Homeರಾಷ್ಟ್ರೀಯಅಗ್ನಿವೀರರಿಗೆ ‘ಬಟ್ಟೆ ಒಗೆಯುವ & ಕ್ಷೌರ ತರಬೇತಿ’ ನೀಡುತ್ತೇವೆ: ಒಕ್ಕೂಟ ಸರ್ಕಾರದ ಸಚಿವ

ಅಗ್ನಿವೀರರಿಗೆ ‘ಬಟ್ಟೆ ಒಗೆಯುವ & ಕ್ಷೌರ ತರಬೇತಿ’ ನೀಡುತ್ತೇವೆ: ಒಕ್ಕೂಟ ಸರ್ಕಾರದ ಸಚಿವ

- Advertisement -
- Advertisement -

ಅಗ್ನಿಪಥ್‌ ಯೋಜನೆಗೆ ನೇಮಕಾತಿಯಾಗುವವರಿಗೆ ಚಾಲನೆ, ಎಲೆಕ್ಟ್ರಿಷಿಯನ್, ಬಟ್ಟೆ ಒಗೆಯುವ ಮತ್ತು ಕ್ಷೌರ ಕೌಶಲ್ಯಗಳ ತರಬೇತಿ ನೀಡಲಾಗುವುದು ಎಂದು ಒಕ್ಕೂಟ ಸರ್ಕಾರದ ಸಚಿವ ಜಿ. ಕಿಶನ್ ರೆಡ್ಡಿ ಅವರು ಹೇಳಿ ವಿವಾದ ಸೃಷ್ಟಿಸಿದ್ದು, “ಅಗ್ನಿವೀರರು ತಮ್ಮ ನಾಲ್ಕು ವರ್ಷಗಳ ಅವಧಿ ಮುಗಿದ ನಂತರ, ಹುದ್ದೆಗಳಿಗೆ ಸೇರಲು ಅವರಿಗೆ ಈ ಕೌಶಲ್ಯ ಸಹಾಯಕವಾಗುತ್ತದೆ” ಎಂದು ಹೇಳಿದ್ದಾರೆ.

ಸಚಿವರು ಪತ್ರಿಕಾಗೋಷ್ಠಿಯಲ್ಲಿ ನೀಡಿದ್ದ ಹೇಳಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದ್ದು, ಭಾರಿ ಆಕ್ರೋಶ ವ್ಯಕ್ತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಶಿವಸೇನಾ ನಾಯಕಿ, ಸಂಸದೆ ಪ್ರಿಯಾಂಕಾ ಚತುರ್ವೇದಿ, “ಸಶಸ್ತ್ರ ಪಡೆಗಳು ಈಗ ಅಗ್ನಿಪಥ್ ನೇಮಕಾತಿ ಯೋಜನೆಯಡಿ ಚಾಲನೆ, ಎಲೆಕ್ಟ್ರಿಷಿಯನ್ ಮುಂತಾದ ದೇಶಕ್ಕೆ ಕೌಶಲ್ಯಪೂರ್ಣ ಕಾರ್ಮಿಕರಿಗೆ ತರಬೇತಿ ಕೇಂದ್ರವಾಗಲಿದೆ. ಹೊಸ ಸಾಧನೆಯೊಂದು ಹೊರಹೊಮ್ಮಿದೆ!” ಎಂದು ಅವರು ಹೇಳಿದ್ದಾರೆ.

ಈ ವಿಡಿಯೋವನ್ನು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕ ಕ್ರಿಶಾಂಕ್ ಮನ್ನೆ ಕೂಡ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ಹಿಂಸಾಚಾರದಲ್ಲಿ ಭಾಗಿಯಾದವರು ಸೇನೆ ಸೇರಲು ಸಾಧ್ಯವಿಲ್ಲ- ಲೆ. ಜನರಲ್ ಪುರಿ

ಅಗ್ನಿಪಥ್ ಯೋಜನೆ ಎಂದರೇನು?

ಒಕ್ಕೂಟ ಸರ್ಕಾರದವು ಮಂಗಳವಾರ ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದೆ. ಹೊಸ ಸೇನಾ ನೇಮಕಾತಿ ಯೋಜನೆಯಡಿ ಹದಿನೇಳುವರೆಯಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೈನ್ಯಕ್ಕೆ ಸೇರಿಸಲಾಗುತ್ತದೆ.

ಈ ರೀತಿ ಸೇರಿದ 25% ಜನರನ್ನು ಮಾತ್ರ ನಾಲ್ಕು ವರ್ಷಗಳ ನಂತರ ಖಾಯಂ ಮಾಡಲಾಗುತ್ತದೆ. ಉಳಿದವರು ಒಂದಿಷ್ಟು ಪರಿಹಾರದೊಂದಿಗೆ ಕಡ್ಡಾಯ ನಿವೃತ್ತಿಯನ್ನು ಪಡೆಯಬೇಕಾಗುತ್ತದೆ. ಆದರೆ ಅವರಿಗೆ ಯಾವುದೇ ಪಿಂಚಣಿ ನೀಡಲಾಗುವುದಿಲ್ಲ. ಹೊಸ ಯೋಜನೆಯಡಿ ನೇಮಕಗೊಳ್ಳುವ ಯುವಕರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ.

ಉದ್ಯೋಗದ ಮೊದಲ ವರ್ಷದಲ್ಲಿ ಅಗ್ನಿವೀರ್‌ನ ಮಾಸಿಕ ವೇತನವು 30,000 ರೂ. ಆಗಿರುತ್ತದೆ. ಆದರೆ ಅವರ ಕೈಗೆ ಪ್ರತಿ ತಿಂಗಳು ಸಿಗುವ ಮೊತ್ತ 21,000 ರೂ. ಆಗಿದ್ದು, ಉಳಿದ 9 ಸಾವಿರ ರೂ.ಗಳನ್ನು ಉಳಿಸಿ ನಾಲ್ಕು ವರ್ಷಗಳ ನಂತರ ನೀಡಲಾಗುತ್ತದೆ. ಇದರ ನಂತರ ಎರಡನೇ, ಮೂರನೇ ಮತ್ತು ನಾಲ್ಕನೇ ವರ್ಷದಲ್ಲಿ ಮಾಸಿಕ ವೇತನವು 33 ಸಾವಿರ ರೂ., 36,500 ರೂ. ಮತ್ತು 40,000 ಆಗಿರುತ್ತದೆ.

ಇದನ್ನೂ ಓದಿ:ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು 

ಸರ್ಕಾರದ ಈ ಯೋಜನೆಯ ವಿರುದ್ಧ ದೇಶದಾದ್ಯಂತ ಸೇನಾ ಉದ್ಯೋಗಾಕಾಂಕ್ಷಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ಭುಗಿಲೆದ್ದಿದ್ದು, ಹಿಂಸೆಗೆ ತಿರುಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....