ಕೇಂದ್ರ ಸರ್ಕಾರದ ವಿರುದ್ದ ರೈತರು ನಡೆಸುತ್ತಿರುವ ದೆಹಲಿ ಚಲೋ ಆಂದೋಲನ ಪರವಾಗಿ ನಾವಿದ್ದೇವೆ ಎಂದು ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿರುವ ಅವರು, “ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ರೈತ ಸಮುದಾಯ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಬದಲಾಗಿ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕು. ಈ ಹೋರಾಟದಲ್ಲಿ ಅನ್ನದಾತರ ಜೊತೆ ನಾವಿದ್ದೇವೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!
ಕೇಂದ್ರ ಸರ್ಕಾರದ ರೈತ ವಿರೋಧಿ ಕಾನೂನುಗಳ ವಿರುದ್ಧ ರೈತ ಸಮುದಾಯ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಸರ್ಕಾರ ಹೋರಾಟವನ್ನು ಹತ್ತಿಕ್ಕುವ ಬದಲಾಗಿ ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸುವ ಕೆಲಸ ಮಾಡಬೇಕೆಂದು ಒತ್ತಾಯಿಸುತ್ತೇನೆ. ಈ ಹೋರಾಟದಲ್ಲಿ ಅನ್ನದಾತರ ಜೊತೆ ನಾವಿದ್ದೇವೆ.#FarmersProtest pic.twitter.com/hEUiDDXZph
— Siddaramaiah (@siddaramaiah) November 30, 2020
“ರಾಜ್ಯದಲ್ಲಿ ಬಿಜೆಪಿ ಸರ್ಕಾರ ಜಾರಿಗೆ ತಂದಿರುವಂತಹ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ಕೈಬಿಡಬೇಕು. ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲಿಸಲಿದೆ. ನಾಡಿನ ರೈತ ಸಮುದಾಯದ ಜೊತೆ ಸದಾ ನಾವಿರಲಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದೇವೆ.
ರಾಜ್ಯದಲ್ಲಿ @BJP4Karnataka ಸರ್ಕಾರ ಜಾರಿಗೆ ತಂದಿರುವಂತಹ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿಗಳನ್ನು ತಕ್ಷಣ ಕೈಬಿಡಬೇಕು ಎಂದು ಆಗ್ರಹಿಸುತ್ತೇನೆ. ರೈತರ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲಿಸಲಿದೆ. ನಾಡಿನ ರೈತ ಸಮುದಾಯದ ಜೊತೆ ಸದಾ ನಾವಿರಲಿದ್ದೇವೆ. #FarmersProtests pic.twitter.com/lxnxDJiCVV
— Siddaramaiah (@siddaramaiah) November 30, 2020
ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!


