Homeಮುಖಪುಟಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

- Advertisement -
- Advertisement -

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಭಾನುವಾರ (ಏ.5) ವರದಿ ಮಾಡಿದೆ.

ಬಿಜೆಪಿ ಧ್ವಜಗಳನ್ನು ಜೋಡಿಸಲು ಸಹಾಯ ಮಾಡುತ್ತಿರುವ ವಿಡಿಯೋ ವೈರಲ್ ಆದ ಬಳಿಕ, ಅಟನು ಚಕ್ರವರ್ತಿ ಎಂಬ ಸೆಕ್ಟರ್ ಸಹಾಯಕ ಅಧಿಕಾರಿಯ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಕುನಾಲ್ ಘೋಷ್ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.

“ಅಧಿಕಾರಿ ಅಟನು ಚಕ್ರವರ್ತಿ ರಾಜಕೀಯ ಪಕ್ಷದೊಂದಿಗೆ (ಬಿಜೆಪಿಯೊಂದಿಗೆ) ನಿಕಟ ಸಂಪರ್ಕ ಹೊಂದಿದ್ದಾರೆ ಮತ್ತು ಅದರ ಪ್ರಚಾರದಲ್ಲಿ ಭಾಗವಹಿಸಿದ್ದಾರೆ ಎಂದು ಆರೋಪಿಸಲಾಗಿದ್ದು, ಇದು ಜನತಾ ಪ್ರಾತಿನಿಧ್ಯ ಕಾಯ್ದೆಯ ಗಂಭೀರ ಉಲ್ಲಂಘನೆಯಾಗಿದೆ ಎಂಬುವುದಾಗಿ ಚುನಾವಣಾಧಿಕಾರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಹೇಳಿದೆ.

ಚಕ್ರವರ್ತಿ ಅವರನ್ನು ವಲಯ ಸಹಾಯಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಅವರು ದಂಡದ ಕ್ರಮವನ್ನು ಏಕೆ ಎದುರಿಸಬಾರದು ಎಂದು 24 ಗಂಟೆಗಳ ಒಳಗೆ ವಿವರಿಸುವಂತೆ ನೋಟಿಸ್ ಕಳುಹಿಸಲಾಗಿದೆ. ಅಧಿಕಾರಿ ಪ್ರಾಥಮಿಕ ಶಾಲೆಯಲ್ಲಿ ಸಹಾಯಕ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.

ಅಧಿಕಾರಿಯು ಅಮಾನತ್ತಿನಲ್ಲಿರುವ ಅವಧಿಯಲ್ಲಿ, ಪೂರ್ವಾನುಮತಿಯಿಲ್ಲದೆ ಕೇಂದ್ರ ಕಚೇರಿಯನ್ನು ಬಿಟ್ಟು ಹೋಗದಂತೆ ಅವರಿಗೆ ನಿರ್ಬಂಧ ಹೇರಲಾಗಿದೆ ಮತ್ತು ವಿಚಾರಣೆಗೆ ಲಭ್ಯವಿರುವಂತೆ ಅವರಿಗೆ ಸೂಚಿಸಲಾಗಿದೆ.

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತದಾನ ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಮೇ 4ರಂದು ಫಲಿತಾಂಶ ಹೊರ ಬೀಳಲಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...