Homeಚಳವಳಿ'ನಮ್ಮ‌ ಊಟ ನಾವೇ ತಂದಿದ್ದೇವೆ': ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

‘ನಮ್ಮ‌ ಊಟ ನಾವೇ ತಂದಿದ್ದೇವೆ’: ಸರ್ಕಾರದ ಜೊತೆಗಿನ ಸಭೆಯಲ್ಲಿ ಊಟ ಮಾಡಲು ನಿರಾಕರಿಸಿದ ರೈತರು!

ಸರ್ಕಾರದಿಂದ ಮಾಡಿದ ಊಟದ ವ್ಯವಸ್ಥೆಯನ್ನು ತಿರಸ್ಕರಿಸಿದ ರೈತರ ತಾವೇ ತಂದಿದ್ದ ಊಟವನ್ನು ನೆಲದಲ್ಲಿ ಕೂತು ಉಣ್ಣುವ ಮೂಲಕ ಸರ್ಕಾರದ ಹಂಗು ನಮಗೆ ಬೇಡ ಎಂಬ ಸಂದೇಶ ರವಾನಿಸಿದ್ದಾರೆ.

- Advertisement -
- Advertisement -

ಮೂವರು ಕೇಂದ್ರ ಸಚಿವರೊಂದಿಗಿನ ರೈತ ಮುಖಂಡರ ಮಹತ್ವದ ಸಭೆಯಲ್ಲಿ ರೈತರು ಮತ್ತೊಮ್ಮೆ ಸ್ವಾಭಿಮಾನ ಮೆರೆದಿದ್ದಾರೆ. ಮಧ್ಯಾಹ್ನದ ಊಟದ ಬಿಡುವಿನಲ್ಲಿ ರೈತ ಮುಖಂಡರಿಗೆ ಸರ್ಕಾರದಿಂದ ಮಾಡಿದ ಊಟದ ವ್ಯವಸ್ಥೆಯನ್ನು ತಿರಸ್ಕರಿಸಿದ ರೈತರ ತಾವೇ ತಂದಿದ್ದ ಊಟವನ್ನು ನೆಲದಲ್ಲಿ ಕೂತು ಉಣ್ಣುವ ಮೂಲಕ ಸರ್ಕಾರದ ಹಂಗು ನಮಗೆ ಬೇಡ ಎಂಬ ಸಂದೇಶ ರವಾನಿಸಿದ್ದಾರೆ.

ಲಂಗರ್‌ನಿಂದ ತಯಾರಿಸಿದ ಊಟ ಮಾಡಿದ ರೈತರು “ಸರ್ಕಾರದ ವತಿಯಿಂದ ಒದಗಿಸಲಾದ ಟೀ ಅಥವಾ ಊಟವನ್ನು ನಾವು ನಿರಾಕರಿಸಿ, ನಾವೇ ತಂದಿದ್ದ ಊಟ ಮಾಡಿದ್ದೇವೆ” ಎಂದು ರೈತ ಪ್ರತಿನಿಧಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಹೋರಾಟ 8 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಸಚಿವರು ಇಂದು ನಾಲ್ಕನೆ ಬಾರಿಗೆ ರೈತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರವು ಕೃಷಿ ಕಾಯ್ದೆಗಳನ್ನು ಉಳಿಸಿಕೊಂಡು ಕನಿಷ್ಟ ಬೆಂಬಲ ನೀಡುವುದಾಗಿ ರೈತರಿಗೆ ಲಿಖಿತ ಭರವಸೆ ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಆದರೆ ರೈತ ಸಂಘಟನೆಗಳ ಮುಖಂಡರು 3 ಕೃಷಿ ಕಾಯ್ದೆಗಳನ್ನು ಬೇಷರತ್ತಾಗಿ ಹಿಂಪಡೆಯಬೇಕು, ಅದಕ್ಕಾಗಿ ವಿಶೇಷ ಸಂಸತ್ ಅಧಿವೇಶನ ಕರೆಯಬೇಕೆಂದು ತಾಕೀತು ಮಾಡಿದ್ದಾರೆ. ಡಿಸೆಂಬರ್ 03 ರ ಅಂತಿಮ ಅವಕಾಶವಾಗಿದ್ದು ಸರ್ಕಾರ ರೈತರ ಬೇಡಿಕೆಗೆ ಒಪ್ಪದಿದ್ದಲ್ಲಿ ದೆಹಲಿಗೆ ಬರುವ ಎಲ್ಲಾ ರಸ್ತೆಗಳನ್ನು ಮುಚ್ಚುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಪರವಾಗಿ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕ್ಯಾಬಿನೆಟ್ ಸಚಿವ ಪಿಯೂಶ್ ಗೋಯಲ್ ಮತ್ತು ಸೋಮ್‌ ಪ್ರಕಾಶ್ ಸಭೆಯಲ್ಲಿ ಭಾಗವಹಿಸಿದ್ದಾರೆ. 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಮುಖಂಡರು ಮಾತುಕತೆಯಲ್ಲಿ ತೊಡಗಿದ್ದಾರೆ.


ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...