Homeಮುಖಪುಟವಯನಾಡ್ ದುರಂತ | 350 ದಾಟಿದ ಮೃತರ ಸಂಖ್ಯೆ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ವಯನಾಡ್ ದುರಂತ | 350 ದಾಟಿದ ಮೃತರ ಸಂಖ್ಯೆ: ಮುಂದುವರಿದ ರಕ್ಷಣಾ ಕಾರ್ಯಾಚರಣೆ

- Advertisement -
- Advertisement -

ಹವಾಮಾನ ವೈಪರೀತ್ಯದ ನಡುವೆಯೂ ಭೂಕುಸಿತ ದುರಂತ ಸಂಭವಿಸಿದ ವಯನಾಡ್‌ನ ಮುಂಡಕ್ಕೈ ಮತ್ತು ಚೂರಲ್ಮಲಾದಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಗಳು ಮುಂದುವರೆದಿದೆ.

ವರದಿಗಳ ಪ್ರಕಾರ, ರಕ್ಷಣಾ ಕಾರ್ಯಾಚರಣೆ ಕೊನೆಯ ಹಂತ ತಲುಪಿದೆ. ಆದರೆ, ಇನ್ನೂ 200ಕ್ಕೂ ಅಧಿಕ ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಹಾಗಾಗಿ ಅವರ ಹುಡುಕಾಟದ ಬಗ್ಗೆ ಮುಂದಿನ ತೀರ್ಮಾನ ತೆಗೆದುಕೊಳ್ಳಬೇಕಿದೆ.

ಅನೇಕ ವರದಿಗಳ ಪ್ರಕಾರ, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 350 (358) ದಾಟಿದೆ. ನಾಪತ್ತೆಯಾದವರಲ್ಲಿ ಮೃತರ ದೇಹಗಳು ಮತ್ತು ಬದುಕುಳಿದವರ ಹುಡುಕಾಟಕ್ಕೆ ರಕ್ಷಣಾ ತಂಡಗಳು ಅತ್ಯಾಧುನಿಕ ಉಪಕರಣಗಳು ಮತ್ತು ಶ್ವಾನಗಳನ್ನು ಬಳಸಿಕೊಂಡಿದೆ.

ಇದುವರೆಗೆ ಪತ್ತೆಯಾದ ಮೃತದೇಹಗಳ ಪೈಕಿ 341ರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಮತ್ತು 146 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ.

ಜಿಪಿಎಸ್‌, ಡ್ರೋನ್ ಮತ್ತು ಮೊಬೈಲ್ ನೆಟ್‌ವರ್ಕ್‌ ಲೊಕೇಶನ್ ಮೂಲಕ ದುರಂತ ನಡೆಯುವ ಮುನ್ನ ಕೊನೆಯ ಬಾರಿ ಜನರು ಎಲ್ಲಿದ್ದರು ಎಂದು ಪತ್ತೆ ಹಚ್ಚಲಾಗುತ್ತಿದೆ. ಭಾರತೀಯ ಸೇನೆ ನಿರ್ಮಿಸಿದ 190 ಮೀಟರ್ ಉದ್ದದ ಬೈಲಿ ಸೇತುವೆ ಯಂತ್ರಗಳ ಸಾಗಣೆ ಸೇರಿದಂತೆ ಇತರ ರೀತಿಯಲ್ಲಿ ರಕ್ಷಣಾ ಕಾರ್ಯಕ್ಕೆ ದೊಡ್ಡ ಸಹಕಾರಿಯಾಗಿದೆ.

100 ಮನೆಗಳ ನಿರ್ಮಾಣ : ಸಿಎಂ ಸಿದ್ದರಾಮಯ್ಯ ಭರವಸೆ

ಭೂಕುಸಿತ ದುರಂತದಿಂದ ಸಂತ್ರಸ್ತರಾಗಿರುವ ಜನರಿಗೆ ಪುನರ್ವಸತಿ ಕಲ್ಪಿಸಲು ಕರ್ನಾಟಕ 100 ಮನೆಗಳನ್ನು ನಿರ್ಮಿಸಿ ಕೊಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ನಿನ್ನೆಯಷ್ಟೆ ರಾಹುಲ್ ಗಾಂಧಿ ಕೂಡ ಕಾಂಗ್ರೆಸ್‌ ಕುಟುಂಬದಿಂದ 100 ಮನೆಗಳನ್ನು ನಿರ್ಮಿಸಿ ಕೊಡುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ : ವಯನಾಡ್ ಭೂಕುಸಿತ | ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ನಕಾರ : ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...