Homeಕರ್ನಾಟಕಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ: ತುಮಕೂರಿನಲ್ಲಿ ಯಡಿಯೂರಪ್ಪ ಹೇಳಿಕೆ

ಸಹಕಾರಿ ಬ್ಯಾಂಕ್‌ ಸಾಲ ಮನ್ನಾಗೆ 1 ಸಾವಿರ ಕೋಟಿ : ತುಮಕೂರಿನಲ್ಲಿ ಯಡಿಯೂರಪ್ಪ ಘೋಷಣೆ

- Advertisement -
- Advertisement -

ಸುಮಾರು 25 ಲಕ್ಷ ರೈತರಿಗೆ ಅನುಕೂಲವಾಗುವ ಯಶಸ್ವಿನಿ ಯೋಜನೆಯ ಮತ್ತೊಮ್ಮೆ ಜಾರಿ, ಸಹಕಾರಿ ಬ್ಯಾಂಕ್ ಗಳಲ್ಲಿ ಪಡೆದ ರೈತ ಸಾಲ ಮನ್ನಾ ಮಾಡುವ ಕಾರ್ಯಕ್ರಮಕ್ಕೆ 1 ಸಾವಿರ ಕೋಟಿ ರೂಪಾಯಿ ಹಣ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಅಪೆಕ್ಸ್ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ 66ನೇ ಅಖಿಲಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಬರೆದು ತಂದಿದ್ದ ಭಾಷಣವನ್ನು ಓದಿದರು. ತಿಪಟೂರಿನಲ್ಲಿ ತೋಟಗಾರಿಕೆ ಕಾಲೇಜು ಆರಂಭಿಸಲು ಅನುಮತಿ ನೀಡುವ ಭರವಸೆಯಿತ್ತಿದ್ದಾರೆ.

ರಾಜ್ಯದ ಉತ್ತರ ಭಾಗದಲ್ಲಿ ಅತಿವೃಷ್ಟಿಯಿಂದ 7 ಲಕ್ಷ ಎಕರೆ ಭೂಮಿ ನಾಶವಾಯಿತು. ಮೂರು ನಾಲ್ಕು ಲಕ್ಷ ಮನೆಗಳು ಬಿದ್ದು ಹೋದವು. ನೂರಾರು ಗ್ರಾಮಗಳು ನೀರುಪಾಲಾದವು. ಜನರು ಬೀದಿಗೆ ಬಿದ್ದರು. ಈ ಸಂಕಷ್ಟಗಳಿಗೆ ಸ್ಪಂದಿಸಲು ಪ್ರಯತ್ನ ನಡೆಯುತ್ತಿದೆ. ಹೀಗಾಗಿ ಕೆಲವು ಕಡೆಗಳಲ್ಲಿ ಹೆಚ್ಚಿನ ಗಮನ ಕೊಡಲು ಆಗಲಿಲ್ಲ ಎಂದು ಸಿಎಂ ಹೇಳಿದ್ದಾರೆ.

ಬರುವ ಫೆಬ್ರವರಿ ಬಜೆಟ್ ನಲ್ಲಿ ಈ ನಾಡಿನ ರೈತರು ಗೌರವದಿಂದ ನೆಮ್ಮದಿಯಿಂದ ಸ್ವಾಭಿಮಾನದಿಂದ ಬದುಕಲು ಸಹಾಯ ಮಾಡಲು ಸಾಧ್ಯವಿದೆಯೋ ಅದನ್ನು ಮಾಡುತ್ತೇನೆ. ಯಶಸ್ವಿನಿ ಯೋಜನೆ ಇನ್ನೊಂದು ತಿಂಗಳ ಒಳಗಾಗಿ ಹಣದ ಭಾರ ಬಿದ್ದರೂ ಪರವಾಗಿಲ್ಲ, ತಕ್ಷಣ ಜಾರಿಗೆ ತರುತ್ತೇನೆ ಎಂದು ರೈತಬಂಧುಗಳಿಗೆ, ಸಹಕಾರಿಗಳಿಗೆ ಎಂದು ಭರವಸೆ ನೀಡಿದರು.

ಬರೆದು ತಂದಿದ್ದ ಭಾಷಣವನ್ನು ಕೇವಲ 10 ನಿಮಿಷಗಳಲ್ಲಿ ಓದಿ ಮುಗಿಸಿದ ಯಡಿಯೂರಪ್ಪನವರು ಅದರಲ್ಲಿ ಕೆ.ಎನ್ ರಾಜಣ್ಣ ಹೆಸರನ್ನು ಐದಾರು ಬಾರಿ ಪ್ರಸ್ತಾಪಿಸಿ ಒಳ್ಳೆಯ ಕಾರ್ಯ ಮಾಡುತ್ತಿದ್ದಾರೆಂದು ಶ್ಲಾಘಿಸಿದುದ್ದು ಕುತೂಹಲಕ್ಕೆ ಕಾರಣವಾಗಿದೆ.

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಮನವಿ ಮೇರೆಗೆ ತುಮಕೂರು ಹಾಲು ಒಕ್ಕೂಟದಲ್ಲಿ ಮೆಗಾ ಡೈರಿ ಸ್ಥಾಪನೆಯ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಶೀಘ್ರವೇ ಮಾಡಿಕೊಡುತ್ತೇನೆ, ಮಂತ್ರಿಮಂಡಲದಲ್ಲಿ ಈ ವಿಷಯಗಳನ್ನು ತಂದು ಒಪ್ಪಿಗೆ ಪಡೆದು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು. ತುಮಕೂರು ಜಿಲ್ಲೆಯೂ ಸೇರಿದಂತೆ ರಾಜ್ಯದ ಎಲ್ಲಾ ಕೆರೆಗಳಿಗೆ ಕುಡಿಯು ನೀರು ಹರಿಸಲಾಗುವುದು. ಆದರೆ ನೀರಾವರಿಗೆ ನೀರು ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

66ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭ ಸರ್ಕಾರಿ ಕಾರ್ಯಕ್ರಮವಾದರೂ ವೇದಿಕೆಯಲ್ಲಿ ಬಿಜೆಪಿ ಮುಖಂಡರನ್ನು ಬಿಟ್ಟರೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು, ಸಂಸದರು ಮತ್ತು ಮುಖಂಡರು ಭಾಗವಹಿಸಿರಲಿಲ್ಲ. ಇಂದು ಜೂನಿಯರ್ ಕಾಲೇಜು ಮೈದಾನದಲ್ಲಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೆ.ಎನ್.ರಾಜಣ್ಣ, ಪುತ್ರ ರಾಜೇಂದ್ರ ಅವರ ಕಟೌಟ್ ಗಳು ರಾರಾಜಿಸುತ್ತಿದ್ದವು.

ಕಾರ್ಯಕ್ರಮದ ಆಮಂತ್ರಣ ಪತ್ರದಲ್ಲಿ ಕಾಂಗ್ರೆಸ್ ನ ಪರಮೇಶ್ವರ್,  ಸಂಸದ ಡಿ.ಕೆ.ಸುರೇಶ್, ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡರ ಹೆಸರುಗಳನ್ನು ಹಾಕಿದ್ದರೂ ಅವರ್‍ಯಾರು ಸಮಾರಂಭಕ್ಕೆ ಬಂದಿರಲಿಲ್ಲ. ಗುಬ್ಬಿ ಶಾಸಕರೂ ಆದ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಆರ್. ಶ್ರೀನಿವಾಸ್ ಕೂಡ ಕಾರ್ಯಕ್ರಮ ದಿಂದ ದೂರವೇ ಉಳಿದಿದ್ದರು. ಜಾಹಿರಾತುಗಳಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಸಂಸದರ ಪೋಟೋಗಳನ್ನು ಕೈಬಿಡಲಾಗಿತ್ತು.

ಸಹಕಾರ ಸಪ್ತಾಹ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವಾದರೂ ಜಿಲ್ಲೆಯಲ್ಲಿ ಹೆಸರು ಮಾಡಿರುವ ಕೆ.ಷಡಕ್ಷರಿ ಅವರನ್ನೂ ಆಹ್ವಾನಿಸಿರಲಿಲ್ಲ. ಸರ್ಕಾರಿ ಕಾರ್ಯಕ್ರಮಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ, ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಬಿ.ಸುರೇಶ್ ಗೌಡ, ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಸಿ.ಪಿ.ಮೂಡ್ಲಗಿರಿಯಪ್ಪ ಅವರನ್ನು ಆಹ್ವಾನಿಸಿದ್ದು ಕೆಲವರ ಹುಬ್ಬೇರಿಸುವಂತೆ ಮಾಡಿತ್ತು. ಸರ್ಕಾರಿ ಕಾರ್ಯಕ್ರಮದಲ್ಲಿ ಅವರಿಗೇನು ಕೆಲಸ ಎಂಬ ಪ್ರಶ್ನೆಯೂ ವ್ಯಕ್ತವಾಗಿದೆ.

ಕಾರ್ಯಕ್ರಮ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅವರ ಬಲಾಬಲ ಪ್ರದರ್ಶನದ ವೇದಿಕೆಯೂ ಆಗಿತ್ತು. ಮುಖ್ಯಮಂತ್ರಿಗಳು ಮಾಧ್ಯಮಗಳೊಂದಿಗೆ ಮಾತನಾಡಿ ಕೆ.ಎನ್.ರಾಜಣ್ಣ ಮತ್ತು ನನ್ನ ನಡುವೆ ಉತ್ತಮ ಬಾಂಧವ್ಯವಿದೆ. ಅವರು ಎಲ್ಲಿದ್ದರೂ ನಮ್ಮವರೇ ಆಗಿದ್ದಾರೆ. ಪಕ್ಷಕ್ಕೆ ಬರಲಿ ಬಿಡಲಿ ಅವರು ನಮ್ಮವರೇ ಎಂದು ಹೇಳುವ ಮೂಲಕ ರಾಜಣ್ಣ ಬಿಜೆಪಿ ಸೇರ್ಪಡೆಯ ಸುದ್ದಿಯನ್ನು ಸಂಪೂರ್ಣ ತಳ್ಳಿ ಹಾಕಲಾಕುವುದಿಲ್ಲ ಎಂಬ ಸುಳಿವು ನೀಡಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸ್ಪಷ್ಟ ಉತ್ತರವೂ ದೊರೆಯಲಿಲ್ಲ.

ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಜಿ.ಎಸ್.ಬಸವರಾಜು ಅವರ ಆದಿಯಾಗಿ ಮುಖ್ಯಮಂತ್ರಿಗಳು ಕೂಡ ಕೆ.ಎನ್.ರಾಜಣ್ಣ ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ರಾಜಣ್ಣನವರ ಮುಂದಿನ ರಾಜಕೀಯ ನಡೆಯ ಬಗ್ಗೆ ಕುತೂಹಲವನ್ನು ಹುಟ್ಟುಹಾಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...