Homeಮುಖಪುಟಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ POCSO ಕಾಯ್ದೆಯಡಿಯಲ್ಲಿ ಅಪರಾಧವಲ್ಲ: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಮಕ್ಕಳ ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸುವುದು ಮಕ್ಕಳ ಲೈಂಗಿಕ ಅಪರಾಧಗಳಿಂದ ರಕ್ಷಿಸುವ (ಪೋಕ್ಸೊ) ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪಿನಲ್ಲಿ ಹೇಳಿದ್ದು, ಈ ಕುರಿತು ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.

ನ್ಯಾಯಮೂರ್ತಿ ಆನಂದ ವೆಂಕಟೇಶ್ ಅವರ ಪೀಠ, ಪೋಕ್ಸೊ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ ಮಗುವನ್ನು ಅಥವಾ ಮಕ್ಕಳನ್ನು ಅಶ್ಲೀಲ ಉದ್ದೇಶಗಳಿಗಾಗಿ ಬಳಸಿರಬೇಕು ಎಂದು ಗಮನಿಸಿದ್ದು, ಪ್ರಸ್ತುತ ಪ್ರಕರಣದಲ್ಲಿ ಆರೋಪಿಗಳು ಅಶ್ಲೀಲ ವೀಡಿಯೊಗಳನ್ನು ವೀಕ್ಷಿಸಿದ್ದಾರೆ ಆದರೆ ಅಶ್ಲೀಲ ಉದ್ದೇಶಗಳಿಗಾಗಿ ಮಗುವನ್ನು ಅಥವಾ ಮಕ್ಕಳನ್ನು ಬಳಸಿಲ್ಲ ಎಂಬುವುದನ್ನು ಕಂಡುಕೊಂಡಿದ್ದಾರೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ-2012ರ ಸೆಕ್ಷನ್ 14(1)ರ ಅಡಿಯಲ್ಲಿ ಅಪರಾಧವನ್ನು ಪರಿಗಣಿಸಲು ಮಗುವನ್ನು ಅಥವಾ ಮಕ್ಕಳನ್ನು ಅಶ್ಲೀಲ ಉದ್ದೇಶಗಳಿಗಾಗಿ ಬಳಸಿರಬೇಕು. ಆರೋಪಿಯು ಮಕ್ಕಳ ಅಶ್ಲೀಲ ವೀಡಿಯೊವನ್ನು ವೀಕ್ಷಿಸಿದ್ದಾರೆ ಎಂದು ಭಾವಿಸಿದರೂ ಅದು ಕಟ್ಟುನಿಟ್ಟಾಗಿ ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ- 2012ರ ಸೆಕ್ಷನ್ 14(1)ರ ವ್ಯಾಪ್ತಿಗೆ ಬರುವುದಿಲ್ಲ.

ಪ್ರಸ್ತುತ ಪ್ರಕರಣದಲ್ಲಿ ಹೆಚ್ಚುವರಿ ಉಪ ಪೊಲೀಸ್ ಆಯುಕ್ತರಿಗೆ ಬಂದ ಪತ್ರದ ಆಧಾರದ ಮೇಲೆ ಆರೋಪಿಯ ವಿರುದ್ಧ ಮೊಬೈಲ್‌ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಡೌನ್‌ಲೋಡ್ ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಸಮಯದಲ್ಲಿ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಯಿತು ಮತ್ತು ಫೋರೆನ್ಸಿಕ್ ವಿಶ್ಲೇಷಣೆಯನ್ನು ನಡೆಸಲಾಗಿದೆ. ಈ ವೇಳೆ ಮೊಬೈಲ್ ಫೋನ್‌ನಲ್ಲಿ ಹದಿಹರೆಯದ ಹುಡುಗರದ್ದು ಒಳಗೊಂಡ ಮಕ್ಕಳ ಅಶ್ಲೀಲ ವಿಡಿಯೋ ಸೇರಿದಂತೆ ಎರಡು ಫೈಲ್‌ಗಳನ್ನು ಹೊಂದಿತ್ತು. ಮಾಹಿತಿ ತಂತ್ರಜ್ಞಾನ ಕಾಯಿದೆ 200 ಮತ್ತು POCSO ಕಾಯಿದೆಯ ಸೆಕ್ಷನ್ 14(1) ರ ಸೆಕ್ಷನ್ 67B ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದರಿಂದಾಗಿ ಆರೋಪಿ ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಐಟಿ ಕಾಯಿದೆಯ ಸೆಕ್ಷನ್ 67 ಬಿ ಅಡಿಯಲ್ಲಿ ಆರೋಪಿಯು ಮಕ್ಕಳ ಅಶ್ಲೀಲ ಚಿತ್ರಗಳು ಅಥವಾ ವಿಡಿಯೋಗಳನ್ನು ಪ್ರಕಟಿಸಬೇಕು, ರವಾನಿಸಬೇಕು ಮತ್ತು ರಚಿಸಿರಬೇಕು. ಒಬ್ಬ ವ್ಯಕ್ತಿಯು ತನ್ನ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ಮಕ್ಕಳ ಅಶ್ಲೀಲತೆಯನ್ನು ಡೌನ್‌ಲೋಡ್ ಮಾಡಿ ಹೆಚ್ಚಿನದನ್ನು ಮಾಡದೆ ಅದನ್ನು ವೀಕ್ಷಿಸಿದ ಎಂದರೆ ಈ ಕಾಯ್ದೆಯಡಿ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದ್ದಾರೆ.

ಒಬ್ಬ ವ್ಯಕ್ತಿ ಅಶ್ಲೀಲ ಚಿತ್ರಗಳನ್ನು ನೋಡುವುದು ಅಪರಾಧವಲ್ಲ ಎಂದು ಗಮನಿಸಿದ ಕೇರಳ ಹೈಕೋರ್ಟ್‌ನ ಆದೇಶವನ್ನು ಕೂಡ ವಿಚಾರಣೆ ವೇಳೆ ನ್ಯಾಯಾಲಯವು ಉಲ್ಲೇಖಿಸಿದೆ. ಪ್ರಕರಣದಲ್ಲಿ ಐಟಿ ಕಾಯ್ದೆ ಅಥವಾ ಪೋಕ್ಸೊ ಕಾಯ್ದೆಯಡಿ ಅಪರಾಧವನ್ನು ಮಾಡಿಲ್ಲ ಎಂದು ಗಮನಿಸಿದ ನ್ಯಾಯಾಲಯ, ವಿಚಾರಣೆಯನ್ನು ಮುಂದುವರಿಸುವುದು ನ್ಯಾಯಾಲಯದ ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಂತೆ ಮತ್ತು ಆರೋಪಿಯ ವೃತ್ತಿಜೀವನಕ್ಕೆ ಅಡ್ಡಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ನ್ಯಾಯಾಲಯವು ಕ್ರಿಮಿನಲ್ ವಿಚಾರಣೆಯನ್ನು ರದ್ದುಗೊಳಿಸಿದೆ.

ಇದನ್ನು ಓದಿ: 2 ತಿಂಗಳ ಅವಧಿಯಲ್ಲಿ UAPAಯಡಿ 9 ಮುಸ್ಲಿಂ ಯುವಕರನ್ನು ಬಂಧಿಸಿದ ಉತ್ತರಪ್ರದೇಶದ ಎಟಿಎಸ್‌!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...