Homeಕರ್ನಾಟಕಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

ಬ್ಲೂಫಿಲ್ಮ್ ನೋಡುವುದು ಕೂಡಾ ಡ್ರಗ್ಸ್‌ನಂತೆಯೆ ವ್ಯಸನ: ಡಿಸಿಎಂ ಸವದಿ ಕಾಲೆಳೆದ ಸಾ.ರಾ. ಮಹೇಶ್

2012 ರಲ್ಲಿ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ಬ್ಲೂ ಫಿಲಂ ನೋಡಿದ್ದಾರೆ ಎಂಬ ಆರೋಪ ಲಕ್ಷ್ಮಣ ಸವದಿ ಸೇರಿದಂತೆ ಇತರರ ಮೇಲೆ ಕೇಳಿ ಬಂದಿತ್ತು.

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್‌ ಜಾಲದ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿದ್ದು, ಇದರ ಸುತ್ತ ರಾಜಕೀಯ ಕೆಸರೆರಚಾಟಗಳೂ ನಡೆಯುತ್ತಿವೆ. ಈ ನಡುವೆ ಜೆಡಿಎಸ್ ಶಾಸಕ ಸಾರಾ ಮಹೇಶ್ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಉಲ್ಲೇಖಿಸಿ, ’ಬ್ಲೂಫಿಲಂ ನೋಡುವುದು ಕೂಡಾ ವ್ಯಸನ’ ಎನ್ನುವ ಮೂಲಕ ಕಾಲೆಳೆದಿದ್ದಾರೆ.

2012 ರಲ್ಲಿ ಲಕ್ಷ್ಮಣ ಸವದಿ, ಕೃಷ್ಣ ಜೆ ಪಾಲೇಮಾರ್ ಮತ್ತು ಸಿಸಿ ಪಾಟೀಲ್ ಮೇಲೆ ವಿಧಾನಸಭಾ ಅಧಿವೇಶನ ನಡೆಯುತ್ತಿರುವಾಗ ಬ್ಲೂ ಫಿಲ್ಮ್ ನೋಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಇದನ್ನೂ ಓದಿ: 13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

ಡ್ರಗ್ಸ್ ಜಾಲ ಕ್ರಿಯಾಶೀಲರಾಗಿರುವುದರ ಬಗ್ಗೆ ರಾಜ್ಯದಲ್ಲಿ ವರದಿಯಾಗುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ‘ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್ ದಂಧೆಕೋರರು’ ಎಂದು ಹೇಳಿದ್ದರು.

ಇದಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, “ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್‌ ದಂಧೆಕೋರರು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ನೋಡಿ ನಗು ಬಂತು. ಅವರು ಹೇಳಿದ ಮಾತು ಕುಣಿಯಲು ಬಾರದವರು ನೆಲ ಡೊಂಕು ಎನ್ನುವಂತಿದೆ” ಎಂದು ಪ್ರತಿಕ್ರಿಯಿಸಿದ್ದರು.

ಇದಕ್ಕೆ ವ್ಯಂಗ್ಯವಾಡಿರುವ ಜೆಡಿಎಸ್‌ ಶಾಸಕ ಸಾ. ರಾ. ಮಹೇಶ್, “‌ಡ್ರಗ್ಸ್‌ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‌ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲ್ಮ್ ನೋಡುವ ಅಡಿಕ್ಷನ್‌ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯಸನವೇ. ಡ್ರಗ್ಸ್‌ ಆದರೂ, ಬ್ಲೂ ಫಿಲ್ಮ್ ಆದರೂ…” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಈ ಮಧ್ಯೆ ಡ್ರಗ್ಸ್ ಜಾಲದಲ್ಲಿ 13 ಕ್ವಿಂಟಾಲ್ ಗಾಂಜಾವನ್ನು ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ವಶಪಡಿಸಿಕೊಂಡಿದ್ದು,  ಬಂಧಿತ ಆರೋಪಿ ಚಂದ್ರಕಾಂತ್‌ ಬಿಜೆಪಿಯ ಕಾರ್ಯಕರ್ತ; ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳಿಗೆ ಬಿಜೆಪಿ ತಾಣವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ರಾಜ್ಯ ಬಿಜೆಪಿ ವಕ್ತಾರ ಗಣೇಶ್ ಕಾರ್ಣಿಕ್, “ಕಲಬುರಗಿಯಲ್ಲಿ ಗಾಂಜಾ ವಶ ಪ್ರಕರಣದ ಆರೋಪಿ ಚಂದ್ರಕಾಂತನಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಕಳೆದ ವರ್ಷ ಆತ ಸ್ವಯಂಪ್ರೇರಿತವಾಗಿ ಪಕ್ಷದ ಪರ ಪ್ರಚಾರ ಮಾಡಿದ್ದಾರೆಯೇ ಹೊರತು ಪಕ್ಷದ ಸದಸ್ಯತ್ವವನ್ನೇನೂ ಪಡೆದಿಲ್ಲ ಹಾಗೂ ಪದಾಧಿಕಾರಿಯಲ್ಲ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಡ್ರಗ್ಸ್ ದಂಧೆ – ಬೆಚ್ಚದಿರಿ: ವಿವರಗಳಷ್ಟೇ, ಯಾರ ಹೆಸರುಗಳೂ ಇಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...