Homeಮುಖಪುಟಸಿನಿಮಾ ವೀಕ್ಷಿಸಿ ಅಕ್ಬರ್, ಹುಮಾಯೂನ್ ರಸ್ತೆಗಳ ನಾಮಫಲಕಕ್ಕೆ ಮಸಿ ಬಳಿದ ದುಷ್ಕರ್ಮಿಗಳು

ಸಿನಿಮಾ ವೀಕ್ಷಿಸಿ ಅಕ್ಬರ್, ಹುಮಾಯೂನ್ ರಸ್ತೆಗಳ ನಾಮಫಲಕಕ್ಕೆ ಮಸಿ ಬಳಿದ ದುಷ್ಕರ್ಮಿಗಳು

- Advertisement -
- Advertisement -

ಮರಾಠಾ ರಾಜ ಛತ್ರಪತಿ ಸಂಭಾಜಿ ಅವರ ಕುರಿತಾದ ವಿಕ್ಕಿ ಕೌಶಲ್ ಅಭಿನಯದ ಕಾಲ್ಪನಿಕ ಹಿಂದಿ ಚಲನಚಿತ್ರ ‘ಛಾವಾ’ವನ್ನು ವೀಕ್ಷಿಸಿದ ದುಷ್ಕರ್ಮಿಗಳ ಗುಂಪೊಂದು ಅಕ್ಬರ್ ಮತ್ತು ಹುಮಾಯೂನ್ ಹೆಸರಿನ ರಸ್ತೆಯ ನಾಮಫಲಕಗಳಿಗೆ ಕಪ್ಪು ಬಣ್ಣ ಬಳಿದು, ಛತ್ರಪತಿ ಶಿವಾಜಿಯ ಪೋಸ್ಟರ್‌ಗಳನ್ನು ಅಂಟಿಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸಿನಿಮಾ ವೀಕ್ಷಿಸಿ

ನವದೆಹಲಿಯ ಅಕ್ಬರ್ ರಸ್ತೆ ಮತ್ತು ಹುಮಾಯೂನ್ ರಸ್ತೆಯಲ್ಲಿರುವ ನಾಮಫಲಕಗಳಿಗೆ ಕಪ್ಪು ಬಣ್ಣ ಬಳಿದು, ಛತ್ರಪತಿ ಶಿವಾಜಿಯ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮರಾಠಾ ರಾಜ ಛತ್ರಪತಿ ಸಂಭಾಜಿ ಅವರ ಕುರಿತಾದ ಕಾಲ್ಪನಿಕ ಕತೆಯನ್ನು ಒಳಗೊಂಡ, ವಿಕ್ಕಿ ಕೌಶಲ್ ಅಭಿನಯದ ಹಿಂದಿ ಚಲನಚಿತ್ರ ‘ಛಾವಾ’ವನ್ನು ವೀಕ್ಷಿಸಿದ ದುಷ್ಕರ್ಮಿಗಳ ಗುಂಪೊಂದು ಈ ಕೃತ್ಯ ಎಸಗಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕೃತ್ಯದ ಅನೇಕ ವೀಡಿಯೊಗಳು ಕಾಣಿಸಿಕೊಂಡಿದ್ದು, ಕೆಲವು ಯುವಕರು ನಾಮಫಲಕಗಳ ಮೇಲೆ ಕಪ್ಪು ಸ್ಪ್ರೇ ಹಚ್ಚಿ ಮರಾಠಾ ಸಾಮ್ರಾಜ್ಯದ ಸ್ಥಾಪಕ ಶಿವಾಜಿಯ ಚಿತ್ರಗಳನ್ನು ಅಂಟಿಸಿರುವುದನ್ನು ತೋರಿಸಲಾಗಿದೆ. ಶಿವಾಜಿಯ ಮಗ ಸಂಭಾಜಿ ಮರಾಠ ಸಾಮ್ರಾಜ್ಯದ ಎರಡನೇ ರಾಜ. ಸಿನಿಮಾ ವೀಕ್ಷಿಸಿ

ಪೊಲೀಸ್ ತಂಡಗಳು ಮತ್ತು ಸ್ಥಳೀಯ ಸಂಸ್ಥೆಯ ಅಧಿಕಾರಿಗಳನ್ನು ತಕ್ಷಣ ಸ್ಥಳಕ್ಕೆ ಕಳುಹಿಸಲಾಗಿದೆ ಮತ್ತು ವಿರೂಪಗೊಂಡ ನಾಮಫಲಕಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿದ್ದು, ಅಪರಾಧಿಗಳನ್ನು ಗುರುತಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಮತ್ತಷ್ಟು ವಿಧ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ವರದಿ ಹೇಳಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ತೆಲಂಗಾಣ | ಶ್ರೀಶೈಲಂ ಕಾಲುವೆಯ ಸುರಂಗ ಕುಸಿತ : ಅವಶೇಷಗಳಡಿ 7 ಕಾರ್ಮಿಕರು ಸಿಲುಕಿರುವ ಶಂಕೆ

ತೆಲಂಗಾಣ | ಶ್ರೀಶೈಲಂ ಕಾಲುವೆಯ ಸುರಂಗ ಕುಸಿತ : ಅವಶೇಷಗಳಡಿ 7 ಕಾರ್ಮಿಕರು ಸಿಲುಕಿರುವ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...