Homeಮುಖಪುಟರಾಜಕೀಯ ಮೇಲಾಟದ ನಡುವೆ ದೆಹಲಿಯಲ್ಲಿ ತೀವ್ರಗೊಂಡ ಜಲ ಬಿಕ್ಕಟ್ಟು; ಹಿಂಸಾಚಾರಕ್ಕೆ ಮುಂದಾದ ಜನರು

ರಾಜಕೀಯ ಮೇಲಾಟದ ನಡುವೆ ದೆಹಲಿಯಲ್ಲಿ ತೀವ್ರಗೊಂಡ ಜಲ ಬಿಕ್ಕಟ್ಟು; ಹಿಂಸಾಚಾರಕ್ಕೆ ಮುಂದಾದ ಜನರು

- Advertisement -
- Advertisement -

ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ತೀವ್ರತರವಾದ ಶಾಖದ ಅಲೆಯ ನಡುವೆಯೂ ಜಲ ಬಿಕ್ಕಟ್ಟು ಸಹ ಉಲ್ಬಣಗೊಂಡಿದ್ದು, ದೆಹಲಿಯಲ್ಲಿನ ನೀರಿನ ಸಮಸ್ಯೆ ಕಗ್ಗಂಟಾಗಿ ಉಳಿದಿದೆ. ನೀರಿನ ಕೊರತೆಯಿಂದ ಕಂಗೆಟ್ಟ ಜನರು ಹಿಂಸಾಚಾರಕ್ಕೆ ಮುಂದಾಗಿದ್ದು, ದ್ವಾರಕಾದಲ್ಲಿ ಸಾರ್ವಜನಿಕ ನಲ್ಲಿಯಿಂದ ನೀರು ತುಂಬಿಸುವ ವಿವಾದದಲ್ಲಿ ಮೂವರು ಗಾಯಗೊಂಡಿದ್ದಾರೆ. ದ್ವಾರಕಾ ಸೆಕ್ಟರ್ 23 ರಲ್ಲಿ ನಡೆದ ಜಗಳದ ಕುರಿತು ಎರಡು ಪಿಸಿಆರ್ ಕರೆಗಳು ಬಂದಿವೆ ಮತ್ತು ತನಿಖೆಗಾಗಿ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

“ಆರಂಭದಲ್ಲಿ, ವಿವಾದದಿಂದಾಗಿ ಮೂವರು ಗಾಯಗೊಂಡಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ ಮತ್ತು ಅವರನ್ನು ಚಿಕಿತ್ಸೆಗಾಗಿ ಇಂದಿರಾ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡೂ ಕಡೆಯವರ ಹೇಳಿಕೆಗಳ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಮಧ್ಯಪ್ರವೇಶಿಸುವಂತೆ ಆಪ್ ಶಾಸಕರು ಒತ್ತಾಯಿಸಿದ್ದಾರೆ. ಭಾನುವಾರ ಕೇಂದ್ರ ಜಲಶಕ್ತಿ ಸಚಿವ ಸಿಆರ್ ಪಾಟೀಲ್ ಅವರಿಗೆ ಪತ್ರ ಸಲ್ಲಿಸಿದ್ದು, ಹರಿಯಾಣ ರಾಷ್ಟ್ರ ರಾಜಧಾನಿಗೆ ನೀರು ಸರಬರಾಜು ಮಾಡುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ದೆಹಲಿ ನಿವಾಸಿಗಳಿಗೆ ತಕ್ಷಣದ ಪರಿಹಾರವನ್ನು ಒದಗಿಸುವಂತೆ ಒತ್ತಾಯಿಸಿದೆ.

ದೆಹಲಿಯಲ್ಲಿ ನೀರಿನ ಸಮಸ್ಯೆ ಪ್ರತಿ ಕ್ಷಣವೂ ಗಂಭೀರವಾಗುತ್ತಿದೆ ಎಂದು ಎಎಪಿ ಶಾಸಕ ದಿಲೀಪ್ ಪಾಂಡೆ ಹೇಳಿದ್ದಾರೆ. “ತೀವ್ರ ಶಾಖವಿದ್ದು, ಈ ಬಿಸಿಲಿನ ತಾಪದಲ್ಲಿ ನೀರೇ ಜೀವನ, ನೀರಿನ ಬಿಕ್ಕಟ್ಟು ಎಂದರೆ ಜೀವನ ಬಿಕ್ಕಟ್ಟು” ಎಂದು ಪಾಂಡೆ ಹೇಳಿದರು.

ಪಕ್ಷದ ಎಲ್ಲ ಶಾಸಕರು ಶನಿವಾರ ಕೇಂದ್ರ ಜಲ ಶಕ್ತಿ ಸಚಿವರಿಗೆ ಪತ್ರ ಬರೆದಿದ್ದಾರೆ, ಅವರ ಎಲ್ಲ ಸಾರ್ವಜನಿಕ ಮತ್ತು ವೈಯಕ್ತಿಕ ಫೋನ್ ಸಂಖ್ಯೆಗಳಿಗೆ ಇಮೇಲ್ ಮತ್ತು ಸಂದೇಶ ಕಳುಹಿಸಿದ್ದಾರೆ. ದೆಹಲಿಯಲ್ಲಿ ಗಂಭೀರ ನೀರಿನ ಸಮಸ್ಯೆ ಇದೆ ಎಂದು ಹೇಳಿದ್ದಾರೆ ಎಂದು ಎಎಪಿ ನಾಯಕ ಹೇಳಿದರು. ಆದರೆ, ನಮ್ಮ ಭೇಟಿ ವೇಳೆ ಪಾಟೀಲ್ ಅವರ ನಿವಾಸದಲ್ಲಿ ಇರಲಿಲ್ಲ ಎಂದು ಎಎಪಿ ನಾಯಕರು ಹೇಳಿದ್ದಾರೆ.

ನಗರದ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ನೇತೃತ್ವದ ದೆಹಲಿ ಸರ್ಕಾರದ ವಿರುದ್ಧ ಬಿಜೆಪಿ ಭಾನುವಾರ ‘ಮಟ್ಕಾ ಫೋಡ್’ ಪ್ರತಿಭಟನೆ ನಡೆಸಿತು. ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ನೇತೃತ್ವದಲ್ಲಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ನೀರಿನ ಕೊರತೆಯ ಕುರಿತು ನಗರದ 14 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರದ ದುರಾಡಳಿತವನ್ನು ಆರೋಪಿಸಿದ ಸಚ್‌ದೇವ, “ದೆಹಲಿಯಲ್ಲಿ ನೀರಿನ ಕೊರತೆಯು ನೈಸರ್ಗಿಕ ಕಾರಣಗಳಿಂದಲ್ಲ. ಆದರೆ, ಆಮ್ ಆದ್ಮಿ ಪಕ್ಷದ ಅಸಮರ್ಪಕ ನಿರ್ವಹಣೆ ಮತ್ತು ನಿರ್ಲಕ್ಷ್ಯದ ಪರಿಣಾಮವಾಗಿದೆ ಎಂದು ನಾವು ಯಾವಾಗಲೂ ಸಮರ್ಥಿಸಿಕೊಂಡಿದ್ದೇವೆ” ಎಂದು ಹೇಳಿದರು.

ಇದನ್ನೂ ಓದಿ; ದೆಹಲಿ: ಜಲ ಮಂಡಳಿ ಕಚೇರಿ ಧ್ವಂಸಗೊಳಿಸಿದ ಬಿಜೆಪಿ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...