Homeಕರ್ನಾಟಕನಾವು ಮಹಾತ್ಮ ಗಾಂಧಿಯವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ, ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತ ಪಾಲಿಸುತ್ತಿದೆ...

ನಾವು ಮಹಾತ್ಮ ಗಾಂಧಿಯವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ, ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತ ಪಾಲಿಸುತ್ತಿದೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿಯ ಸುವರ್ಣಸೌಧದ ಅಂಗಳದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ

- Advertisement -
- Advertisement -

“ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯ ಸುವರ್ಣಸೌಧದ ಅಂಗಳದಲ್ಲಿ ಮಂಗಳವಾರ (ಜ.21) ಮಹಾತ್ಮ ಗಾಂಧಿಯವರ ಪ್ರತಿಮೆ ಅನಾವರಣಗೊಳಿಸಿ ಅವರು ಮಾತನಾಡಿದರು.

ಗಾಂಧಿಯವರು ಹಿಂದುತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ‘ಜೈ ಭಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನ’ ಮುನ್ನಡೆಸುತ್ತೇವೆ ಎಂದರು.

ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸಿಎಂ ಸ್ಮರಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕಾ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ವಿಧಾನಸಭೆ ಉಪ ಅಧ್ಯಕ್ಷ ರುದ್ರಪ್ಪ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...