Homeಮುಖಪುಟನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಜೈಲಿಗೆ ಭಯಪಡುವುದಿಲ್ಲ: ಕೇಜ್ರಿವಾಲ್

- Advertisement -
- Advertisement -

ನಾವು ಬಿಜೆಪಿಯವರಂತೆ ಸಾವರ್ಕರ್‌ ಮಕ್ಕಳಲ್ಲ, ಬದಲಿಗೆ ನಮ್ಮ ಇಡೀ ಪಕ್ಷ ಬ್ರಿಟಿಷರೆದುರು ನಡುಬಗ್ಗಿಸದೆ ನೇಣುಗಂಬಕ್ಕೆ ಕೊರಳೊಡ್ಡಿದ ವೀರ ಭಗತ್‌ಸಿಂಗ್‌ರವರ ಸಂತತಿ. ಹಾಗಾಗಿ ಜೈಲಿಗೆ ಹೋಗಲು ಹೆದರುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಮೇಲೆ ಲಿಕ್ಕರ್ ಟೆಂಡರ್‌ನಲ್ಲಿ ಅಕ್ರಮ ಆರೋಪದ ಮೇಲೆ ಲೆಫ್ಟಿನೆಂಟ್ ವಿನಯ್ ಕುಮಾರ್‌ ಸಕ್ಸೇನಾ ಸಿಬಿಐ ತನಿಖೆಗೆ ಆದೇಶಿಸಿರುವುದಕ್ಕೆ ಕೇಜ್ರಿವಾಲ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಲಿಕ್ಕರ್ ಮಾಫಿಯಾದ ಎಲ್ಲಾ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ನಿರಾಧಾರದಿಂದ ಕೂಡಿವೆ. ನಾನು ಬಹಳ ಹಿಂದಿನಿಂದಲೂ ಸಿಸೋಡಿಯರವರನ್ನು 22 ವರ್ಷಗಳಿಂದ ಹತ್ತಿರದಿಂದ ಬಲ್ಲೆ. ಅವರು ಕಡು ಪ್ರಾಮಾಣಿಕರು ಮತ್ತು ಶ್ರಮ ಜೀವಿಗಳು. ದೆಹಲಿಯ ಶಿಕ್ಷಣ ವ್ಯವಸ್ಥೆಯನ್ನು ಉನ್ನತ ಮಟ್ಟಕ್ಕೇರಿಸಿ ಶ್ಲಾಘನೆ ಪಡೆದಿದ್ದಾರೆ. ಹಾಗಾಗಿ ಜನ ನಮ್ಮ ಪಕ್ಷಕ್ಕೆ ಮತ ಹಾಕುತ್ತಿದ್ದಾರೆ. ಇದರಿಂದ ಹತಾಶೆಗೆ ಒಳಗಾಗಿರುವ ಕೇಂದ್ರ ಸರ್ಕಾರ ನಮ್ಮ ಮೇಲೆ ಇಲ್ಲಸಲ್ಲದ ಆರೋಪ ಹೊರಿಸುತ್ತಿದ್ದಾರೆ ಎಂದು ಕೇಜ್ರಿವಾಲ್ ಕಿಡಿಕಾರಿದ್ದಾರೆ.

ಸಿಸೋಡಿಯ ಮೇಲಿನ ಆರೋಪಗಳಲ್ಲಿ ಎಳ್ಳಷ್ಟು ಸತ್ಯವಿಲ್ಲ. ಅದು ಶುದ್ದ ಸುಳ್ಳು ಕೇಸ್. ಆದರೂ ಸಿಬಿಐ ಅವರನ್ನು ಬಂಧಿಸಲು ಯತ್ನಿಸುತ್ತಿದೆ. ಆ ಮೂಲಕ ನಾವು ಕೆಲಸ ಮಾಡಲು ಕೇಂದ್ರ ಸರ್ಕಾರ ಬಿಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಂಗಾಪುರ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಬಾರದೆಂಬ ರಾಜ್ಯದ ಲೆಫ್ಟಿನೆಂಟ್ ಗವರ್ನರ್‌ ಆಜ್ಞೆಯನ್ನು ಕೇಜ್ರಿವಾಲ್ ಉಲ್ಲಂಘಿಸಿದ ಬೆನ್ನಲ್ಲೆ ಅವರ ಪಕ್ಷದ ವಿರುದ್ದ ಲಿಕ್ಕರ್ ವಿಷಯಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆದೇಶಿಸಲಾಗಿದೆ.

ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ನೇರವಾಗಿ ಹೆಸರಿಸಿರುವ ಲೆಫ್ಟಿನೆಂಟ್ ಗವರ್ನರ್, ವರದಿಯು ಉನ್ನತ ರಾಜಕೀಯ ಮಟ್ಟದಲ್ಲಿ “ಗಣನೀಯ” ಹಣಕಾಸಿನ ಅನುಕೂಲಗಳನ್ನು ಸೂಚಿಸುತ್ತದೆ ಎಂದು ಆರೋಪಿಸಿದ್ದಾರೆ.

“ವಿಶ್ವ ನಗರಗಳ ಶೃಂಗಸಭೆ”ಗಾಗಿ ಕೇಜ್ರಿವಾಲ್ ಅವರನ್ನು ಸಿಂಗಾಪುರದ ಹೈ ಕಮಿಷನರ್ ಸೈಮನ್ ವಾಂಗ್ ಅವರು ಆಹ್ವಾನಿಸಿದ್ದರು. ಅವರು ಆಗಸ್ಟ್ 1 ರಂದು ನಡೆಯುವ ಸಭೆಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ. ಆದರೆ ಆ ಕಾರ್ಯಕ್ರಮ ಮೇಯರ್‌ಗಳದ್ದಾಗಿದ್ದು, ಮುಖ್ಯಮಂತ್ರಿಗಳು ಅದಕ್ಕೆ ಹೋಗಬಾರದು ಎಂದು ಲೆಫ್ಟಿನೆಂಟ್ ಗವರ್ನರ್‌ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ, ಈ ವಾದವೆ ಸರಿಯೆಂದಾದರೆ, ಪ್ರಧಾನಿ ಮೋದಿ ಅವರು ಕೂಡ ಎಲ್ಲಿಗೂ ಹೋಗಲು ಸಾಧ್ಯವಿಲ್ಲ ಎಂದು ಉಲ್ಲೇಖಿಸಿ ಸಭೆಗೆ ಹೋಗುವುದಾಗಿ ಘೋಷಿಸಿದ್ದಾರೆ.

ದೆಹಲಿ ಮಾದರಿ ಕುರಿತು ಸಿಂಗಾಪುರ್‌ನಲ್ಲಿ ನಾನು ಮಾತನಾಡಲಿದ್ದೇನೆ. ಇದನ್ನು ತಡೆಯುವ ಸಲುವಾಗಿ ವಿನಾಕಾರಣ ತಡೆ ನೀಡಲಾಗುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದರು.

2019 ರಲ್ಲಿ, ಮೇಯರ್‌ಗಳಿಗೆ ಮೀಸಲಾದ ಸಭೆಯಲ್ಲಿ ಮುಖ್ಯಮಂತ್ರಿ ಭಾಗವಹಿಸುವುದು ಯೋಗ್ಯವಲ್ಲ ಎಂದು ಹೇಳುವ ಮೂಲಕ ಒಕ್ಕೂಟ ಸರ್ಕಾರವೂ ಕೇಜ್ರಿವಾಲ್‌ಗೆ ಇದೇ ರೀತಿಯ ಭೇಟಿಗೆ ಅನುಮತಿಯನ್ನು ತಡೆಹಿಡಿದಿತ್ತು. ಅಂತಿಮವಾಗಿ ಕೇಜ್ರಿವಾಲ್ ಅವರು ಆನ್‌ಲೈನ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಬೇಕಾಯಿತು.

ಇದನ್ನೂ ಓದಿ: ತನ್ನ ಆಜ್ಞೆ ಉಲ್ಲಂಘಿಸಿದ ಕೇಜ್ರಿವಾಲ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...