Homeಮುಖಪುಟಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

ಇವಿಎಂಗಳ ಪರಿಣಾಮಕಾರಿತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ರಾ ಗೋಯೆಲ್? ರಾಷ್ಟ್ರಪತಿಗೆ ಪತ್ರ ಬರೆದ ಮಾಜಿ IAS ಅಧಿಕಾರಿ

- Advertisement -
- Advertisement -

ಚುನಾವಣಾ ಹೊಸ್ತಿಲ್ಲಲ್ಲೇ ಚುನಾವಣಾ ಆಯುಕ್ತ ಗೋಯೆಲ್ ರಾಜೀನಾಮೆ ದೇಶದಲ್ಲಿ ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ. ಈ ಬಗ್ಗೆ ಭಾರತ ಸರಕಾರದ ವಿದ್ಯುತ್ ಮತ್ತು ಹಣಕಾಸು ಸಚಿವಾಲಯಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಎಎಸ್ ಅಧಿಕಾರಿ ಇಎಎಸ್ ಶರ್ಮಾ ಭಾರತದ ಚುನಾವಣಾ ಆಯೋಗದ (ಇಸಿಐ) ಸಮಗ್ರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ ರಾಷ್ಟ್ರಪತಿಗಳಿಗೆ ಪತ್ರವನ್ನು ಬರೆದಿದ್ದು, ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಎತ್ತಿಹಿಡಿಯಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಲ್ಲಿ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದಾರೆ.

ಆಡಳಿತಾರೂಢ ಬಿಜೆಪಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆಯನ್ನು ಹಾಳುಮಾಡುತ್ತಿದೆ ಮತ್ತು ತನ್ನ ಪರವಾಗಿ ಚುನವಣಾ ಆಯೋಗವನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದ ಶರ್ಮಾ, ಚುನಾವಣಾ ಆಯುಕ್ತ ಸ್ಥಾನದಿಂದ ಅರುಣ್ ಗೋಯೆಲ್ ಹಠಾತ್ ನಿರ್ಗಮನದ ಬಗ್ಗೆ ಪ್ರಶ್ನಿಸಿದ್ದಾರೆ. ಶರ್ಮಾ ಅವರು ರಾಷ್ಟ್ರಪತಿಗಳಿಗೆ ಈ ಕುರಿತು ಬಹಿರಂಗ ಪತ್ರವನ್ನು ಬರೆದಿದ್ದು, ನನ್ನ ದೃಷ್ಟಿಯಲ್ಲಿ,  ಗೋಯೆಲ್ ಅವರ ಹಠಾತ್ ಮತ್ತು ವಿವರಣೆ ನೀಡದ ನಿರ್ಗಮನವು ಈ ಕೆಳಗಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಿದ್ದಾರೆ..

1.ಚುನಾವಣಾ ಪ್ರಕ್ರಿಯೆಯಲ್ಲಿ ರಾಜಕಾರಣಿಗಳು ಮಧ್ಯಪ್ರವೇಶಿಸುವ ಮೂಲಕ ಪಾವಿತ್ರ್ಯತೆಯನ್ನು ಹಾಳುಮಾಡುವ  ವಿಚಾರದಲ್ಲಿ ಗೋಯೆಲ್ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

2.ಇವಿಎಂಗಳ ಬಳಕೆಯ ಪರಿಣಾಮಕಾರಿತ್ವದ ಬಗ್ಗೆ ಗೋಯೆಲ್ ಅನುಮಾನ ವ್ಯಕ್ತಪಡಿಸಿದ್ದಾರೆಯೇ?

3. ಚುನಾವಣಾ ಬಾಂಡ್‌ ಕುರಿತ ವಿವರಗಳನ್ನು ಬಹಿರಂಗಪಡಿಸದಂತೆ ಎಸ್‌ಬಿಐಗೆ ರಾಜಕಾರಣಿಗಳು ಒತ್ತಡ ಹೇರಿರುವ ಬಗ್ಗೆ ಅವರು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆಯೇ?

5. ಚುನಾವಣಾ ಪ್ರಕ್ರಿಯೆಯ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಲು BEL, ECIL ಮತ್ತು SBI ಮಂಡಳಿಗಳಿಂದ ಬಿಜೆಪಿಯ ನಾಮನಿರ್ದೇಶಿತರನ್ನು ಹಿಂತೆಗೆದುಕೊಳ್ಳಬೇಕೆಂದು ಗೋಯೆಲ್ ಪ್ರಸ್ತಾಪಿಸಿದ್ದಾರೆಯೇ?

6.ಗೋಯೆಲ್ ಅವರು ರಾಜಕೀಯ ಕಾರ್ಯಕಾರಿಣಿಗಳನ್ನು ಅಸಮಾಧಾನಗೊಳಿಸುವಂತಹ ಯಾವುದೇ ವಿಷಯದ ಬಗ್ಗೆ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆಯೇ?

7.ಆಡಳಿತ ಪಕ್ಷದ ಕುತಂತ್ರಗಳಿಗೆ ದಾರಿ ಮಾಡಿಕೊಡಲು ಅಧಿಕಾರದಲ್ಲಿರುವವರು ಗೋಯೆಲ್ ಅವರಿಗೆ ರಾಜೀನಾಮೆಯನ್ನು ನೀಡುವಂತೆ ಒತ್ತಾಯಿಸಿದ್ದಾರೆಯೇ? ಎಂದು ಶರ್ಮಾ ಅವರು ಪ್ರಶ್ನೆಯನ್ನು ಎತ್ತಿದ್ದಾರೆ.

ಲೋಕಸಭೆ ಚುನಾವಣೆಯ ಘೋಷಣೆಗೆ ಕೆಲವೇ ದಿನಗಳ ಮೊದಲು ಅರುಣ್ ಗೋಯೆಲ್ ಚುನಾವಣಾ ಆಯುಕ್ತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು, ಇದು ಜನರಲ್ಲಿ ಚುನಾವಣಾ ಆಯೋಗದ ಪಾರದರ್ಶಕತೆ ಬಗ್ಗೆ ಪ್ರಶ್ನೆಯನ್ನು ಹುಟ್ಟು ಹಾಕಿತ್ತು. ಗೋಯಲ್‌ ರಾಜೀನಾಮೆ ಹಿನ್ನೆಲೆ ಚುನಾವಣಾ ಆಯೋಗದಲ್ಲಿ ಪಾರದರ್ಶಕತೆ ಇಲ್ಲ ಎಂದು ಆರೋಪಿಸಿರುವ ವಿರೋಧ ಪಕ್ಷದ ನಾಯಕರು ಚುನಾವಣೆ ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆಯುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿದ್ದರು.

ಈ ಮೊದಲು ಶರ್ಮಾ ಅವರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಮತ್ತು ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL) ಬೋರ್ಡ್‌ಗಳಲ್ಲಿ ಬಿಜೆಪಿಯ ಪ್ರತಿನಿಧಿಗಳ ಆಯ್ಕೆಯನ್ನು ಪ್ರಶ್ನಿಸಿದ್ದರು. BEL ಮತ್ತು ECIL ಇವಿಎಂ ತಯಾರಿಯನ್ನು ಮಾಡುತ್ತದೆ. ಇಂತಹ ಸಂಸ್ಥೆಗಳಿಗೆ ಬಿಜೆಪಿ ತನ್ನ ನಾಯಕರನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸುವುದು ಅದರ ಕಾರ್ಯಾಚರಣೆಯ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದ್ದರು.

ಇವಿಎಂಗಳ ದೋಷಗಳ ಬಗ್ಗೆ ಅನೇಕರು ವ್ಯಕ್ತಪಡಿಸಿದ ಕಳವಳಗಳನ್ನು ಇಸಿಐ ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದೆ ಎಂದು ಹೇಳಿದ ಶರ್ಮಾ ಚುನಾವಣಾ ಬಾಂಡ್‌ ವಿಚಾರದಲ್ಲಿ ಕೂಡ ರಾಷ್ಟ್ರಪತಿಗಳ ಗಮನವನ್ನು ಸೆಳೆದಿದ್ದಾರೆ. ಎಸ್‌ಬಿಐ ಮಂಡಳಿಯಲ್ಲಿ ಬಿಜೆಪಿ ಪ್ರತಿನಿಧಿಗಳು ಇದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ತಿಂಗಳು ಒಂದು ಮಹತ್ವದ ತೀರ್ಪಿನಲ್ಲಿ, ಸುಪ್ರೀಂಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಘೋಷಿಸಿದೆ ಮತ್ತು ದಾನಿಗಳು ಮತ್ತು ಪಕ್ಷದ ನಿಧಿಯ ಮೂಲಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ಎಸ್‌ಬಿಐಗೆ ನಿರ್ದೇಶನ ನೀಡಿತ್ತು. ಆದರೆ ಎಸ್‌ಬಿಐ ಚುನಾವಣಾ ಬಾಂಡ್‌ಗಳ ವಿವರಗಳನ್ನು ಒದಗಿಸಲು ಜುಲೈ 30ರವರೆಗೆ ವಿಸ್ತರಣೆಯನ್ನು ಕೋರಿದೆ. ಮೂಲಭೂತವಾಗಿ, ಲೋಕಸಭೆ ಚುನಾವಣೆಯ ನಂತರವೇ ಆದೇಶಗಳನ್ನು ಅನುಸರಿಸಲು ಎಸ್‌ಬಿಐ ಒಪ್ಪಿಕೊಂಡಿದೆ. ಅಧಿಕಾರ ಶಾಹಿಗಳು ಎಸ್‌ಬಿಐಗೆ ಜೂನ್ ಅಂತ್ಯದವರೆಗೆ ಚುನಾವಣಾ ಬಾಂಡ್‌ ಬಿಡುಗಡೆಯಲ್ಲಿ ವಿಳಂಬ ಮಾಡುವಂತೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.

ಇಸಿಐ ಮೇಲೆ ಬಿಜೆಪಿ ಸಂಪೂರ್ಣ ಹಿಡಿತ ಸಾಧಿಸಲು ಮತ್ತು ಚುನಾವಣೆಗಳನ್ನು ದುರ್ಬಲಗೊಳಿಸುವ ಕುರಿತು ಕಳವಳಗಳನ್ನು ಶರ್ಮಾ ಎತ್ತಿ ತೋರಿಸಿದ್ದಾರೆ. ಚುನಾವಣಾ ಆಯುಕ್ತರಾಗಿ ನೇಮಕಗೊಳ್ಳುವ ಅಭ್ಯರ್ಥಿಗಳ ಆಯ್ಕೆಯಲ್ಲಿನ ಅಪಾರದರ್ಶಕತೆಯೂ ಇದರಲ್ಲಿ ಸೇರಿದೆ. ಚುನಾವಣಾ ಆಯುಕ್ತರ ನೇಮಕಾತಿಗೆ ಅಸ್ತಿತ್ವದಲ್ಲಿರುವ ಕಾರ್ಯವಿಧಾನವು ಪಾರದರ್ಶಕ ಮತ್ತು ವಸ್ತುನಿಷ್ಠವಾಗಿಲ್ಲ ಎಂದು ಭಾರತದ ಸರ್ವೋಚ್ಚ ನ್ಯಾಯಾಲಯವು ಸ್ಪಷ್ಟವಾಗಿ ಹೇಳಿದೆ ಎಂದು ಮಾಜಿ ಐಎಎಸ್ ಅಧಿಕಾರಿ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನು ಓದಿ: ತಾಳ್ಮೆ ಕಳೆದುಕೊಂಡ ಬಿಜೆಪಿ ಕಾರ್ಯಕರ್ತರು: ಕೇಂದ್ರ ಸಚಿವ ಗಿರಿರಾಜ್ ಸಿಂಗ್‌ ವಿರುದ್ಧವೇ ಪ್ರತಿಭಟನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...