Homeಮುಖಪುಟ‘ನಾವು ತಾಳ್ಮೆಯಿಂದಿದ್ದೇವೆ, ಆದರೆ ಮಿತಿ ಮೀರದಿರಿ’ - ರೈತರಿಗೆ ಎಚ್ಚರಿಕೆ ನೀಡಿದ ಹರಿಯಾಣ ಸಿಎಂ

‘ನಾವು ತಾಳ್ಮೆಯಿಂದಿದ್ದೇವೆ, ಆದರೆ ಮಿತಿ ಮೀರದಿರಿ’ – ರೈತರಿಗೆ ಎಚ್ಚರಿಕೆ ನೀಡಿದ ಹರಿಯಾಣ ಸಿಎಂ

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ದ ಪ್ರತಿಭಟಿಸುತ್ತಿರುವ ರೈತರನ್ನು ಉಲ್ಲೇಖಿಸಿ ಹರಿಯಾಣ ಮುಖ್ಯಮಂತ್ರಿ ಮನೋಹರ್‌‌ ಲಾ‌ಲ್‌ ಖಟ್ಟರ್‌‌ ಅವರು ‘ನಾವು ತಾಳ್ಮೆಯಿಂದಿದ್ದೇವೆ, ಆದರೆ ಮಿತಿ ಮೀರದಿರಿ’ ಎಂದು ಬುಧವಾರ ಎಚ್ಚರಿಕೆ ನೀಡಿದ್ದಾರೆ. ಖಟ್ಟರ್‌ ಅವರು ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿರೋಧವನ್ನು ತೀವ್ರವಾಗಿ ಎದುರಿಸುತ್ತಿದ್ದಾರೆ.

ಉತ್ತರ ಪ್ರದೇಶ-ದೆಹಲಿ ಗಡಿಯಾದ ಘಾಜಿಪುರದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರ ನಡುವೆ ಇಂದು ಘರ್ಷಣೆ ನಡೆದ ನಂತರ ಮುಖ್ಯಮಂತ್ರಿ ಈ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಭಯೋತ್ಪಾದನೆ ಆರೋಪ ಹೊತ್ತು 12 ವರ್ಷ ಜೈಲಲ್ಲಿ ಕಳೆದ ನಿರಪರಾಧಿ!

“ಕಿಸಾನ್ (ರೈತ) ಎಂಬ ಪದವು ಪವಿತ್ರವಾಗಿದೆ, ಅದನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ. ಕೆಲವು ದುರದೃಷ್ಟಕರ ಘಟನೆಗಳಿಂದಾಗಿ ಈ ಪದವು ಕಳಂಕಿತವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಸಿದುಕೊಳ್ಳಲಾಗಿದೆ, ಕೊಲೆಗಳು ನಡೆಯುತ್ತಿವೆ, ರಸ್ತೆಗಳು ನಿರ್ಬಂಧಿಸಲ್ಪಟ್ಟಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಘಟನೆಗಳಾಗಿದ್ದು, ನಾನು ಇದನ್ನು ಖಂಡಿಸುತ್ತೇನೆ” ಖಟ್ಟರ್ ಹೇಳಿದ್ದಾರೆ.

“ನಾವು ತಾಳ್ಮೆಯನ್ನು ಕಾಪಾಡಿಕೊಂಡಿದ್ದೇವೆ ಆದರೆ ಅವರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹಳ್ಳಿಗಳನ್ನು ಭೇಟಿ ಮಾಡಬಾರದು ಎಂದು ಬೆದರಿಕೆ ಹಾಕುತ್ತಿದ್ದಾರೆ. ಸರ್ಕಾರ ನಡೆಸುತ್ತಿರುವವರಿಗೆ ಜನರನ್ನು ಭೇಟಿ ಮಾಡುವ ಜವಾಬ್ದಾರಿ ಇದೆ. ನಮ್ಮನ್ನು ಎಷ್ಟೇ ಪ್ರಚೋದಿಸಿದರೂ ಅವರು ಹರಿಯಾಣದ ನಮ್ಮದೆ ಸ್ವಂತ ಜನರಾಗಿದ್ದರಿಂದ ನಾವು ತಾಳ್ಮೆಯನ್ನು ಕಾಪಾಡಿಕೊಂಡಿದ್ದೇವೆ. ಆದರೆ ಅವರು ತಮ್ಮ ಮಿತಿಯನ್ನು ಮೀರುವುದು ಒಳ್ಳೆಯದಲ್ಲ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಇದನ್ನೂ ಓದಿ: ಅನ್ನದಾತರ ವಿರುದ್ದ ಕತ್ತಿ ಎತ್ತಿ, ರೈತ ವಿರೋಧಿ ಘೋಷಣೆ ಕೂಗಿದ BJP ಕಾರ್ಯಕರ್ತರು

ರೈತ ಹೋರಾಟದ ಸ್ಥಳಗಳಲ್ಲಿ ಒಂದಾದ ಘಾಜಿಪುರ ಗಡಿಯಲ್ಲಿ ಬುಧವಾರ ರೈತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಿದೆ. ಇಂದು ಬೆಳಗ್ಗೆ ಉತ್ತರ ಪ್ರದೇಶ ಗೇಟ್ ಬಳಿಯ ರೈತರ ಪ್ರತಿಭಟನಾ ಸ್ಥಳದ ಬಳಿ ಬಿಜೆಪಿ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ದಾಂಧಲೆ ನಡೆಸಿದ್ದಾರೆಂದು ಭಾರತೀಯ ಕಿಸಾನ್ ಯೂನಿಯನ್ ಆರೋಪಿಸಿದೆ.

ಘಟನೆಯಲ್ಲಿ ಹೋರಾಟ ನಿರತ ರೈತರಿಗೆ ಗಾಯಗಳಾಗಿದ್ದು, ಕೆಲ ವಾಹನಗಳು ಜಖಂಗೊಂಡಿವೆ. ಇದೇ ವೇಳೆ ಬಿಜೆಪಿಯ ಕಾರ್ಯಕರ್ತನೊಬ್ಬ ರೈತರ ಮೇಲೆ ಕತ್ತಿ ಎತ್ತಿಕೊಂಡು ಹಲ್ಲೆಗೆ ಮುಂದಾದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಉತ್ತರ ಪ್ರದೇಶದ ನೂತನ ಸಚಿವರಾಗಿ ಆಯ್ಕೆಯಾಗಿರುವ ಅಮಿತ್ ವಾಲ್ಮಿಕಿ ಅವರನ್ನು ಸ್ವಾಗತಿಸಿಸುವ ನೆಪದಲ್ಲಿ ದೆಹಲಿ – ಮೀರತ್ ಎಕ್ಸ್‌ಪ್ರೆಸ್ ವೇನಲ್ಲಿರುವ ಪ್ರತಿಭಟನಾ ಸ್ಥಳದ ಬಳಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಡೋಲು ಬಾರಿಸುತ್ತ ರೈತ ವಿರೋಧಿ ಘೋಷಣೆಗಳನ್ನು ಕೂಗುವ ಮೂಲಕ ರೈತರನ್ನು ಪ್ರಚೋದಿಸಿದ್ದಾರೆ ಎನ್ನಲಾಗಿದೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ರೈತರು ಕಳೆದ ಏಳು ತಿಂಗಳಿನಿಂದ ದೆಹಲಿಯ ಮೂರು ಗಡಿಗಳಾದ ಸಿಂಗು, ಟಿಕ್ರಿ ಮತ್ತು ಗಾಜಿಪುರದಲ್ಲಿ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದಾರೆ.

ಇದನ್ನೂ ಓದಿ: ಯುಪಿ: ಅತ್ಯಾಚಾರ ಆರೋಪಿಗಳ ಕಪಾಳಕ್ಕೆ ಹೊಡೆದು ಪ್ರಕರಣ ಇತ್ಯರ್ಥಪಡಿಸಿಕೊಳ್ಳುವಂತೆ ಒತ್ತಾಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...