ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? ಮರಾಠರು ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಸಮುದಾಯದವರ ಏಳಿಗೆಗೆ ಹಾಗೂ ಜನರಿಗೆ ಒಳ್ಳೆಯದು ಮಾಡಿದರೆ ನಾವು ಬೆಂಬಲ ನೀಡುತ್ತೇವೆ. ಆದರೆ ಅದರ ಹಿಂದೆ ಸಮಾಜವನ್ನು ವಿಭಜಿಸುವ ಉದ್ದೇಶ ಇರುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಎಲ್ಲ ಸಮುದಾಯದ ಜನರನ್ನು ನಾವು ಗೌರವಯುತವಾಗಿ ನೋಡಬೇಕು ಎಂದು ಸಂವಿಧಾನದಲ್ಲಿ ತಿಳಿಸಿದೆ. ಇಷ್ಟು ದಿನ ನಾವು ಎಲ್ಲರನ್ನೂ ಸಮಾನವಾಗಿ ನೋಡುತ್ತಿರಲಿಲ್ಲವೇ? ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? ಮರಾಠರು ಸೇರಿದಂತೆ ರಾಜ್ಯದಲ್ಲಿರುವ ಎಲ್ಲ ಸಮುದಾಯದವರ ಏಳಿಗೆಗೆ ಹಾಗೂ ಜನರಿಗೆ ಒಳ್ಳೆಯದು ಮಾಡಿದರೆ ನಾವು ಬೆಂಬಲ ನೀಡುತ್ತೇವೆ. ಆದರೆ ಅದರ ಹಿಂದೆ ಸಮಾಜವನ್ನು ವಿಭಜಿಸುವ ಉದ್ದೇಶ ಇರುವುದು ಸರಿಯಲ್ಲ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ-ಡಿಕೆಶಿ ಜಗಳ ಶೀಘ್ರವೇ ಬೀದಿಗೆ – ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್
“ಜಾತಿ, ಸಮುದಾಯದ ಹೆಸರಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು. ಬಿಜೆಪಿ ಮೊದಲಿನಿಂದಲೂ ಸಮಾಜ ಒಡೆಯುವ ಕೆಲಸವನ್ನೇ ಮಾಡಿಕೊಂಡು ಬರುತ್ತಿದೆ. ಮರಾಠಿಗರನ್ನು ಪ್ರತ್ಯೇಕವಾಗಿ ನೋಡುವ ಅಗತ್ಯ ಏನಿದೆ? ಈ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದು, ಸದ್ಯ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.
’ಚುನಾವಣೆ ಎದುರಾದ ರಾಜ್ಯಗಳು ಕೇಂದ್ರ ಸರ್ಕಾರದ ಆದ್ಯತೆಯೇ ಹೊರತು ಕರ್ನಾಟಕ ರಾಜ್ಯವಲ್ಲ’
ರಾಜ್ಯ ಆರ್ಥಿಕವಾಗಿ ನಷ್ಟ ಅನುಭವಿಸುತ್ತಿದ್ದರೂ ಈ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ. ಚುನಾವಣೆ ಎದುರಾದ ಬಿಹಾರ, ಪಶ್ಚಿಮ ಬಂಗಾಳ ರಾಜ್ಯಗಳು ಕೇಂದ್ರ ಸರ್ಕಾರದ ಆದ್ಯತೆಯೇ ಹೊರತು ಕರ್ನಾಟಕ ರಾಜ್ಯವಲ್ಲ. ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರದ ಬಳಿ ಮಾತನಾಡಲು ಬಿಜೆಪಿ ನಾಯಕರಿಗೆ ಧ್ವನಿ ಇಲ್ಲವಾಗಿದೆ ಎಂದು ಡಿ.ಕೆ. ಶಿವಕುಮಾರ್ ಕಿಡಿಕಾರಿದರು.
“ನಮ್ಮ ಸರ್ಕಾರ ಇದ್ದಾಗಲೂ ಅವರನ್ನು ಕರೆದುಕೊಂಡು ಹೋದಾಗ ಬಾಯಿ ಬಿಡುತ್ತಿರಲಿಲ್ಲ. ಕೇಂದ್ರದಿಂದ ನೆರವು ಪಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ನಿಮಗೆ ಕೇಳಲು ಆಗದಿದ್ದರೆ ನಮ್ಮನ್ನು ಕರೆದುಕೊಂಡು ಹೋಗಿ. ನಾವು ಕೇಳುತ್ತೇವೆ ಎಂದು ನಮ್ಮ ವಿರೋಧ ಪಕ್ಷದ ನಾಯಕರು ಕೇಳುತ್ತಿದ್ದಾರೆ. ಅದನ್ನೂ ಮಾಡುತ್ತಿಲ್ಲ” ಎಂದು ಅವರು ಹೇಳಿದರು.
ಇದನ್ನೂ ಓದಿ: ಆತನ ಚಾನೆಲ್ ನೋಡುವುದೇ ಇಲ್ಲ: ಅರ್ನಾಬ್‌ಗೆ ಜಾಮೀನು ನೀಡಿದ ನ್ಯಾಯಮೂರ್ತಿ ಹೇಳಿಕೆ!


