Homeಮುಖಪುಟಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ: ರಾಹುಲ್ ಗಾಂಧಿ

ಭಾರತವನ್ನು ತಾರತಮ್ಯಗಳಿಂದ ಮುಕ್ತಗೊಳಿಸುವುದೇ ಅಂಬೇಡ್ಕರ್‌ರಿಗೆ ಗೌರವ ಸಲ್ಲಿಸುವ ಏಕೈಕ ಮಾರ್ಗ: ರಾಹುಲ್ ಗಾಂಧಿ

ಅಂಬೇಡ್ಕರ್‌ ವ್ಯಕ್ತಿ ಮಾತ್ರರಲ್ಲ, ಅವರು ಸ್ವತಂತ್ರ ಭಾರತದ ಚೈತನ್ಯಸ್ವರೂಪರಾಗಿರುವ ಆದರ್ಶನಾಯಕ - ಬಿ.ಎಸ್ ಯಡಿಯೂರಪ್ಪ

- Advertisement -
- Advertisement -

ಭಾರತವನ್ನು ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಲು ಕೆಲಸ ಮಾಡುವುದೇ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಬಾಬಾಸಾಹೇಬ್ ಅಂಬೇಡ್ಕರ್‌ರವರ ಮಹಾಪರಿನಿರ್ವಾಣದ ದಿನದ ನೆನಪಿನಲ್ಲಿ ಟ್ವೀಟ್ ಮಾಡಿರುವ ಅವರು “ರಾಷ್ಟ್ರ ನಿರ್ಮಾಣಕ್ಕೆ ಡಾ.ಅಂಬೇಡ್ಕರ್ ಅವರ ಕೊಡುಗೆಯನ್ನು ನಾವು ಇಂದು ನೆನಪಿಸಿಕೊಳ್ಳುತ್ತೇವೆ. ಭಾರತವನ್ನು ಎಲ್ಲಾ ರೀತಿಯ ತಾರತಮ್ಯಗಳಿಂದ ಮುಕ್ತಗೊಳಿಸಲು ಕೆಲಸ ಮಾಡುವುದು ಅವರಿಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ” ಎಂದಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಸಹ ಟ್ವೀಟ್ ಮಾಡಿ “ಮಹಾಪರಿನಿರ್ವಾಣ ದಿನದಂದು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸೋಣ. ಅವರ ಆಲೋಚನೆಗಳು ಮತ್ತು ಆದರ್ಶಗಳು ಲಕ್ಷಾಂತರ ಜನರಿಗೆ ಶಕ್ತಿಯನ್ನು ನೀಡುತ್ತಲೇ ಇವೆ. ನಮ್ಮ ರಾಷ್ಟ್ರಕ್ಕಾಗಿ ಅವರು ಕಂಡ ಕನಸುಗಳನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ” ಎಂದಿದ್ದಾರೆ.

‘ಅಂಬೇಡ್ಕರ್‌ ವ್ಯಕ್ತಿ ಮಾತ್ರರಲ್ಲ, ಅವರು ಸ್ವತಂತ್ರ ಭಾರತದ ಚೈತನ್ಯಸ್ವರೂಪರಾಗಿರುವ ಆದರ್ಶನಾಯಕ. ಸಂವಿಧಾನ ಶಿಲ್ಪಿ, ಭಾರತರತ್ನ, ಡಾ ಬಿ.ಆರ್.ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನ’ದ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಲಾಯಿತು’ ಎಂದು ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

“ಕೆಡವಿ ಹಾಕುವ, ಸುಟ್ಟುಹಾಕುವ ಮನುಷ್ಯ ವಿರೋಧಿ ಸಂಸ್ಕೃತಿ ವಿರುದ್ಧ ಹೋರಾಡಲು ಬಾಬಾ ಸಾಹೇಬ್ ಅಂಬೇಡ್ಕರ್ ಚಿಂತನೆಗಳು ನಮ್ಮ ಕೈಗಳಲ್ಲಿನ‌ ಅಸ್ತ್ರಗಳಾಗಬೇಕು. ಬಾಬಾಸಾಹೇಬರ ಪರಿನಿರ್ವಾಣದ ದಿನ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಯ ಪ್ರತಿಜ್ಞೆ ಮಾಡೋಣ. ಇದು ಆ ಚೇತನಕ್ಕೆ ಸಲ್ಲಿಸುವ ನಿಜವಾದ ಗೌರವ” ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಪರಿನಿಬ್ಬಾಣ ದಿನ ವಿಶೇಷ: ಅಂಬೇಡ್ಕರ್ ಅವರಿಗೂ ಬೇಕಿರುವ ವಿಮೋಚನೆ – ವಿ.ಎಲ್ ನರಸಿಂಹಮೂರ್ತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...