Homeಮುಖಪುಟವಯನಾಡ್‌ ದುರಂತಕ್ಕೆ ಸಿಗದ ಪರಿಹಾರ ಪ್ಯಾಕೇಜ್ - ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

ವಯನಾಡ್‌ ದುರಂತಕ್ಕೆ ಸಿಗದ ಪರಿಹಾರ ಪ್ಯಾಕೇಜ್ – ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

- Advertisement -
- Advertisement -

ರಾಜಕೀಯ ಕಾರಣಕ್ಕಾಗಿ ವಯನಾಡು ಭೂಕುಸಿತದ ಸಂತ್ರಸ್ತರಿಗೆ ಕೇಂದ್ರ ಸರ್ಕಾರವು ನೆರವು ನಿರಾಕರಿಸುತ್ತಿದೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಶನಿವಾರ ಆರೋಪಿಸಿದ್ದು, ನೈಸರ್ಗಿಕ ವಿಕೋಪಗಳ ಸಮಯದಲ್ಲಿ ಸರ್ಕಾರವು ಯಾವುದೇ ತಾರತಮ್ಯ ಮಾಡಬಾರದು ಎಂದು ಪ್ರತಿಪಾದಿಸಿದ್ದಾರೆ. ವಯನಾಡ್‌ ದುರಂತಕ್ಕೆ

ಕೇಂದ್ರದ ತಾರತ್ಯಮ ನೀತಿಯನ್ನು ವಿರೋಧಿಸಿ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಕೇರಳದ ಸಂಸದರು ಶನಿವಾರ ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ ನಂತರ, ಭೂಕುಸಿತ ಪೀಡಿತ ವಯನಾಡ್‌ಗೆ ಕೇಂದ್ರದಿಂದ ಪರಿಹಾರ ಪ್ಯಾಕೇಜ್‌ಗೆ ಒತ್ತಾಯಿಸಿ ಅವರು ಈ ಹೇಳಿಕೆ ನೀಡಿದ್ದಾರೆ. ವಯನಾಡ್‌ ದುರಂತಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಜಸ್ಟೀಸ್ ಫಾರ್ ವಯನಾಡ್, ವಯನಾಡ್‌ಗೆ ಪರಿಹಾರ ಪ್ಯಾಕೇಜ್ ಒದಗಿಸಿ” ಎಂದು ಬರೆದಿರುವ ಬ್ಯಾನರ್ ಕೂಡ ಹಿಡಿದು ಮಕರ ದ್ವಾರದ ಮೆಟ್ಟಿಲುಗಳ ಮುಂದೆ ತಮ್ಮ ಪ್ರತಿಭಟನೆಯನ್ನು ನಡೆಸಿದ ಅವರು, “ವಯನಾಡಿಗೆ ನ್ಯಾಯ ನೀಡಿ” ಎಂಬ ಘೋಷಣೆಗಳನ್ನು ಕೂಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಸರ್ಕಾರವು ವಯನಾಡಿಗೆ ವಿಶೇಷ ಪ್ಯಾಕೇಜ್ ನೀಡಲು ನಿರಾಕರಿಸುತ್ತಿರುವುದು ನಮಗೆ ತುಂಬಾ ಬೇಸರ ತಂದಿದೆ. ಇದನ್ನು ತೀವ್ರ ಸ್ವರೂಪದ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್ ನೀಡುವಂತೆ ನಾವು ಗೃಹ ಸಚಿವರ ಬಳಿಗೆ ಹೋಗಿದ್ದೇವೆ. ನಾವು ಪ್ರಧಾನಿ ಮತ್ತು ಸಾಧ್ಯವಿರುವ ಎಲ್ಲರಿಗೂ ಪತ್ರ ಬರೆದಿದ್ದೇವೆ” ಎಂದು ಹೇಳಿದರು.

“ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಇದೇ ರೀತಿಯ ದೊಡ್ಡ ಪ್ರಮಾಣದ ವಿನಾಶ ಸಂಭವಿಸಿದೆ. ಅಲ್ಲಿಯೂ ಅವರು ಕೇಂದ್ರದ ನೆರವು ನೀಡಬೇಕೆಂದು ಅವರು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದಾರೆ. ವಯನಾಡಿನಲ್ಲಿ, ಇಡೀ ದೇಶವು ಜನರ ವಿನಾಶ, ಸಾವು ಮತ್ತು ನೋವನ್ನು ನೋಡಿದೆ. ಆದರೆ ರಾಜಕೀಯ ಕಾರಣಕ್ಕೆ, ಕೇಂದ್ರ ಸರ್ಕಾರವು ಇನ್ನೂ ಸಂತ್ರಸ್ತರಿಗೆ ನೀಡಬೇಕಾದುದನ್ನು ನೀಡಲು ನಿರಾಕರಿಸುತ್ತಿದೆ” ಎಂದು ಅವರು ಹೇಳಿದ್ದಾರೆ.

“ಅವರು ಭಾರತದ ಪ್ರಜೆಗಳು, ನೈಸರ್ಗಿಕ ವಿಕೋಪಗಳ ಸಮಯದಲ್ಲಿ, ನೋವಿನ ಸಮಯದಲ್ಲಿ, ಯಾವುದೇ ರೀತಿಯ ಸಂಕಟದ ಸಮಯದಲ್ಲಿ ಯಾವುದೇ ತಾರತಮ್ಯ ಇರಬಾರದು. ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿಗಳು ಪ್ರತಿಯೊಬ್ಬ ಭಾರತೀಯ ನಾಗರಿಕನ ಪಾಲಕರಾಗಬೇಕು” ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

ಜುಲೈ 30 ರಂದು ಕೇರಳವನ್ನು ಅಪ್ಪಳಿಸಿದ ಈ ದುರಂತವು ಮೂರು ಗ್ರಾಮಗಳ ದೊಡ್ಡ ಭಾಗಗಳನ್ನು ನಾಶಪಡಿಸಿತ್ತು. ಪುಂಚಿರಿಮಟ್ಟಂ, ಚೂರಲ್ಮಲಾ ಮತ್ತು ಮುಂಡಕ್ಕೈ ಜೊತೆಗೆ ವಯನಾಡ್‌ನ ಅಟ್ಟಮಾಲಾ ಪ್ರದೇಶ ಕೂಡಾ ಹಾನಿಗೀಡಾಗಿವೆ. ಸರ್ಕಾರದ ಪ್ರಕಾರ, ದುರಂತದಲ್ಲಿ 231 ಜೀವಗಳು ಬಲಿಯಾಗಿವೆ.

ಇದನ್ನೂ ಓದಿ: ದೇಶದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ : ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ದೇಶದ ಸಂವಿಧಾನ ಸಂಘದ ನಿಯಮ ಪುಸ್ತಕವಲ್ಲ : ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...