Homeಕರ್ನಾಟಕಜೆಎನ್‌ಯು ವಿದ್ಯಾರ್ಥಿಗಳ ಪರವಾಗಿ ನಾವಿದ್ದೇವೆ: JNU ಹಿಂಸೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

ಜೆಎನ್‌ಯು ವಿದ್ಯಾರ್ಥಿಗಳ ಪರವಾಗಿ ನಾವಿದ್ದೇವೆ: JNU ಹಿಂಸೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ

- Advertisement -
- Advertisement -

ಜೆ.ಎನ್.ಯು ವಿದ್ಯಾರ್ಥಿಗಳ ಮೇಲೆ ಮುಸುಕುಧಾರಿ ಗೂಂಡಾಗಳು ನಡೆಸಿದ ಅಮಾನುಷ ದಾಳಿ ಖಂಡಿಸಿ ಬೆಂಗಳೂರಿನ ಟೌನ್‌ಹಾಲ್‌ ಎದುರು ಪ್ರತಿಭಟನೆ ಆರಂಭವಾಗಿದೆ.

ನೂರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ABVP ಸದಸ್ಯರೇ ದಾಳಿ ನಡೆಸಿದ್ದಾರೆ, ಇದಕ್ಕೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲವಿದೆ, ಹಾಗಾಗಿಯೇ ಪೊಲೀಸರು ದಾಳಿಗೆ ಸಹಕರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಪ್ರತಿಷ್ಠಿತ ಜೆಎನ್‌ಯು ವಿಶ್ವವಿದ್ಯಾಲಯವನ್ನು ಮುಚ್ಚುವುದಕ್ಕಾಗಿ ಕೇಂದ್ರ ಸರ್ಕಾರ ಈ ಹುನ್ನಾರ ನಡೆಸಿದೆ. ಇದಕ್ಕೆ ಪೊಲೀಸರನ್ನು ಬಳಸಿಕೊಂಡು ದಾಳಿ ನಡೆಸಿದೆ. ಘಟನೆಯ ಹೊಣೆಹೊತ್ತು ಗೃಹ ಸಚಿವ ಅಮಿತ್‌ ಶಾ ರಾಜೀನಾಮೆ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಎಬಿವಿಪಿ ಗೂಂಡಾಗಳು ವಿವಿಯೊಳಗೆ ಮಾರಕಾಸ್ತ್ರಗಳನ್ನು ಹೇಗೆ ತಂದರು, ಅವರು ಬರುವಾಗ ಮತ್ತು ಹೋಗುವಾಗ ಪೊಲೀಸರು ಮೂಕಪ್ರೇಕ್ಷಕರಾಗಿದ್ದು ಏಕೆ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

ದೈಹಿಕ ಹಲ್ಲೆಯಿಂದ ವಿದ್ಯಾರ್ಥಿಗಳನ್ನು ಮಣಿಸಲು ಸಾಧ್ಯವಿಲ್ಲ. ಸಿಎಎ, ಎನ್‌ಆರ್‌ಸಿ ವಿರೊಧಿ ಹೋರಾಟವನ್ನು ದಿಕ್ಕುತಪ್ಪಿಸಲು ಸಾಧ್ಯವಿಲ್ಲ. ನಾವೆಲ್ಲರೂ ಜೆಎನ್‌ಯು ವಿದ್ಯಾರ್ಥಿಗಳ ಪರವಾಗಿದ್ದೇವೆ ಎಂದು ವಿದ್ಯಾರ್ಥಿ ಸಾರ್ವಜನಿಕರು ಸಾರಿದ್ದಾರೆ.

ಜೆಎನ್‌ಯುನಲ್ಲಿನ ಶುಲ್ಕ ಹೆಚ್ಚಳವನ್ನು ಸರ್ಕಾರ ಹಿಂಪಡೆಯಬೇಕು, ಜೆಎನ್‌ಯು ಉಳಿಸಲು ಮುಂದಾಗಬೇಕು ಎಂದು ಹೋರಾಟಗಾರರು ಆಗ್ರಹಿಸಿದ್ದಾರೆ.

ಇಂದು ಸಂಜೆ 4 ನಾಲ್ಕು ಗಂಟೆಗೂ ಕೂಡ ಹಲವು ವಿದ್ಯಾರ್ಥಿ ಸಂಘಟನೆಗಳು ಟೌನ್‌ಹಾಲ್‌ ಎದುರು ಸೇರಿ ಪ್ರತಿಭಟನೆ ತೀವ್ರಗೊಳಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...