Homeಮುಖಪುಟಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

- Advertisement -
- Advertisement -

“ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ” ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ (ಏ.4) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ನಿರ್ಧಾರವನ್ನು ಗೌರವಿಸಿದ್ದಕ್ಕಾಗಿ ಪಕ್ಷದ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. “ತಾನು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ, ಬದಲಾಗಿ ಎನ್‌ಡಿಎ ಪರ ಪ್ರಚಾರ ಮಾಡುವುದಾಗಿ ಈಗಾಗಲೇ ಲಿಖಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೇನೆ” ಎಂದಿದ್ದಾರೆ.

“ನನಗೆ ಟಿಕೆಟ್ ನಿರಾಕರಿಸಲಾಗಿದೆ ಎಂಬುವುದು ಮಾಧ್ಯಮಗಳಲ್ಲಿ ಚರ್ಚೆಯ ವಿಷಯವಾಗಿದೆ. ಹಾಗಾಗಿ, ನಾನು ಇಲ್ಲಿ ಸ್ಪಷ್ಟನೆ ನೀಡುತ್ತಿದ್ದೇನೆ. ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮೊದಲೇ ಹೈಕಮಾಂಡ್‌ಗೆ ತಿಳಿಸಿದ್ದೆ. ನನಗೇ ಆಸಕ್ತಿ ಇಲ್ಲದಿರುವಾಗ ಹೈಕಮಾಂಡ್ ಟಿಕೆಟ್ ಕೊಡಲು ಹೇಗೆ ಸಾಧ್ಯ? ನಾನು ಸ್ಪರ್ಧಿಸಲು ಇಚ್ಚಿಸಿದ್ದರೆ ಎಲ್ಲಿಂದ ಬೇಕಾದರು ಸ್ಪರ್ಧಿಸಬಹುದಿತ್ತು. ಅಲ್ಲಿ ಯಾವ ಕ್ಷೇತ್ರ ಎಂಬ ವಿಚಾರ ಬರುತ್ತಿರಲಿಲ್ಲ” ಎಂದು ಅಣ್ಣಾಮಲೈ ಹೇಳಿದ್ದಾರೆ.

ಎಐಎಡಿಎಂಕೆ ಜೊತೆಗಿನ ಮೈತ್ರಿಯಿಂದಾಗಿ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಎಂಬ ಚರ್ಚೆಗಳ ನಡುವೆ ಅಣ್ಣಾಮಲೈ ಸ್ಪಷ್ಟೀಕರಣ ಕೊಟ್ಟಿದ್ದಾರೆ.

ಕರ್ನಾಟಕ ಕೇಡರ್‌ನ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡಿನಲ್ಲಿ ಬಿಜೆಪಿ ಸೇರಿದವರು. 2021ರಲ್ಲಿ ಅಣ್ಣಾಮಲೈ ಅವರನ್ನು ಬಿಜೆಪಿ ತಮಿಳುನಾಡು ಘಟಕದ ರಾಜ್ಯಾಧ್ಯಕ್ಷನನ್ನಾಗಿ ನೇಮಕ ಮಾಡಲಾಗಿತ್ತು. ಆ ಬಳಿಕ ಅವರು ಪಕ್ಷ ಸಂಘಟನೆ ಕೆಲಸ ಮಾಡುತ್ತಿದ್ದರು.

2024ರ ಲೋಕಸಭೆ ಚುನಾವಣೆಗೆ ಮುನ್ನ ‘ಎನ್‌ ಮಣ್ಣ್ ಎನ್‌ ಮಕ್ಕಳು’ ಎಂಬ ಶೀರ್ಷಿಕೆಯಡಿ ರಾಜ್ಯದಾದ್ಯಂತ ಯಾತ್ರೆಯನ್ನೂ ನಡೆಸಿದ್ದರು. ಅದರೆ, ಇದು ಯಾವುದೂ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಸೋಲಾಯಿತು. ನಂತರ ಬಿಜೆಪಿ ಹೈಕಮಾಂಡ್‌ ಅಣ್ಣಾಮಲೈ ಅವರ ರಾಜ್ಯಾಧ್ಯಕ್ಷ ಸ್ಥಾನವನ್ನು ಕಿತ್ತುಕೊಂಡಿತು.

ಎನ್‌ಡಿಎ ಮೈತ್ರಿಕೂಟದೊಳಗೆ ಮಾತುಕತೆ ನಡೆಸಿದ ನಂತರ, ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ 27 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಅದರಲ್ಲಿ ಅಣ್ಣಾಮಲೈ ಅವರ ಹೆಸರು ಇರಲಿಲ್ಲ. ಹಾಗಾಗಿ, ಬಿಜೆಪಿ ಅಣ್ಣಾಮಲೈ ಅವರನ್ನು ಮೂಲೆಗುಂಪು ಮಾಡಿತು ಎಂಬ ಚರ್ಚೆಗಳು ಗರಿಗೆದರಿತ್ತು. ಅಣ್ಣಾಮಲೈಗೆ ಅತ್ತ ಐಪಿಎಸ್‌ ಹುದ್ದೆಯೂ ಇಲ್ಲ, ಇತ್ತ ಬಿಜೆಪಿಯಲ್ಲೂ ಮನ್ನಣೆ ಇಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ನಡೆಯುತ್ತಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...