Homeಕರ್ನಾಟಕನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

ನೀವೂ ಕೇಳಿರಿ: ಸಂವಿಧಾನ ಪ್ರಸ್ತಾವನೆಯನ್ನು ಹಾಡಾಗಿಸಿದ ವಿಭಿನ್ನ ಪ್ರಯೋಗಗಳಿವು

- Advertisement -
- Advertisement -

ಭಾರತ ಸಂವಿಧಾನದ ಪ್ರಸ್ತಾವನೆಯು ದೇಶದ ನಿಜ ಸ್ವರೂಪವನ್ನು ಸಂಕ್ಷಿಪ್ತವಾಗಿ ಹೇಳುತ್ತದೆ. ‘ನಮಗೆ ನಾವೇ ಅರ್ಪಿಸಿಕೊಂಡಿರುವ ಈ ಸಂವಿಧಾನ’ಕ್ಕೆ ಅಪಚಾರ ಎಸಗುವ ಕೃತ್ಯಗಳು ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಸಂವಿಧಾನದ ಮಹತ್ವವನ್ನು ವಿವಿಧ ಕಲಾ ಮಾಧ್ಯಮಗಳ ಮೂಲಕ ತಿಳಿಸುವ ಪ್ರಯತ್ನಗಾಗುತ್ತಿವೆ. ಸಂವಿಧಾನ ಪೀಠಿಕೆಯನ್ನು ಹಾಡಾಗಿ ಪ್ರಸ್ತುಪಡಿಸುವ ಪ್ರಯೋಗಗಳು ಇತ್ತೀಚಿನ ವರ್ಷಗಳಲ್ಲಿ ಚಾಲನೆ ಪಡೆದಿವೆ.

“ಸಂವಿಧಾನವನ್ನು ನಾವು ರಕ್ಷಿಸಿದರೆ ನಮ್ಮನ್ನು ಸಂವಿಧಾನ ರಕ್ಷಿಸುತ್ತದೆ” ಎಂಬ ಮಾತು ಜನಜನಿತವಾಗಿದೆ. ಸಂವಿಧಾನವನ್ನು ರಕ್ಷಿಸುವ ಕೆಲಸವನ್ನು ಅನೇಕರು ಹಲವು ವಿಧದಲ್ಲಿ ಕರ್ನಾಟಕದಲ್ಲೂ ಮಾಡುತ್ತಿದ್ದಾರೆ. ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ ದಾಸ್‌ ಅವರ ‘ಸಂವಿಧಾನ ಓದು’ ಕೃತಿ ಒಂದು ಆಂದೋಲನದ ಸ್ವರೂಪವನ್ನೇ ಪಡೆದಿದೆ. ಪೀಠಿಕಾ ಭಾಗವನ್ನು ಶಾಲಾ ಮಕ್ಕಳಿಗೆ ಬೋಧಿಸಲಾಗುತ್ತಿದೆ. ಬಹುತೇಕ ಕಾರ್ಯಕ್ರಮಗಳ ಆರಂಭದಲ್ಲಿ ಪ್ರಸ್ತಾವನೆಯನ್ನು ಓದಲಾಗುತ್ತಿದೆ. ಅದರ ಮುಂದುವರಿದ ಭಾಗವಾಗಿ ಪೀಠಿಕಾ ಭಾಗವನ್ನು ಹಾಡಾಗಿ ಪ್ರಸ್ತುತಪಡಿಸುವ ಕೆಲಸವನ್ನು ಹಲವು ಸಂಗೀತಗಾರರು ಮಾಡುತ್ತಿದ್ದಾರೆ.

ಚಿಂತನ್‌ ವಿಕಾಸ್‌ ಪ್ರಯೋಗಕ್ಕೆ ಮೆಚ್ಚುಗೆ

ಕನ್ನಡದ ಯುವ ಗಾಯಕ ಚಿಂತನ್‌ ವಿಕಾಸ್ ಅವರು ಇತ್ತೀಚೆಗೆ ಪೀಠಿಕಾ ಭಾಗವನ್ನು ವಿಶಿಷ್ಟವಾಗಿ ಪ್ರಸ್ತುತಪಡಿಸಿದ್ದಾರೆ. ಚಿಂತನ್‌ ರಾಗ ಸಂಯೋಜನೆ ಮಾಡಿ, ಅವರೇ ಹಾಡಿರುವ ಪೀಠಿಕಾ ಭಾಗವನ್ನು ‘ಈದಿನ.ಕಾಂ’ ಪ್ರಸಾರ ಮಾಡಿದೆ. ‘ಈ’ ವಿಡಿಯೊವನ್ನು ಸಾವಿರಾರು ಜನರು ವೀಕ್ಷಿಸಿದ್ದಾರೆ. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪೀಠಿಕೆಯನ್ನು ಚಿಂತನ್‌ ಹಾಡಿದ್ದಾರೆ.

ಚಿಂತನ್ ವಿಕಾಸ್‌

ಪಿಚ್ಚಳ್ಳಿ ಶ್ರೀನಿವಾಸ್ ಗಾಯನ

ದಲಿತ ಚಳವಳಿಯ ಹೋರಾಟದ ಗೀತೆಗೆಳಿಗೆ ಧ್ವನಿ ನೀಡಿದವರಲ್ಲಿ ಒಬ್ಬರಾದ ಪಿಚ್ಚಳ್ಳಿ ಶ್ರೀನಿವಾಸ್ ಅವರು ಇತ್ತೀಚೆಗೆ ಸಂವಿಧಾನದ ಪೀಠಿಕಾ ಭಾಗವನ್ನು ಹಾಡಿದ್ದಾರೆ. ರಾಗ ಸಂಯೋಜನೆ ಹಾಗೂ ಗಾಯನವನ್ನು ಪಿಚ್ಚಳ್ಳಿಯವರೇ ಮಾಡಿದ್ದು, ಸಾರಂಗ ಆಡಿಯೊ ಮಾಲೂರು (ಎಸ್‌.ಪಿ.ಚಕ್ರವರ್ತಿ) ವತಿಯಿಂದ ಧ್ವನಿಮುದ್ರಣ ಮಾಡಲಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ದಿನಗಳ ಹಿಂದೆ ಪಿಚ್ಚಳ್ಳಿಯವರ ಗಾಯನ ವೈರಲ್ ಆಗಿತ್ತು.

ಪಿಚ್ಚಳ್ಳಿ ಶ್ರೀನಿವಾಸ್‌

ಇಂಗ್ಲಿಷ್ ಪ್ರಯೋಗಕ್ಕೆ ಭಾರೀ ಮೆಚ್ಚುಗೆ

ಇಂಗ್ಲಿಷ್‌ನಲ್ಲಿ ಪೀಠಿಕಾ ಭಾಗವನ್ನು ಗಾಯನ ಮಾಡಲಾಗಿದ್ದು, ಒಂದು ಲಕ್ಷಕ್ಕೂ ಹೆಚ್ಚು ಜನರು ವೀಕ್ಷಣೆ ಮಾಡಿದ್ದಾರೆ. ಭಾರತದ ವೈವಿಧ್ಯತೆಯನ್ನು ಕಟ್ಟಿಕೊಡುವ ದೃಶ್ಯಗಳನ್ನು ವಿಡಿಯೊದಲ್ಲಿ ಬಳಸಲಾಗಿದೆ. ಮಂಜಿಲ್ ಮಿಸ್ಟಿಕ್ಸ್ ಮಾಡಿರುವ ರಾಗ ಸಂಯೋಜನೆಗೆ, ಮನೀಶ್ ಸಂಗೀತ ನಿರ್ಮಾಣ ಮಾಡಿದ್ದಾರೆ.

ಹಿಂದಿ ಭಾಷೆಯಲ್ಲಿ ಸಂವಿಧಾನದ ಪೀಠಿಕಾ ಭಾಗವನ್ನು ಹಾಡುವ ಪ್ರಯೋಗಗಳಾಗಿರುವುದನ್ನು ಗಮನಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...