Homeಕರ್ನಾಟಕನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

- Advertisement -
- Advertisement -

ಪ್ರಸಕ್ತ ವರ್ಷಾಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯತ್ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ (ನವೆಂಬರ್ 17) ನೋಟಿಸ್‌ ಜಾರಿಗೊಳಿಸಿದೆ.

ಕರ್ನಾಟಕ ಪುರಸಭೆ ಕಾಯ್ದೆ, 1964 ರ ಸೆಕ್ಷನ್ 13(1)(ಡಿ) ಅಡಿಯಲ್ಲಿ 187 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಸಂಬಂಧ ಅಂತಿಮ ಅಧಿಸೂಚನೆ ಹೊರಡಿಸಲು ನಿರ್ದೇಶನ ನೀಡಬೇಕೆಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠವು ನಡೆಸಿದೆ.

ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಡಿಸೆಂಬರ್‌ 11ಕ್ಕೆ ಮುಂದೂಡಿದೆ.

ಪ್ರತಿವಾದಿ (ರೆಸ್ಪಾಂಡೆಂಟ್) ಮುಂದಿನ ವಿಚಾರಣಾ ದಿನಾಂಕಕ್ಕಿಂತ ಮೊದಲೇ ತನ್ನ ಕೌಂಟರ್ ಅಫಿಡವಿಟ್ ಸಲ್ಲಿಸಬೇಕು ಮತ್ತು ಅದರಲ್ಲಿ ಅರ್ಜಿದಾರರ ಅರ್ಜಿಯಲ್ಲಿ ಹೇಳಲಾದ ಎಲ್ಲಾ ಆರೋಪಗಳಿಗೆ/ಹೇಳಿಕೆಗಳಿಗೆ ತನ್ನ ಉತ್ತರವನ್ನು/ಪ್ರತಿವಾದವನ್ನು ಸ್ಪಷ್ಟವಾಗಿ ನಮೂದಿಸಬೇಕು ಎಂದು ಪೀಠ ಹೇಳಿದೆ.

ಇದಕ್ಕೂ ಮುನ್ನ, ರಾಜ್ಯ ಚುನಾವಣಾ ಆಯೋಗದ ಪರ ವಾದ ಮಂಡಿಸಿದ ವಕೀಲೆ ವೈಶಾಲಿ ಹೆಗ್ಡೆ, “ನಗರ ಸ್ಥಳೀಯ ಸಂಸ್ಥೆಗಳ ಅವಧಿಯು ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಮುಗಿಯಲಿದೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲೆ ನಿಲೋಫರ್‌ ಅಕ್ಬರ್‌ ಅವರು “ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದ ಅರ್ಜಿಯೊಂದು ಡಿಸೆಂಬರ್‌ 11ಕ್ಕೆ ನಿಗದಿಯಾಗಿದೆ. ಇದು ನಗರ ಸಭೆ ಮತ್ತು ಪುರಸಭೆಗೆ ಸಂಬಂಧಿಸಿದ್ದಾಗಿದೆ” ಎಂದಿದ್ದಾರೆ.

ಮುಂದಿನ ವರ್ಷ ಜನವರಿಯಲ್ಲಿ ಅವಧಿ ಮುಗಿಯಲಿರುವ ರಾಜ್ಯದ 5,950 ಗ್ರಾಮ ಪಂಚಾಯತ್‌ಗಳಿಗೂ ಸಕಾಲದಲ್ಲಿ ಚುನಾವಣೆ ನಡೆಸಲು ಪೂರಕವಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಚುನಾವಣಾ ಆಯೋಗದ ಪರ ವಕೀಲೆ ಕೋರಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ಜನವರಿ 27 ಮತ್ತು ಜೂನ್‌ 26ರಂದು ಅಂತಿಮ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಆದರೆ, ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಸಕಾಲಕ್ಕೆ ಚುನಾವಣೆ ನಡೆಸದಿರುವುದು ಸಂವಿಧಾನದ 243-ಯು ವಿಧಿ ಉಲ್ಲಂಘನೆಯಾಗಿದ್ದು, ಈಗಾಗಲೇ ಕಲಬುರಗಿ ಜಿಲ್ಲೆ ವಾಡಿ ಪಟ್ಟಣ ಪಂಚಾಯತ್ ಮತ್ತು ಬಾಗಲಕೋಟೆಯ ಮಹಾಲಿಂಗಪುರ ಪುರಸಭೆಯ ಅವಧಿ ಮುಕ್ತಾಯವಾಗಿದೆ ಎಂದು ತಿಳಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ, 1993ರ ಸೆಕ್ಷನ್ 5(5) ರ ಅಡಿಯಲ್ಲಿ ಗ್ರಾಮ ಪಂಚಾಯತ್‌ಗಳ ಮೀಸಲಾತಿಯ ಅಂತಿಮ ಅಧಿಸೂಚನೆಗಳನ್ನು ಹೊರಡಿಸಲು ನಿರ್ದೇಶನ ನೀಡುವಂತೆ ಕೋರಿ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ವಾರ ವಿಚಾರಣೆ ನಡೆಸಿದ ಹೈಕೋರ್ಟ್, ಇದೇ ರೀತಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಅರ್ಜಿಯ ಮುಂದಿನ ವಿಚಾರಣೆಯನ್ನೂ ಡಿಸೆಂಬರ್ 11ಕ್ಕೆ ನಿಗದಪಡಿಸಲಾಗಿದೆ. ಹಾಗಾಗಿ, ಎರಡೂ ಅರ್ಜಿಗಳ ಮುಂದಿನ ವಿಚಾರಣೆ ಒಂದೇ ದಿನ ನಡೆಯಲಿದೆ.

ಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...

ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ, ಸಾಮಾಜಿಕ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ: ವರದಕ್ಷಿಣೆ ನಿರ್ಮೂಲನೆ ತುರ್ತು ಸಾಂವಿಧಾನಿಕ ಮತ್ತು ಸಾಮಾಜಿಕ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಸ್ತಿತ್ವದಲ್ಲಿರುವ ಕಾನೂನುಗಳು "ನಿಷ್ಪರಿಣಾಮಕಾರಿತ್ವ" ಮತ್ತು "ದುರುಪಯೋಗ" ಎರಡರಿಂದಲೂ ಬಳಲುತ್ತಿವೆ ಮತ್ತು ದುಷ್ಟ ಪದ್ಧತಿ ಇನ್ನೂ ವ್ಯಾಪಕವಾಗಿ...

ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ 2025ರ ಕೇರಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 19 ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದೆ ಎಂದು ರಾಜ್ಯದ ಆಡಳಿತಾರೂಢ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಪ್ರಧಾನ ಕಾರ್ಯದರ್ಶಿ ಮರಿಯನ್...