Homeಮುಖಪುಟನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ: ಪತ್ರಕರ್ತ ಪತ್ರೀಕ್ ಸಿನ್ಹಾ

ದಿಟ್ಟ ಪತ್ರಕರ್ತ ದ್ಯಾನಿಶ್ ಸಿದ್ದೀಕಿ ಅವರ ಸಾವನ್ನು ಸಂಭ್ರಮಿಸುತ್ತಿರುವ ಬಲಪಂಥೀಯರ ದ್ವೇಷವನ್ನು ನಿರ್ಲಕ್ಷಿಸಲು ಸಾಧ್ಯವೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ರಾಯ್ಟರ್ಸ್‌ನ ಮುಖ್ಯ ಫೋಟೋಗ್ರಾಫರ್‌ ಆಗಿದ್ದ ದಾನಿಶ್ ಸಿದ್ದೀಕಿ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ‌ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತರಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ವಿಶ್ವಪ್ರಸಿದ್ದ ದಿಟ್ಟ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದು, ಇದಕ್ಕೆ ಪ್ರಕತಿಕ್ರಿಯಸಿರುವ ಆಲ್ಟ್‌ನ್ಯೂಸ್‌ ಸಂಸ್ಥಾಪಕ ಪ್ರತೀಕ್ ಸಿನ್ಹಾ, “ನಾವು ನಮ್ಮದೆ ತಾಲೀಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಾಕಿಸ್ತಾನ ಮತ್ತು ಅಫ್ಘಾನ್‌‌ನ ಪ್ರಮುಖ ಗಡಿಯಾಗಿರುವ ‘ಸ್ಪಿನ್ ಬೋಲ್ಡಾಕ್‌’ನ ಬಾರ್ಡರ್‌ ಕ್ರಾಸಿಂಗ್‌‌ ಅನ್ನು ತಾಲಿಬಾನ್‌‌ ವಶಪಡಿಸಿಕೊಂಡಿತ್ತು. ಈ ಪ್ರಮುಖ ಗಡಿಯನ್ನು ಹಿಂಪಡೆಯಲು ಕಾರ್ಯಾಚರಣೆ ಪ್ರಾರಂಭಿಸಿದ್ದ ಅಫ್ಘಾನ್ ಪಡೆಗಳು ಸ್ಪಿನ್ ಬೋಲ್ಡಾಕ್‌ನಲ್ಲಿ ತಾಲಿಬಾನ್‌ ಬಂಡುಕೋರರೊಂದಿಗೆ ಘರ್ಷಣೆ ನಡೆಸಿದ್ದವು, ಈ ವೇಳೆ ಪತ್ರಕರ್ತ ದಾನಿಶ್ ಸಿದ್ದೀಕಿ ಹತರಾಗಿದ್ದಾರೆ.

ಇದನ್ನೂ ಓದಿ: ಅಫ್ಘಾನ್‌‌ನಲ್ಲಿ ಹತರಾದ ಖ್ಯಾತ ಫೋಟೊ ಜರ್ನಲಿಸ್ಟ್‌‌ ದಾನಿಶ್ ಕ್ಲಿಕ್ಕಿಸಿದ ಕೆಲವು ಫೋಟೊಗಳು!

ವಿಶ್ವದ ಪ್ರಮುಖ ಪತ್ರಕರ್ತನ ಸಾವಿಗೆ ಬಲಪಂಥೀಯರು ಸಂಭ್ರಮಿಸುತ್ತಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪತ್ರಕರ್ತ ಪ್ರತೀಕ್ ಸಿನ್ಹಾ, “ನೀವು ಇಂದು ಟ್ವಿಟ್ಟರ್‌‌ನಲ್ಲಿನ ದ್ವೇಷವನ್ನು ನೋಡಿದ್ದೀರಾ? ದಿಟ್ಟ ಪತ್ರಕರ್ತನ ಸಾವಿಗೆ ಜನರು ಸಂಭ್ರಮಿಸುತ್ತಿದ್ದಾರೆ? ಈ ದ್ವೇಷವನ್ನು ನಾವು ನಿರ್ಲಕ್ಷಿಸಲು ಬಯಸುತ್ತೀರಾ? ಈ ದ್ವೇಷವು ತೀವ್ರವಾದಿ ಆಗುತ್ತಿರುವ ಅಥವಾ ಈಗಾಗಲೇ ತೀವ್ರವಾದಿಗಳಾಗಿರುವ ಜನರಿಂದ ಬರುತ್ತಿದೆ. ನಾವು ನಮ್ಮದೇ ತಾಲಿಬಾನ್ ರಚಿಸುವ ಪ್ರಕ್ರಿಯೆಯಲ್ಲಿದ್ದೇವೆ” ಎಂದು ಹೇಳಿದ್ದಾರೆ.

2018 ರಲ್ಲಿ ತನ್ನ ‘ಫೀಚರ್‌ ಫೋಟೋಗ್ರಾಫಿ’ ಸರಣಿಗಾಗಿ ಪ್ರತಿಷ್ಠಿತ ಪುಲಿಟ್ಜೆರ್‌‌ ಪ್ರಶಸ್ತಿಯನ್ನು ಅವರು ಪಡೆದಿದ್ದರು. ಆ ವರ್ಷ ರಾಯ್ಟರ್ಸ್‌ನ ಒಟ್ಟು ಏಳು ಪತ್ರಕರ್ತರಿಗೆ ಪ್ರಶಸ್ತಿ ಬಂದಿದ್ದು, ಅದರಲ್ಲಿನ ಇಬ್ಬರು ಭಾರತೀಯರಲ್ಲಿ ದಾನಿಶ್ ಸಿದ್ದೀಕಿ ಒಬ್ಬರಾಗಿದ್ದಾರೆ. ಅಂದಿನ ಅವರ ಫೋಟೊ ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟನ್ನು ದಾಖಲಿಸಿತ್ತು.

ಇದನ್ನೂ ಓದಿ: ರಾಯ್ಟರ್ಸ್‌‌ನ ಖ್ಯಾತ ಫೋಟೋಗ್ರಾಫರ್‌ ದಾನಿಶ್ ಸಿದ್ದೀಕಿ ಅಫ್ಘಾನ್‌ ಘರ್ಷಣೆಯಲ್ಲಿ ಹತ

ದಾನಿಶ್ ಅವರು, ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳು, ರೋಹಿಂಗ್ಯಾ ನಿರಾಶ್ರಿತರ ಬಿಕ್ಕಟ್ಟು, ಹಾಂಗ್ ಕಾಂಗ್ ಪ್ರತಿಭಟನೆಗಳು, ನೇಪಾಳ ಭೂಕಂಪಗಳು, ಉತ್ತರ ಕೊರಿಯಾದಲ್ಲಿ ನಡೆದ ಕ್ರೀಡಾಕೂಟಗಳ ವರದಿಗಳ ಸಹಿತ ಏಷ್ಯಾ, ಮಧ್ಯಪ್ರಾಚ್ಯ ಮತ್ತು ಯುರೋಪಿನ ವರದಿಗಳನ್ನು ಮಾಡಿದ್ದರು.

ಕಳೆದ ವರ್ಷ ದೇಶದಲ್ಲಿ ಕೊರೊನಾ ಪತ್ತೆಯಾದಾಗ, ಯಾವುದೆ ಪೂರ್ವ ತಯಾರಿ ಇಲ್ಲದೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿದ್ದ ಅವೈಜ್ಞಾನಿಕ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು ಪಟ್ಟ ಬವಣೆಗೆಗಳು, ಕೊರೊನಾ ಎರಡನೆ ಅಲೆಯ ಸಮಯದಲ್ಲಿ ದೇಶದ ಸ್ಮಶಾನದಲ್ಲಿನ ಚಿತ್ರಣಗಳನ್ನು ಮತ್ತು ಜನರ ಸಂಕಷ್ಟಗಳನ್ನು ಅವರು ಸಮರ್ಪಕವಾಗಿ ಸೆರೆ ಹಿಡಿದು ಜನರ ಮುಂದೆ ಇಟ್ಟಿದ್ದರು. ಅಷ್ಟೇ ಅಲ್ಲದೆ CAA-NRC-NPR ವಿರೋಧಿ ಹೋರಾಟದ ಸಮಯದಲ್ಲಿ ನಡೆದ ಘಟನೆಗಳು ಹಾಗೂ ದೆಹಲಿ ಗಲಭೆಯ ಕ್ರೂರ ಚಿತ್ರಗಳನ್ನು ಅವರು ಸೆರೆ ಹಿಡಿದಿದ್ದರು.

ಇದನ್ನೂ ಓದಿ: ರಾಯ್ಟರ್ಸ್ ವರ್ಷದ ಫೋಟೋವಾಗಿ ದೆಹಲಿ ಹಿಂಚಾಚಾರದ ಚಿತ್ರ ಆಯ್ಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೌದು..ನಾವು ನಮ್ಮದೇ ತಾಲಿಬಾನ್ ರಚಿಸುವ ಅದರೊಟ್ಟಿಗೆ ಅಲ್ ಖೈದಾ,ಹಿಜ್ಬುಲ್ ಮುಜಾಹಿದ್ದೀನ್,isis ರಚನೆಯಲ್ಲಿ ನಿರತರಾದಂತೆ ಇದೆ.
    ಇದು ಈಗ ಅನುವಾರ್ಯವಿದೆಯೇ?
    ಏಕೆಂದರೆ ಭಾರತದಲ್ಲಿ ಇಂತಹ ಸಂಘಟನೆಗಳು ಇಲ್ಲದೆ ಇರುವುದರಿಂದ…ಇಲ್ಲಿರುವುದು ಕೇವಲ ….ಅಲ್ಲವೇ..?

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...