Homeಮುಖಪುಟ‘ಸಂಸತ್ತಿನ ಕಾರ್ಯಕಲಾಪಗಳಲ್ಲಿ ನಮ್ಮ ಹಸ್ತಕ್ಷೇಪದ ಆರೋಪವಿದೆ’: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ

‘ಸಂಸತ್ತಿನ ಕಾರ್ಯಕಲಾಪಗಳಲ್ಲಿ ನಮ್ಮ ಹಸ್ತಕ್ಷೇಪದ ಆರೋಪವಿದೆ’: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ

- Advertisement -
- Advertisement -

“ಶಾಸಕಾಂಗ ಮತ್ತು ಕಾರ್ಯಾಂಗದ ಕಾರ್ಯಗಳಲ್ಲಿ ನಾವು ಹಸ್ತಕ್ಷೇಪ ಮಾಡುತ್ತಿದ್ದೇವೆ ಎಂಬ ಆರೋಪವಿದೆ” ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ.ಆರ್ ಗವಾಯಿ ಸೋಮವಾರ (ಏ.21) ನ್ಯಾಯಾಂಗದ ಮೇಲಿನ ಇತ್ತೀಚಿನ ದಾಳಿಗಳನ್ನು ಉಲ್ಲೇಖಿಸಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ದದ ಪ್ರತಿಭಟನೆಗಳ ಸಂದರ್ಭದಲ್ಲಿ ನಡೆದ ಹಿಂಸಾಚಾರದ ತನಿಖೆ ಕೋರಿ ಸಲ್ಲಿಸಲಾದ ಹೊಸ ಅರ್ಜಿಯನ್ನು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೂ ಒಳಗೊಂಡ ಸುಪ್ರೀಂ ಕೋರ್ಟ್ ಪೀಠ ವಿಚಾರಣೆಗೆ ಪರಿಗಣಿಸುತ್ತಿರುವಾಗ ನ್ಯಾಯಮೂರ್ತಿ ಗವಾಯಿ ಅವರು ಈ ಹೇಳಿಕೆ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ನಂತರದ ಹಿಂಸಾಚಾರದ ಹಿನ್ನೆಲೆ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲು ಕೋರಿದ್ದ ಇಬ್ಬರ ಪರವಾಗಿ 2021ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲ ವಿಷ್ಣುಶಂಕರ್ ಜೈನ್, ಮಂಗಳವಾರ ಹೊಸ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಪೀಠಕ್ಕೆ ಮನವಿ ಮಾಡಿದ್ದಾರೆ.

2021ರ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲಾಗಿದೆ ಮತ್ತು ಪಶ್ಚಿಮ ಬಂಗಾಳದಲ್ಲಿ ಹೆಚ್ಚಿನ ಹಿಂಸಾಚಾರದ ಘಟನೆಗಳನ್ನು ಎತ್ತಿ ತೋರಿಸುವ ಹೊಸ ಅರ್ಜಿಯ ವಿಚಾರಣೆಯೂ ನಡೆಯಲಿದೆ ಎಂದು ಜೈನ್ ತಿಳಿಸಿದ್ದಾರೆ.

“ನಾಳೆಯ ವಿಚಾರಣೆಗೆ ಪಟ್ಟಿಯಾಗಿರುವುದರಲ್ಲಿ 42ನೆಯದ್ದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಗೆ ಸಂಬಂಧಿಸಿದೆ. ಆ ಅರ್ಜಿಯನ್ನು ನಾನು ಸಲ್ಲಿಸಿದ್ದೇನೆ. ಆ ಅರ್ಜಿಯಲ್ಲಿ, ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆದಿರುವ ಕೆಲವು ಹಿಂಸಾಚಾರದ ಘಟನೆಗಳನ್ನು ಹೊರತರಲು ನಿರ್ದೇಶನಗಳು ಮತ್ತು ರಾಷ್ಟ್ರಪತಿ ಜಾರಿ ಕೋರಿ ನಾನು ಅರ್ಜಿ ಸಲ್ಲಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

ಬಂಗಾಳದಲ್ಲಿ ಅರೆಸೈನಿಕ ಪಡೆಗಳ ನಿಯೋಜನೆ ಮತ್ತು ತಕ್ಷಣದ ಕ್ರಮ ಅಗತ್ಯ ಎಂದು ಜೈನ್ ವಾದಿಸಿದ್ದಾರೆ.

ಬಾಹ್ಯ ಆಕ್ರಮಣ ಮತ್ತು ಆಂತರಿಕ ಅಡಚಣೆಗಳಿಂದ ರಾಜ್ಯಗಳನ್ನು ರಕ್ಷಿಸುವುದು ಕೇಂದ್ರದ ಕರ್ತವ್ಯಕ್ಕೆ ಸಂಬಂಧಿಸಿದ ಸಂವಿಧಾನದ 355ನೇ ವಿಧಿಯನ್ನು ಅವರು ವಕೀಲ ಜೈನ್ ಉಲ್ಲೇಖಿಸಿದ್ದು, ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದರ ಕುರಿತು ಸುಪ್ರೀಂ ಕೋರ್ಟ್ ವರದಿಯನ್ನು ಕೇಳಬಹುದು ಎಂದಿದ್ದಾರೆ.

“2021ರ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಈ ಹಿಂದೆ ನೋಟಿಸ್ ಜಾರಿ ಮಾಡಿತ್ತು. ವಿಷಯ ಬಂದಾಗ, ಹಿಂಸಾಚಾರ ಹೇಗೆ ನಡೆಯಿತು ಎಂಬುದನ್ನು ನಾನು ವಿವರಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಜುಲೈ 2021ರಲ್ಲಿ, ಸುಪ್ರೀಂ ಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿದೆ. ಇದು ರಾಜ್ಯದಲ್ಲಿ ಸಶಸ್ತ್ರ/ಅರೆಸೈನಿಕ ಪಡೆಗಳನ್ನು ನಿಯೋಜಿಸಲು ಕೇಂದ್ರಕ್ಕೆ ನಿರ್ದೇಶನವನ್ನು ಕೋರಿದೆ. ಈ ಅರ್ಜಿ ಸಂಬಂಧ ಕೇಂದ್ರ ಸರ್ಕಾರ, ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್ ಜಾರಿ ಮಾಡಿದೆ.

ಹೊಸದಾಗಿ ಜಾರಿಗೆ ತಂದ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧದ ಪ್ರತಿಭಟನೆ ವೇಳೆ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರದ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಅರ್ಜಿಗಳನ್ನೂ ಸಲ್ಲಿಸಲಾಗಿದೆ.

ನ್ಯಾಯಾಂಗದ ಬಗ್ಗೆ ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ; ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...