Homeಕರ್ನಾಟಕನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

- Advertisement -
- Advertisement -

ಪ್ರಸಕ್ತ ವರ್ಷಾಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯತ್ ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೋಮವಾರ (ನವೆಂಬರ್ 17) ನೋಟಿಸ್‌ ಜಾರಿಗೊಳಿಸಿದೆ.

ಕರ್ನಾಟಕ ಪುರಸಭೆ ಕಾಯ್ದೆ, 1964 ರ ಸೆಕ್ಷನ್ 13(1)(ಡಿ) ಅಡಿಯಲ್ಲಿ 187 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಸಂಬಂಧ ಅಂತಿಮ ಅಧಿಸೂಚನೆ ಹೊರಡಿಸಲು ನಿರ್ದೇಶನ ನೀಡಬೇಕೆಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ವಿಭಾಗೀಯ ಪೀಠವು ನಡೆಸಿದೆ.

ವಾದ ಆಲಿಸಿದ ಪೀಠವು ರಾಜ್ಯ ಸರ್ಕಾರ ಮತ್ತು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೋಟಿಸ್‌ ಜಾರಿಗೊಳಿಸಿ, ವಿಚಾರಣೆಯನ್ನು ಡಿಸೆಂಬರ್‌ 11ಕ್ಕೆ ಮುಂದೂಡಿದೆ.

ಪ್ರತಿವಾದಿ (ರೆಸ್ಪಾಂಡೆಂಟ್) ಮುಂದಿನ ವಿಚಾರಣಾ ದಿನಾಂಕಕ್ಕಿಂತ ಮೊದಲೇ ತನ್ನ ಕೌಂಟರ್ ಅಫಿಡವಿಟ್ ಸಲ್ಲಿಸಬೇಕು ಮತ್ತು ಅದರಲ್ಲಿ ಅರ್ಜಿದಾರರ ಅರ್ಜಿಯಲ್ಲಿ ಹೇಳಲಾದ ಎಲ್ಲಾ ಆರೋಪಗಳಿಗೆ/ಹೇಳಿಕೆಗಳಿಗೆ ತನ್ನ ಉತ್ತರವನ್ನು/ಪ್ರತಿವಾದವನ್ನು ಸ್ಪಷ್ಟವಾಗಿ ನಮೂದಿಸಬೇಕು ಎಂದು ಪೀಠ ಹೇಳಿದೆ.

ಇದಕ್ಕೂ ಮುನ್ನ, ರಾಜ್ಯ ಚುನಾವಣಾ ಆಯೋಗದ ಪರ ವಾದ ಮಂಡಿಸಿದ ವಕೀಲೆ ವೈಶಾಲಿ ಹೆಗ್ಡೆ, “ನಗರ ಸ್ಥಳೀಯ ಸಂಸ್ಥೆಗಳ ಅವಧಿಯು ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ಮುಗಿಯಲಿದೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲೆ ನಿಲೋಫರ್‌ ಅಕ್ಬರ್‌ ಅವರು “ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದ ಅರ್ಜಿಯೊಂದು ಡಿಸೆಂಬರ್‌ 11ಕ್ಕೆ ನಿಗದಿಯಾಗಿದೆ. ಇದು ನಗರ ಸಭೆ ಮತ್ತು ಪುರಸಭೆಗೆ ಸಂಬಂಧಿಸಿದ್ದಾಗಿದೆ” ಎಂದಿದ್ದಾರೆ.

ಮುಂದಿನ ವರ್ಷ ಜನವರಿಯಲ್ಲಿ ಅವಧಿ ಮುಗಿಯಲಿರುವ ರಾಜ್ಯದ 5,950 ಗ್ರಾಮ ಪಂಚಾಯತ್‌ಗಳಿಗೂ ಸಕಾಲದಲ್ಲಿ ಚುನಾವಣೆ ನಡೆಸಲು ಪೂರಕವಾಗಿ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಚುನಾವಣಾ ಆಯೋಗದ ಪರ ವಕೀಲೆ ಕೋರಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ಜನವರಿ 27 ಮತ್ತು ಜೂನ್‌ 26ರಂದು ಅಂತಿಮ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಆದರೆ, ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಸಕಾಲಕ್ಕೆ ಚುನಾವಣೆ ನಡೆಸದಿರುವುದು ಸಂವಿಧಾನದ 243-ಯು ವಿಧಿ ಉಲ್ಲಂಘನೆಯಾಗಿದ್ದು, ಈಗಾಗಲೇ ಕಲಬುರಗಿ ಜಿಲ್ಲೆ ವಾಡಿ ಪಟ್ಟಣ ಪಂಚಾಯತ್ ಮತ್ತು ಬಾಗಲಕೋಟೆಯ ಮಹಾಲಿಂಗಪುರ ಪುರಸಭೆಯ ಅವಧಿ ಮುಕ್ತಾಯವಾಗಿದೆ ಎಂದು ತಿಳಿಸಲಾಗಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ, 1993ರ ಸೆಕ್ಷನ್ 5(5) ರ ಅಡಿಯಲ್ಲಿ ಗ್ರಾಮ ಪಂಚಾಯತ್‌ಗಳ ಮೀಸಲಾತಿಯ ಅಂತಿಮ ಅಧಿಸೂಚನೆಗಳನ್ನು ಹೊರಡಿಸಲು ನಿರ್ದೇಶನ ನೀಡುವಂತೆ ಕೋರಿ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ವಾರ ವಿಚಾರಣೆ ನಡೆಸಿದ ಹೈಕೋರ್ಟ್, ಇದೇ ರೀತಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಅರ್ಜಿಯ ಮುಂದಿನ ವಿಚಾರಣೆಯನ್ನೂ ಡಿಸೆಂಬರ್ 11ಕ್ಕೆ ನಿಗದಪಡಿಸಲಾಗಿದೆ. ಹಾಗಾಗಿ, ಎರಡೂ ಅರ್ಜಿಗಳ ಮುಂದಿನ ವಿಚಾರಣೆ ಒಂದೇ ದಿನ ನಡೆಯಲಿದೆ.

ಆರ್‌ಎಸ್‌ಎಸ್‌ನ ಲೂಟಿ ದಾಖಲೆ ಸಹಿತ ಬಹಿರಂಗಪಡಿಸುತ್ತೇನೆ : ಸಚಿವ ಪ್ರಿಯಾಂಕ್ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...