Homeಕರ್ನಾಟಕದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ವಿರೋಧಿಸಿ ಇಂದು ಜೀವಪರ ಮನಸ್ಸುಗಳಿಂದ ಬೃಹತ್‌ ಪ್ರತಿಭಟನೆಗೆ ಸಜ್ಜು...

ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನ ವಿರೋಧಿಸಿ ಇಂದು ಜೀವಪರ ಮನಸ್ಸುಗಳಿಂದ ಬೃಹತ್‌ ಪ್ರತಿಭಟನೆಗೆ ಸಜ್ಜು…

- Advertisement -
- Advertisement -

ಪತ್ರಕರ್ತ, ಹೋರಾಟಗಾರ, ಸ್ವರಾಜ್‌ ಇಂಡಿಯಾ ರಾಜ್ಯ ಕಾರ್ಯದರ್ಶಿ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ಅಕ್ರಮ ಬಂಧನ ವಿರೋಧಿಸಿ, ಕೂಡಲೇ ಬಿಡುಗಡೆಗೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆಗೆ ಜೀವಪರ ಮನಸ್ಸುಗಳು ಕರೆ ನೀಡಿದ್ದಾರೆ.

ಇಂದು ಮಧ್ಯಾಹ್ನ 3ಗಂಟೆಗೆ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನಾ ಧರಣಿ ನಡೆಯಲಿದ್ದು ನಂತರ ಮುಖ್ಯಮಂತ್ರಿ ಮತ್ತು ಗೃಹಸಚಿವರಿಗೆ ಹಕ್ಕೊತ್ತಾಯ ಸಲ್ಲಿಸುವ ಯೋಜನೆ ನಡೆಸಿದ್ದಾರೆ.

ಗೌರಿ ಮೀಡಿಯಾ ಟ್ರಸ್ಟ್ ಕಾರ್ಯದರ್ಶಿಯೂ ಆದ ಪತ್ರಕರ್ತ, ಸಾಮಾಜಿಕ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ರಾಯಚೂರು ಪೊಲೀಸರು ಅಕ್ರಮವಾಗಿ ಬಂಧಿಸಿರುವುದು ಆಳುವ ಪಕ್ಷದ ದಮನಕಾರಿ ಪ್ರವೃತ್ತಿಯನ್ನು ಇದು ಮತ್ತೆ ಮತ್ತೆ ಎತ್ತಿ ತೋರಿಸುತ್ತಿದೆ ಎಂದು ನೂರಾರು ಪ್ರಜ್ಞಾವಂತರು ತಮ್ಮ ಆಕ್ರೋಶವನ್ನು ಹೊರ ಹಾಕಿದ್ದಾರೆ.

#We_are_with_DMNMurthy #We_are_with_Peoples_Media ಎಂಬ ಹ್ಯಾಷ್‌ ಟ್ಯಾಗ್‌ನೊಂದಿಗೆ ನೂರಾರು ಜನರು ಸಾಮಾಜಿಕ ಜಾಲತಾಣಗಳಲ್ಲಿ ನರಸಿಂಹಮೂರ್ತಿಯವರ ಬಂಧನವನ್ನು ವಿರೋಧಿಸಿದ್ದು ಇಂದು ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಘೋಷಿಸಿದ್ದಾರೆ.

“ದೊಡ್ಡಿಪಾಳ್ಯ ನರಸಿಂಹಮೂರ್ತಿಯವರ ದುರುದ್ದೇಶಪೂರ್ವಕ ಬಂಧನವನ್ನು ಖಂಡಿಸುತ್ತೇವೆ. ಜನಪರ ಮಾಧ್ಯಮಗಳ ಮೇಲಿನ ದಬ್ಬಾಳಿಕೆಯನ್ನು ಸಹಿಸುವುದಿಲ್ಲ, ಜನಪರ ಮಾಧ್ಯಮ ಪ್ರಯತ್ನದ ಜೊತೆಗೆ ನಾವಿದ್ದೇವೆ ಎನ್ನು ಪೋಸ್ಟಿಗೆ ನಿಮ್ಮ ಒಪ್ಪಿಗೆಯಿದ್ದರೆ ತಿಳಿಸಿ ನಿಮ್ಮ ಹೆಸರನ್ನೂ ಸೇರಿಸಲಾಗುವುದು. ಈ ಸಂದರ್ಭದಲ್ಲಿ ನಾವೆಲ್ಲಾ ಪರಸ್ಪರ ಜೊತೆಗಿದ್ದೇವೆ ಎಂಬುದಕ್ಕೆ ಮಹತ್ವವಿದೆ” ಎಂಬ ಫೇಸ್‌ಬುಕ್‌ ಬರಹವೊಂದಕ್ಕೆ ಒಂದು ಸಾವಿರಕ್ಕಿಂತಲೂ ಅಧಿಕ ಜನರು ತಮ್ಮ ಹೆಸರನ್ನು ಸೂಚಿಸಿ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...