Homeಚಳವಳಿನಾವು ಚಂದ್ರಶೇಖರ್‌ ಅಜಾದ್‌ರವರನ್ನು ಕಳೆದುಕೊಳ್ಳುವ ಹಾದಿಯಲ್ಲಿದ್ದೇವೆ: ಭೀಮ್‌ ಆರ್ಮಿಯ ಖುಷ್‌ ಕಳವಳ

ನಾವು ಚಂದ್ರಶೇಖರ್‌ ಅಜಾದ್‌ರವರನ್ನು ಕಳೆದುಕೊಳ್ಳುವ ಹಾದಿಯಲ್ಲಿದ್ದೇವೆ: ಭೀಮ್‌ ಆರ್ಮಿಯ ಖುಷ್‌ ಕಳವಳ

- Advertisement -
- Advertisement -

ಸ್ನೇಹಿತರೇ, ಚಂದ್ರಶೇಖರ್ ಆಜಾದ್ ಅವರ ವೈದ್ಯಕೀಯ ವರದಿಯನ್ನು ಸಲ್ಲಿಸಿ 48 ಗಂಟೆಗಳು ಕಳೆದಿವೆ, ಆದರೆ ಅವರಿಗೆ ಚಿಕಿತ್ಸೆ ನೀಡುವ ಕುರಿತು ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ನಾವು ಬಹುಜನ ನಾಯಕರನ್ನು ಕಳೆದುಕೊಳ್ಳುವ ಹಾದಿಯಲ್ಲಿದ್ದೇವೆ, ಸರ್ಕಾರವು ತಕ್ಷಣವೇ ಅವರ ಚಿಕಿತ್ಸೆಗಾಗಿ ಏಮ್ಸ್ ಕಳುಹಿಸಬೇಕು ಮತ್ತು ಅವರ ವೈದ್ಯಕೀಯ ವರದಿ ನೀಡಬೇಕು ಎಂದು ಭೀಮ್‌ ಆರ್ಮಿಯ ಖುಷ್‌ ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನು ಚಂದ್ರಶೇಖರ್‌ ಅವರಿಗೆ ತುರ್ತಾಗಿ ಚಿಕಿತ್ಸೆ ನೀಡದಿದ್ದರೆ ಹೃದಯಘಾತ ಸಂಭವಿಸಬಹುದು ಎಂದು ಅವರ ಖಾಸಗಿ ವೈದ್ಯರು ಹೇಳಿದ್ದಾರೆ.

ಚಂದ್ರಶೇಖರ್‌ ಅಜಾದ್‌ ಫ್ಲೆಬೋಟಮಿ ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಆಜಾದ್ ಅವರ ವೈಯಕ್ತಿಕ ವೈದ್ಯ ಹರ್ಜೀತ್ ಸಿಂಗ್ ಭಟ್ಟಿ ಹೇಳಿದ್ದಾರೆ. “ಕೆಲವು ರಕ್ತದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ರಕ್ತದಿಂದ ಹೆಚ್ಚುವರಿ ಕೆಂಪು ರಕ್ತ ಕಣಗಳನ್ನು ತೆಗೆದುಹಾಕುವ ವಿಧಾನ”ಕ್ಕೆ ಫ್ಲೆಬೋಟಮಿ ಎಂದು ಕರೆಯಲ್ಪಡುತ್ತಿದ್ದು ಈ ಸಂಬಂಧ ಅವರು ಕಳೆದ ಒಂದು ವರ್ಷದಿಂದ ಏಮ್ಸ್ ನ ಹೆಮಟಾಲಜಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಎಎ ವಿರುದ್ಧ ಹಳೆ ದೆಹಲಿ ದರಿಯಾಗಂಜ್ ನಲ್ಲಿ ಕಳೆದ ಡಿಸೆಂಬರ್ 20 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ 14 ದಿನಗಳ ನ್ಯಾಯಾಂಗ ಬಂಧನದಲ್ಲಿರುವ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ಈಗ ಚಿಕಿತ್ಸೆ ನೀಡದಿದ್ದರೆ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಅವರ ಖಾಸಗಿ ವೈದ್ಯರು ಕಳವಳವ್ಯಕ್ತಪಡಿಸಿದ್ದಾರೆ.

ಚಿಕಿತ್ಸೆಗಾಗಿ ಅವರನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ-ಏಮ್ಸ್ ಗೆ ದಾಖಲಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿ ವೈದ್ಯರು ಮನವಿ ಮಾಡಿದ್ದಾರೆ. ಈ ಸಂಬಂಧ ಡಾ.ಹರ್ಜಿತ್ ಸಿಂಗ್ ಸರಣಿ ಟ್ವೀಟ್ ಮಾಡಿದ್ದಾರೆ.

ಆದರೆ ಇದಕ್ಕೆ ಜೈಲಿನ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿಲ್ಲ. ’ಆಜಾದ್ ಅವರು ಸಂಪೂರ್ಣವಾಗಿ ಉತ್ತಮ ಸ್ಥಿತಿಯಲ್ಲಿದ್ದಾರೆ. ಜೈಲು ವೈದ್ಯರ ವಾಡಿಕೆಯ ವೈದ್ಯಕೀಯ ತಪಾಸಣೆಯ ಸಮಯದಲ್ಲಿ ಅಂತಹ ಯಾವುದೇ ವಿಷಯವು ಅವರ ಗಮನಕ್ಕೆ ಬಂದಿಲ್ಲ ಮತ್ತು ಅಗತ್ಯವಿದ್ದಲ್ಲಿ ಅವರಿಗೆ ವೈದ್ಯಕೀಯ ನೆರವು ನೀಡಲಾಗುವುದು’ ಎಂದು ಜೈಲಿನ ಅಧಿಕಾರಿಗಳು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ದಂಪತಿಗಳ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...