಯಕ್ತಪಡಿಸಿದೆ ಎಂದು ಹೇಳಿದ ಆದಿತ್ಯನಾಥ್ , ಅವರ “ಅತ್ಯುತ್ತಮ ಕೆಲಸದ ನೀತಿ ಮತ್ತು ಕೌಶಲ್ಯ” ವನ್ನು ಶ್ಲಾಘಿಸಿದ್ದಾರೆ.

ಕಳೆದ ವರ್ಷ 2023ರ ಅಕ್ಟೋಬರ್‌ನಲ್ಲಿ ಗಾಜಾದ ಮೇಲೆ ಇಸ್ರೇಲ್‌ನ ಯುದ್ಧ ಪ್ರಾರಂಭವಾದ ನಂತರ ಪ್ಯಾಲೆಸ್ತೀನಿ ಕಾರ್ಮಿಕರ ಬದಲು ಸುಮಾರು 12,000 ಭಾರತೀಯ ಕಾರ್ಮಿಕರನ್ನು ಇಸ್ರೇಲ್ ನೇಮಿಸಿಕೊಂಡಿದೆ. ಒಟ್ಟು ಸುಮಾರು 90,000 ಪ್ಯಾಲೆಸ್ಟೀನಿಯನ್ನರನ್ನು ಬದಲಿಸಿ ಅಲ್ಲಿಗೆ ವಿದೇಶಿ ಉದ್ಯೋಗಿಗಳನ್ನು ಇಸ್ರೇಲ್ ನೇಮಿಸಿಕೊಂಡಿತ್ತು. ಹಾಗಾಗಿ ನವೆಂಬರ್‌ನಲ್ಲಿ ನೇಮಕಾತಿ ಅಭಿಯಾನವನ್ನು ನಡೆಸಲು ಭಾರತದೊಂದಿಗೆ ಇಸ್ರೇಲ್‌ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿತ್ತು.

ನೇಮಕಗೊಂಡ ಕಾರ್ಮಿಕರಲ್ಲಿ, ಅಗತ್ಯವಿರುವ ಕೌಶಲ್ಯಗಳ ಕೊರತೆ ಮತ್ತು ಭಾಷಾ ಅಡೆತಡೆಗಳನ್ನು ಎದುರಿಸಿದ ಕಾರಣಕ್ಕೆ ಸುಮಾರು 220 ಜನರನ್ನು ಇಸ್ರೇಲ್‌ನಿಂದ ವಾಪಸ್ ಕಳುಹಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ನವೆಂಬರ್‌ನಲ್ಲಿ ದೃಢಪಡಿಸಿದೆ. ಭಾರತಕ್ಕೆ ಮರಳಬೇಕಾದ ಕಾರ್ಮಿಕರ ಸಂಖ್ಯೆ 500 ರಿಂದ 600 ರಷ್ಟಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಕಾರ್ಮಿಕ ಏಜೆನ್ಸಿಗಳನ್ನು ಉಲ್ಲೇಖಿಸಿ ವರದಿ ಮಾಡಿತ್ತು. ಹಿಂದಿರುಗಿದವರಲ್ಲಿ ಹೆಚ್ಚಿನವರು ಸರ್ಕಾರದ ಮೂಲಕ ನೇಮಕಗೊಂಡಿದ್ದಾರೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ಕಾರ್ಮಿಕರಿಗೆ ತಿಂಗಳಿಗೆ 1.37 ಲಕ್ಷ ರೂ.ನಿಂದ 1.92 ಲಕ್ಷ ರೂ.ಗಳ ವರೆಗೆ ಗಳಿಸುವ ನಿರೀಕ್ಷೆಯಿದ್ದು, ಹಾಗಾಗಿ ಜನರು ಇಸ್ರೇಲ್‌ನಲ್ಲಿ ಕೆಲಸ ಹುಡುಕಲು ಮುಂದಾಗಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ. “ನಿರುದ್ಯೋಗವು ಇಲ್ಲಿ ನಮ್ಮನ್ನು ಕೊಲ್ಲುತ್ತಿದೆ. ನಾನು ದಿನಕ್ಕೆ ಕೇವಲ 500 ರೂ ಗಳಿಸುತ್ತೇನೆ ಮತ್ತು ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿರುವಾಗ, ಇಲ್ಲಿನ ಉದ್ಯೋಗದಿಂದ ಬದುಕುವುದು ಅಸಾಧ್ಯ.” ಎಂದು ಕೆಲಸಗಾರರೊಬ್ಬರು ಈ ಹಿಂದೆ ಹೇಳಿದ್ದರು. ಯುದ್ಧ ಪೀಡಿತ

ಅವಮಾನದ ವಿಷಯ, ಹೆಮ್ಮೆಯಲ್ಲ: ಪ್ರಿಯಾಂಕಾ ವಾದ್ರಾ

ಆದಿತ್ಯನಾಥ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕಾ ಗಾಂಧಿ, ಯುದ್ಧ ಪೀಡಿತ ದೇಶದಲ್ಲಿ ಕೆಲಸ ಮಾಡಲು ಯುವಕರನ್ನು ಕಳುಹಿಸುವುದು “ಬೆನ್ನು ತಟ್ಟಿಕೊಳ್ಳುವ ಸಾಧನೆಯಲ್ಲ” ಬದಲಾಗಿ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ಆದಿತ್ಯನಾಥ್ ನೇತೃತ್ವದ ಸರ್ಕಾರಕ್ಕೆ ನಿರುದ್ಯೋಗದ ಸ್ಥಿತಿಯ ಬಗ್ಗೆ ಅಥವಾ ಯುವಜನರು ಮತ್ತು ಅವರ ಕುಟುಂಬದ ನೋವಿನ ಬಗ್ಗೆ ತಿಳಿದಿಲ್ಲ ಎಂದು ಅವರು ಹೇಳಿದ್ದಾರೆ.

ಯುದ್ಧದ ನಡುವೆ ಇಸ್ರೇಲ್‌ನಲ್ಲಿ ಕಾರ್ಮಿಕರು ಬಂಕರ್‌ಗಳಲ್ಲಿ ಅಡಗಿಕೊಳ್ಳಬೇಕಾಗಿತ್ತು ಮತ್ತು ಅವರನ್ನು ನೇಮಕ ಮಾಡಿಕೊಂಡ ಕಂಪನಿಗಳಿಂದ ಅವರು ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ವಾದ್ರಾ ವರದಿಗಳನ್ನು ಉಲ್ಲೇಖಿಸಿದ್ದಾರೆ. “ಅವರ ಕುಟುಂಬಗಳು ಯಾವಾಗಲೂ ಭಯಭೀತರಾಗಿದ್ದಾರೆ. ನಮ್ಮ ಯುವಕರು ಉದ್ಯೋಗಕ್ಕಾಗಿ ತಮ್ಮ ಪ್ರಾಣವನ್ನು ಪಣಕ್ಕಿಡಲು ಮುಂದಾಗಿದ್ದಾರೆ. ಏಕೆಂದರೆ ನೀವು [ಸರ್ಕಾರ] ಅವರಿಗೆ ಉದ್ಯೋಗಗಳನ್ನು ನೀಡಲು ಸಾಧ್ಯವಾಗಿಲ್ಲ.” ಎಂದು ಅವರು ಎಕ್ಸ್‌ನಲ್ಲಿ ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಉದ್ಯೋಗಾವಕಾಶಗಳಿದ್ದರೆ ಯಾರಾದರೂ ಇಸ್ರೇಲ್‌ಗೆ ಕೆಲಸಕ್ಕಾಗಿ ಯಾಕೆ ಹೋಗುತ್ತಾರೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕೂಡ ಪ್ರಶ್ನಿಸಿದ್ದಾರೆ.

ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ಭಾರತ ಸರ್ಕಾರವೇ ಸಲಹೆ ನೀಡಿತ್ತು ಎಂದು ಓವೈಸಿ ಗಮನಸೆಳೆದಿದ್ದಾರೆ. “ಬಡ ಜನರು ಇಸ್ರೇಲ್‌ನಂತಹ ಸ್ಥಳಗಳಿಗೆ ಕೆಲಸ ಮಾಡಲು ಹೋಗುತ್ತಿರುವುದು ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳ ವೈಫಲ್ಯಕ್ಕೆ ಸ್ಪಷ್ಟ ಪುರಾವೆಯಾಗಿದೆ” ಎಂದು ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ: ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...