Homeಕರ್ನಾಟಕತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

ತನ್ನನ್ನು ನಿಂದಿಸುತ್ತಿದ್ದಾರೆಂದು ಅಳುವ ಪ್ರಧಾನಿಯನ್ನು ನೋಡುತ್ತಿದ್ದೇವೆ: ಮೋದಿಯನ್ನು ಗೇಲಿ ಮಾಡಿದ ಪ್ರಿಯಾಂಕಾ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, “ಪ್ರಧಾನಿಗೆ ಜನರ ಬಗ್ಗೆ ಕಾಳಜಿ ಇಲ್ಲ ಬದಲಿಗೆ ಅನುಕಂಪ ಪಡೆಯಲು ನಿಮ್ಮ ಬಳಿ ಅಳುತ್ತಾರೆ” ಎಂದು ಹೇಳಿದ್ದಾರೆ.

ಹೊಸಕೋಟೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಿಯಾಂಕಾ, ”ತನ್ನನ್ನು ನಿಂದಿಸುತ್ತಿದ್ದಾರೆ ಎಂದು ಜನರ ಬಳಿ ಹೇಳಿಕೊಂಡು ಅನುಕಂಪ ಗಿಟ್ಟಿಸಿಕೊಳ್ಳುವ ಪ್ರಧಾನಿಯನ್ನು ಇದೇ ಮೊದಲಬಾರಿಗೆ ನೋಡುತ್ತಿದ್ದೇನೆ” ಎಂದು ಗೇಲಿ ಮಾಡಿದ್ದಾರೆ.

ಬಿಜೆಪಿಯನ್ನು ವ್ಯಂಗ್ಯವಾಡಿದ ಅವರು, ಕೇಸರಿ ಪಕ್ಷವು ಪ್ರಜಾಪ್ರಭುತ್ವವನ್ನೇ ಕದಿಯುತ್ತಿದೆ ಎಂದರು. ಹಳೆಯ ಪಕ್ಷವಾದ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

”ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಾನಾ ತರಹದ ಕಳ್ಳರಿದ್ದಾರೆ, ಕೆಲವರು ಮನೆಗಳಲ್ಲಿ ಕಳ್ಳತನ ಮಾಡುತ್ತಾರೆ… ಈಗ ಸರ್ಕಾರವನ್ನೇ ಕದಿಯುವ ಕಳ್ಳರು ಕೂಡ ಬಂದಿದ್ದಾರೆ, ಪ್ರಜಾಪ್ರಭುತ್ವವನ್ನೇ ಕದಿಯುತ್ತಿದ್ದಾರೆ… ಅದನ್ನು ತಡೆಯಿರಿ…,” ಎಂದು ಪ್ರಿಯಾಂಕಾ ಹೇಳಿದರು.

ಮಾಜಿ ಕಾಂಗ್ರೆಸ್ ಸಂಸದರು ದೇಶಕ್ಕಾಗಿ ಪ್ರಾಣ ಕೊಡಲು ಸಿದ್ಧರಾಗಿದ್ದಾರೆ. ರಾಹುಲ್‌ ಗಾಂಧಿ ಅವರನ್ನು ನೋಡಿ ಪಾಠ ಕಲಿಯಿರಿ ಎಂದು ಈ ಹಿಂದೆ ಏಪ್ರಿಲ್ 30ರಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರೀಯಾಂಕಾ ಹೇಳಿದರು.

ಇದನ್ನೂ ಓದಿ: ‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

ಜಮಖಂಡಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ”ಸಾರ್ವಜನಿಕರ ಮುಂದೆ ನಿಂದನೆಯಾಗುತ್ತಿದೆ ಎಂದು ಹೇಳುವ ಮೊದಲ ಪ್ರಧಾನಿಯನ್ನು ನಾನು ನೋಡಿದ್ದೇನೆ, ಪ್ರಧಾನಿ ಬಳಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಪಟ್ಟಿ ಇಲ್ಲ, ಆದರೆ ನಿಂದನೆಯ ಪಟ್ಟಿ ಇದೆ. ಮೋದಿಜೀ , ‘ಗಾಲಿ ಕ್ಯಾ ಮೇ ದೇಶ್ ಕೆ ಲಿಯೇ ಗೋಲಿ ಖಾ ಲುಂಗಾ’ ಎಂದು ಹೇಳುವ ನನ್ನ ಸಹೋದರನಿಂದ (ರಾಹುಲ್ ಗಾಂಧಿ) ಪಾಠ ಕಲಿಯಿರಿ” ಎಂದು ಹೇಳಿದರು.

”ನನ್ನ ಕುಟುಂಬದ ಮೇಲೆ ಎಸೆದಿರುವ ನಿಂದನೆಗಳ ಸಂಖ್ಯೆಯನ್ನು ನಾನು ಎಣಿಸಲು ಪ್ರಾರಂಭಿಸಿದರೆ ಮತ್ತು ಬಿಜೆಪಿಯ ಒಬ್ಬೊಬ್ಬರ ಹೆಸರ ಮೇಲೂ ನಾನು ಹಲವಾರು ಪುಸ್ತಕಗಳನ್ನು ಪ್ರಕಟಿಸಬೇಕಾಗಬಹುದು” ಎಂದು ಹೇಳಿದರು.

ಮೊನ್ನೆ ಭಾನುವಾರ ಬೆಳಗಾವಿಯ ಕುಡಚಿಯಲ್ಲಿ ಪ್ರಿಯಾಂಕಾ ಗಾಂಧಿ ಅವರು ರೋಡ್‌ಶೋ ನಡೆಸಿದರು. ಈ ವೇಳೆ, ”ಹಣದುಬ್ಬರವನ್ನು ತಂದವರು ಯಾರು? ಜನರನ್ನು ಲೂಟಿ ಮಾಡಿದವರು ಯಾರು? ಜಿಎಸ್‌ಟಿಯನ್ನು ತಂದು ನಿಮ್ಮನ್ನು ತೊಂದರೆಗೊಳಿಸಿದ್ದು ಯಾರು? 40% ಕಮಿಷನ್ ಸರ್ಕಾರವನ್ನು ನಡೆಸುವವರು ಯಾರು?” ಸರಣಿ ಪ್ರಶ್ನೆಗಳನ್ನು ಕೇಳಿದ್ದರು.

”ಬಿಜೆಪಿಯು ಸುಳ್ಳು ಭರವಸೆಗಳನ್ನು ನೀಡುತ್ತದೆ ಮತ್ತು ಎಂದಿಗೂ ಈಡೇರಿಸುವುದಿಲ್ಲ. ಆದರೆ ಕಾಂಗ್ರೆಸ್ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸಿದೆ. ಕಾಂಗ್ರೆಸ್ ಯಾವಾಗಲೂ ಜನರಿಗಾಗಿ ಕೆಲಸ ಮಾಡುವ ಉದ್ದೇಶವನ್ನು ಹೊಂದಿದೆ ಮತ್ತು ಜನರಿಗೆ ದ್ರೋಹ ಮಾಡಬಾರದು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...