Homeಕರ್ನಾಟಕಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

ಸತ್ಯ ಹರಡಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳೋಣ: ಸಸಿಕಾಂತ್ ಸೆಂಥಿಲ್

- Advertisement -
- Advertisement -

ಬಿಜೆಪಿ, ಆರೆಸ್ಸೆಸ್ ಸಮಾಜದಲ್ಲಿ ಭಿತ್ತುತ್ತಿರುವ ಕೋಮುವಾದಿ ವಿಚಾರಗಳ ವಿರುದ್ಧ ಜನಾಭಿಪ್ರಾಯ ಮೂಡಿಸಲು ಪ್ರಗತಿಪರ ಸಂಘಟನೆಗಳು ಒಕ್ಕೂಟ ರಚಿಸಿಕೊಂಡು ಕಾರ್ಯಮಗ್ನರಾಗಬೇಕಾದ ಅಗತ್ಯವಿದೆ ಎಂದು ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.

ಗೌರಿ ಪತ್ರಿಕಾ ಬಳಗ ಬೆಂಗಳೂರಿನ ಗಾಂಧಿಭವನದಲ್ಲಿ ಹಿರಿಯ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಂಧನದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಮಾಜಿಕ ಕಾರ್ಯಕರ್ತರು ಹಾಗೂ ಜನಪರ ಪತ್ರಕರ್ತರ ಮೇಲಿನ ದಾಳಿಯನ್ನು ಎದುರಿಸುವ ಕುರಿತ ಚರ್ಚಾಗೋಷ್ಟಿಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಜನಪರವಾಗಿ ಕೆಲಸ ಮಾಡುವವರನ್ನು ಬಂಽಸುವ ಪ್ರಕ್ರಿಯೆಯನ್ನು ಮುಂದುವರೆಸುವ ಎಲ್ಲ ಮುನ್ಸೂಚನೆಗಳು ಇವೆ. ಇದನ್ನು ತಡೆಯಬೇಕಾದರೆ ಬಿಜೆಪಿಯ ಜನವಿರೋಧಿ ನಿಲುವುಗಳ ಕುರಿತು ಜನಾಭಿಪ್ರಾಯ ಮೂಡಿಸುವುದೊಂದೆ ನಮಗಿರುವ ಬಹುದೊಡ್ಡ ದಾರಿ ಮಾಡಿಕೊಟ್ಟಿತು ಎಂದರು.

ಆರೆಸ್ಸೆಸ್ ಪ್ರಜಾಪ್ರಭುತ್ವದ ದಾರಿಯನ್ನೇ ಬಳಸಿಕೊಂಡು ಇಡೀ ವ್ಯವಸ್ಥೆಯನ್ನು ಕೋಮುವಾದೀಕರಣ ಮಾಡಲು ಹೊರಟಿದೆ. ಸಂಸತ್‌ನ ಒಳಗೂ ಕೋಮುವಾದಿ ವ್ಯಕ್ತಿಗಳನ್ನು ನುಸುಳುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು RSSನ ಜನವಿರೋಧಿ ನೀತಿಯನ್ನು ಬಯಲು ಮಾಡಲು ಸಾಮಾಜಿಕ ಜಾಲತಾಣಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇದೆ ಎಂದು ಅವರು ಹೇಳಿದರು.

ಇವತ್ತಿನ ರಾಜಕಾರಣಿಗಳು, ನ್ಯಾಯಾಧೀಶರು, ಪೊಲೀಸ್ ವ್ಯವಸ್ಥೆಯು ಪತ್ರಿಕೆ, ದೃಶ್ಯ ಮಾಧ್ಯಮಗಳಿಗಿಂತ ಫೇಸ್‌ಬುಕ್, ವಾಟ್ಸಾಪ್‌ಗಳಲ್ಲಿ ಬರುವ ಸುದ್ಧಿಗಳನ್ನು ಹೆಚ್ಚು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ. ಹೀಗಾಗಿ ಪ್ರಗತಿಪರವಾಗಿ ಚಿಂತಿಸುವ ಪ್ರತಿಯೊಬ್ಬರು ತಮಗೆ ಗೊತ್ತಿರುವ ಸತ್ಯ ಸಂಗತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಬರೆಯುವ ಮೂಲಕ ಹೆಚ್ಚು ಜನರಿಗೆ ತಲುಪುವಂತೆ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಕೋಮು ಸೌಹಾರ್ದ ವೇದಿಕೆಯ ಕೆ.ಎಲ್.ಅಶೋಕ್ ಮಾತನಾಡಿ, ಕೋಮುವಾದಿಗಳು ಮನೆ ಒಳಗೆ ನುಸುಳಿದ್ದಾರೆ. ಮಾಡು ಇಲ್ಲವೆ ಮಡಿ ಎನ್ನುವ ಸ್ಥಿತಿಗೆ ಬಂದು ತಲುಪಿದ್ದೇವೆ. ಇಂತಹ ಸಂದರ್ಭದಲ್ಲಿ ಪ್ರಗತಿಪರ ಸಂಘಟನೆಗಳು ಒಕ್ಕೂಟವಾಗಿ ಆರೆಸ್ಸೆಸ್ ಚಿಂತನೆಯ ವಿರುದ್ಧ ಜನಾಭಿಪ್ರಾಯ ಮೂಡಿಸುವುದು ಅಗತ್ಯವಾಗಿದೆ ಎಂದರು.

ಹಿರಿಯ ಪತ್ರಕರ್ತ ಸುನಿಲ್ ಶಿರಸಂಗಿ ಮಾತನಾಡಿ, ಇಪ್ಪತ್ತು ವರ್ಷಗಳಿಂದ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿ ಅವರನ್ನು ಬಿಜೆಪಿ ಸರಕಾರ ಬಂಧಿಸಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪತ್ರಕರ್ತರು, ಮಾನವ ಹಕ್ಕು ಹೋರಾಟಗಾರರನ್ನು ಬಂಧಿಸುವಂತಹ ಷಡ್ಯಂತ್ರಗಳನ್ನು ರೂಪಿಸಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ ಮಾತನಾಡಿ, ಇವತ್ತಿನ ಸನ್ನಿವೇಶ ಜನಪರವಾಗಿ ಚಿಂತಿಸುವವರಿಗೆ ತೀರ ಆತಂಕ ಕಾರಿಯಾಗಿದೆ. ಪ್ರಭುತ್ವ ಮಾಡುವ ಜನವಿರೋಧಿ ನೀತಿಗಳನ್ನು ಟೀಕೆ ಮಾಡಿದರೆ ಬಂಧಿಸುವಂತಹ, ಬೆದರಿಕೆ ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಗತಿಪರರು ತಮ್ಮ ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಒಟ್ಟಾಗಬೇಕಾದ ಅಗತ್ಯವಿದೆ ಎಂದರು.

ಸಭೆಯಲ್ಲಿ ಮಾಜಿ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥನ್, ಪ್ರೊ.ನಗರಗೆರೆ ರಮೇಶ್, ಕರ್ನಾಟಕ ಜನಶಕ್ತಿಯ ವಾಸು, ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸರೋವರ್ ಬೆಂಕಿಕೆರೆ, ಚಂದ್ರು, ಮಾನವ ಹಕ್ಕು ಹೋರಾಟಗಾರ ಮನೋಹರ್, ಪ್ರೊ.ಶಿವರಾಮಯ್ಯ, ಅಂಕಣಕಾರ ನಾರಾಯಣ, ಹುಲಿಕುಂಟೆಮೂರ್ತಿ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...