Homeಮುಖಪುಟವೀಕ್ಷಿಸಿ | ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ವಂದೇ ಭಾರತ್ ರೈಲು ಪ್ರಯಾಣಿಕನಿಗೆ ಥಳಿತ!

ವೀಕ್ಷಿಸಿ | ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ವಂದೇ ಭಾರತ್ ರೈಲು ಪ್ರಯಾಣಿಕನಿಗೆ ಥಳಿತ!

- Advertisement -
- Advertisement -

ಬಿಜೆಪಿ ಶಾಸಕನಿಗೆ ಸೀಟು ನೀಡಲು ನಿರಾಕರಿಸಿದ ಕಾರಣ ದೆಹಲಿ-ಭೋಪಾಲ್ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಥಳಿಸಲಾಗಿದೆ ಎಂದು ಎನ್‌ಡಿಟಿವಿ ಸೋಮವಾರ ವರದಿ ಮಾಡಿದೆ. ಘಟನೆ ಕಳೆದ ವಾರದ ಗುರುವಾರದಂದು ನಡೆದಿದ್ದು, ಉತ್ತರ ಪ್ರದೇಶದ ಝಾನ್ಸಿಯ ಶಾಸಕರಾದ ಬಿಜೆಪಿಯ ರಾಜೀವ್ ಸಿಂಗ್ ತಮ್ಮ ಪತ್ನಿ ಮತ್ತು ಮಗನೊಂದಿಗೆ ತಮ್ಮ ಕ್ಷೇತ್ರಕ್ಕೆ ಪ್ರಯಾಣಿಸುತ್ತಿದ್ದಾಗ ಪ್ರಯಾಣಿಕನಿಗೆ ಥಳಿಸಲಾಗಿದೆ ಎಂದು ವರದಿ ಹೇಳಿದೆ. ವೀಕ್ಷಿಸಿ | ಬಿಜೆಪಿ ಶಾಸಕನಿಗೆ

ಶಾಸಕ ರಾಜೀವ್ ಸಿಂಗ್ ಅವರಿಗೆ ರೈಲು ಬೋಗಿಯ ಹಿಂಭಾಗದಲ್ಲಿ ಆಸನ ಸಿಕ್ಕಿತ್ತು. ಆದರೆ ಅವರ ಕುಟುಂಬ ಸದಸ್ಯರು ಮುಂಭಾಗದಲ್ಲಿ ಇದ್ದರು. ಈ ವೇಳೆ ಶಾಸಕ ಪ್ರಯಾಣಿಕರೊಬ್ಬರ ಜೊತೆಗೆ ಸೀಟು ಬದಲಾಯಿಸಲು ಕೇಳಿಕೊಂಡಿದ್ದರು. ಆದರೆ ಪ್ರಯಾಣಿಕ ಇದಕ್ಕೆ ನಿರಾಕರಿಸಿದ್ದರು.

ಅದಾಗ್ಯೂ, ರಾಜೀವ್‌ ಸಿಂಗ್ ಅವರ ಆಪ್ತರು ಎನ್ನಲಾದ ಕೆಲವು ದುಷ್ಕರ್ಮಿಗಳು ಝಾನ್ಸಿ ನಿಲ್ದಾಣದಲ್ಲಿ ರೈಲು ಹತ್ತಿ ಭೋಪಾಲ್‌ಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಘಟನೆಯ ವಿಡಿಯೊ ವೈರಲ್ ಆಗಿದ್ದು, ವೀಡಿಯೊದಲ್ಲಿ ಹಲವು ವ್ಯಕ್ತಿಗಳು ಪ್ರಯಾಣಿಕ ತನ್ನ ಸೀಟಿನಲ್ಲಿದ್ದಾಗ ಅವರ ಮೇಲೆ ಗುದ್ದಾಟ ನಡೆಸಿದ್ದಾರೆ.

ಜೊತೆಗೆ ದುಷ್ಕರ್ಮಿಗಳು ಚಪ್ಪಲಿಗಳನ್ನು ಬಳಸಿ ಹಲ್ಲೆ ನಡೆಸುತ್ತಿರುವುದನ್ನು ಸಹ ವಿಡಿಯೊದಲ್ಲಿ ದಾಖಲಾಗಿದೆ. ವೀಡಿಯೊದಲ್ಲಿ ಸಂತ್ರಸ್ತ ವ್ಯಕ್ತಿಯ ಮೂಗಿನಿಂದ ರಕ್ತ ಸೋರುತ್ತಿರುವುದನ್ನು ಮತ್ತು ಅವರ ಬಟ್ಟೆಗಳು ರಕ್ತದಲ್ಲಿ ತೊಯ್ದಿರುವುದನ್ನು ಸಹ ರೆಕಾರ್ಡ್‌ ಆಗಿದೆ.

ಸೀಟು ಬದಲಾಯಿಸುವ ವಿಚಾರದಲ್ಲಿ ಈ ವಾಗ್ವಾದ ನಡೆದಿದೆ ಎಂದು ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ (ಝಾನ್ಸಿ) ವಿಪುಲ್ ಕುಮಾರ್ ಶ್ರೀವಾಸ್ತವ ಅವರು ದೃಢಪಡಿಸಿದ್ದಾರೆ ಎಂದು ಎನ್‌ಡಿಟಿವಿ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಅದಾಗ್ಯೂ, ರಾಜೀವ್ ಸಿಂಗ್ ಅವರೇ ಪ್ರಯಾಣಿಕನ ವಿರುದ್ಧ ದೂರು ನೀಡಿದ್ದು, ಹಾಗಾಗಿ ಝಾನ್ಸಿಯ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್‌ಪಿ) ನಾನ್-ಕಾಗ್ನಿಜೇಬಲ್ ರಿಪೋರ್ಟ್ (ಎನ್‌ಸಿಆರ್) ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. ರಾಜೀವ್ ತಮ್ಮ ದೂರಿನಲ್ಲಿ, ತಮ್ಮ ಪತ್ನಿ ಮತ್ತು ಮಗನೊಂದಿಗೆ ಪ್ರಯಾಣಿಸುತ್ತಿದ್ದಾಗ ಸಹ-ಪ್ರಯಾಣಿಕರೊಬ್ಬರು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವೀಕ್ಷಿಸಿ | ಬಿಜೆಪಿ ಶಾಸಕನಿಗೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...