Homeಮುಖಪುಟಉದ್ಯೋಗದಾತ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಸುಪ್ರೀಂ

ಉದ್ಯೋಗದಾತ ಕಂಪನಿಗಳ ವಿರುದ್ಧ ಬಲವಂತದ ಕ್ರಮ ಸಲ್ಲದು: ಸುಪ್ರೀಂ

- Advertisement -
- Advertisement -

ಲಾಕ್‌ಡೌನ್‌ ಅವಧಿಯಲ್ಲಿ ಕೆಲಸದಿಂದ ತೆಗೆದುಹಾಕಿದ ಅಥವಾ ಪೂರ್ಣ ಸಂಬಳ ನೀಡದ ಉದ್ಯೋಗದಾತ ಕಂಪನಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಲಾಕ್‌ಡೌನ್ ಅವಧಿಯಲ್ಲಿ ಉದ್ಯೋಗಿಗಳಿಗೆ ಪೂರ್ಣ ವೇತನವನ್ನು ನೀಡುವಂತೆ ಮತ್ತು ಕೆಲಸದಿಂದ ತೆಗೆಯಬಾರದೆಂದು ಉದ್ಯೋಗದಾತರಿಗೆ ಕೇಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರದ ಮಾರ್ಚ್ 29 ರಂದು ಆದೇಶಿಸಿತ್ತು. ಕೇಂದ್ರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ಮೇಲಿನ ವಿಚಾರಣೆ ನಡೆಸಿದ ಸುಪ್ರೀಂ ತೀರ್ಪನ್ನು ಜೂನ್ 12 ಕ್ಕೆ ಕಾಯ್ದಿರಿಸಿದೆ.

ಕೊರೊನಾ ಲಾಕ್‌ಡೌನ್ ಸಮಯದಲ್ಲಿನ 54 ದಿನಗಳವರೆಗೆ ಸಂಬಳಕ್ಕಾಗಿ ಏನು ಮಾಡಬೇಕೆಂಬುದನ್ನು ಪ್ರಕಟಿಸಲು ಉದ್ಯೋಗದಾತರು ಮತ್ತು ಕಾರ್ಮಿಕರ ನಡುವೆ ಕೆಲವು ಮಾತುಕತೆಗಳು ನಡೆಯಬೇಕಿದೆ ಎಂದು ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು ತಿಳಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ವೇತನದ ಬಗ್ಗೆ ತನ್ನ ಆದೇಶವನ್ನು ಸಮರ್ಥಿಸಿಕೊಂಡಿರುವ ಕೇಂದ್ರ ಸರ್ಕಾರ, ‘ಸಂಬಳ ಪಾವತಿಸಲು ಅಸಮರ್ಥತೆ ಹೊಂದಿರುವ ಉದ್ಯೋಗದಾತರು ತಮ್ಮ ಲೆಕ್ಕಪರಿಶೋಧಿತ ಬ್ಯಾಲೆನ್ಸ್ ಶೀಟ್‌ಗಳು ಮತ್ತು ಖಾತೆಗಳನ್ನು ನ್ಯಾಯಾಲಯದಲ್ಲಿ ಒದಗಿಸುವಂತೆ ನಿರ್ದೇಶಿಸಬೇಕು’ ಎಂದು ಕೇಳಿದೆ.

ಸರ್ಕಾರವು “ನೀಡಲಾಗಿರುವ ಅಧಿಸೂಚನೆಗಳು ಕಾರ್ಮಿಕರ ಜೀವನದಲ್ಲಿ ಮುಖ್ಯ ಪಾತ್ರವಹಿಸಲಿದೆ. ಏಕೆಂದರೆ, ದುಡಿಮೆಯಿಲ್ಲದೆ ಕಾರ್ಮಿಕರು ಜೀವನ ನಿರ್ವಹಿಸುವುದು ಕಷ್ಟವಾಗುತ್ತದೆ.’ ಹಾಗಾಗಿ ಕಾರ್ಮಿಕರ ಸಂಕಷ್ಟಗಳನ್ನು ತಗ್ಗಿಸಲು ಇದು ನೆರವಾಗುತ್ತದೆ. ನ್ಯಾಯದ ಹಿತದೃಷ್ಟಿಯಿಂದ ಅಥವಾ ಸಾರ್ವಜನಿಕ ಹಿತಾಸಕ್ತಿಯಿಂದ ಅದನ್ನು ಕಡೆಗಣಿಸಲು ಆಗುವುದಿಲ್ಲ” ಎಂದು ಸರ್ಕಾರವು ತನ್ನ ಮೇಲ್ಮನವಿಯಲ್ಲಿ ಹೇಳಿದೆ.

ಈ ಸಂದರ್ಭದಲ್ಲಿ, ‘ಈ ವಿಷಯದ ಬಗ್ಗೆ ಅರ್ಹತೆಗಳ ಮೇಲೆ ತೀರ್ಪು ನೀಡಲು ಕೋರ್ಟ್‌ ಒಲವು ತೋರಬೇಕು, ಅರ್ಜಿದಾರರು(ಉದ್ಯೋಗದಾತರು) ವೇತನವನ್ನು ಪಾವತಿಸಲು ಅಸಮರ್ಥರಾಗಿದ್ದಾರೆ ಎಂಬುದಕ್ಕೆ ಪುರಾವೆ ನೀಡಲು ನಿರ್ದೇಶಿಸಬೇಕು. ಮಾರ್ಚ್ 29, 2020 ರ ಆದೇಶದ ಪ್ರಕಾರ ಅವರ ಲೆಕ್ಕಪರಿಶೋಧಿತ ಬ್ಯಾಲೆನ್ಸ್ ಶೀಟ್‌ಗಳು ಮತ್ತು ಖಾತೆಗಳನ್ನು ನ್ಯಾಯಾಲಯದ ಮುಂದಿಡಬೇಕು” ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಹ್ಯಾಂಡ್ ಟೂಲ್ಸ್ ತಯಾರಕರ ಸಂಘವು ಸಲ್ಲಿಸಿದ್ದ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಎಲ್.ಎನ್.ರಾವ್, ಎಸ್.ಕೆ.ಕೌಲ್ ಮತ್ತು ಬಿ.ಆರ್.ಗವಾಯಿ ಅವರ ನ್ಯಾಯಪೀಠವು ಗೃಹ ಸಚಿವಾಲಯದ (ಎಂಎಚ್‌ಎ) ಮಾರ್ಚ್ 29ರ ಸುತ್ತೋಲೆಯು ಸರ್ವಭಕ್ಷಕ ಆದೇಶವಾಗಿದೆ ಮತ್ತು ಬೃಹತ್‌ ಪ್ರಶ್ನೆಗಳನ್ನು ಒಳಗೊಂಡಿದ್ದು, ಆ ಪ್ರಶ್ನೆಗಳಿಗೆ ಉತ್ತರಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದೆ.

ಮೇ 15 ರಂದು ವಿಚಾರಣೆ ನಡೆಸಿದ್ದ ಸುಪ್ರೀಂ, ಕಂಪೆನಿಗಳು ಮತ್ತು ಉದ್ಯೋಗದಾತರು ರಾಷ್ಟ್ರೀಯ ಲಾಕ್‌ಡೌನ್ ಅವಧಿಯಲ್ಲಿ ನೌಕರರಿಗೆ ಪೂರ್ಣ ವೇತನವನ್ನು ನೀಡುವ ಅಧಿಕೃತ ನಿರ್ದೇಶನವನ್ನು ಉಲ್ಲಂಘಿಸಿರುವವ ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಸರ್ಕಾರವನ್ನು ನಿರ್ಬಂಧಿಸಿತ್ತು.

ಅಲ್ಲದೆ, ನ್ಯಾಯಮೂರ್ತಿ ಕೌಲ್ ಅವರು ಲಾಭಗಳಿಸದ ಅಥವಾ ಕೆಲಸವನ್ನು ಸ್ಥಗಿತಗೊಳಿಸಿರುವ ಸಣ್ಣ ಕಂಪನಿಗಳು ಇರಬಹುದು. ಅಂತಹ ಕಂಪನಿಗಳು ವೇತನವನ್ನು ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರ ಸಹಾಯ ಹಸ್ತ ಚಾಚದ ಹೊರತು ಈ ಘಟಕಗಳು ತಮ್ಮ ಕಾರ್ಮಿಕರಿಗೆ ಸಂಬಳ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಕೇಂದ್ರಕ್ಕೆ ನೋಟಿಸ್ ನೀಡಿದೆ.


ಇದನ್ನೂ ಓದಿ: ಒಂದೇ ರೀತಿಯ ಪ್ರಕರಣ ಮೂರು ಭಿನ್ನ ತೀರ್ಪುಗಳು: ಅರ್ನಾಬ್ ಗೋಸ್ವಾಮಿಗೆ ಸಿಕ್ಕ ಅವಕಾಶ ಶಾರ್ಜೀಲ್ ಇಮಾಮ್, ಪೂನಿಯಾಗೇಕಿಲ್ಲ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...