Homeಮುಖಪುಟಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದಲ್ಲೂ ಸ್ಫರ್ಧಿಸುತ್ತೇವೆ: ಅಸಾದುದ್ದಿನ್ ಒವೈಸಿ

ನೀವು ಮಹಾರಾಷ್ಟ್ರದಲ್ಲಿ ಶಿವಸೇನಾ ಮಡಿಲಲ್ಲಿ ಕುಳಿತುಕೊಂಡು ಅಧಿಕಾರ ನಡೆಸಬಹುದು. ಆದರೆ ನಾವು ಚುನಾವಣೆಗೆ ಸ್ಪರ್ಧಿಸಬಾರದೆ ಎಂದಿದ್ದಾರೆ

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 5 ಸ್ಥಾನಗಳಲ್ಲಿ ಪಡೆದು ಉತ್ತೇಜನಗೊಂಡಿರುವ AIMIM ಇದೀಗ ಮುಂಬರುವ ಉತ್ತರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ತನ್ನ ಅಭ್ಯರ್ಥಿಯನ್ನು ಇಳಿಸುವುದಾಗಿ ಪಕ್ಷದ ಅಧ್ಯಕ್ಷ ಅಸದುದ್ದೀನ್ ಒವೈಸಿ ಹೇಳಿದ್ದಾರೆ.

ಬಿಹಾರದಲ್ಲಿ ತಮ್ಮ ಪಕ್ಷ ಪಡೆದ 5 ಸ್ಥಾನಗಳ ಕುರಿತು ಹೇಳಿದ ಅವರು, “ಬಿಹಾರದ ಪೂರ್ವ ಸೀಮಾಂಚಲ್ ಭಾಗದ ಮತದಾರರು ನಮ್ಮ ಪಕ್ಷವನ್ನು ಆಯ್ಕೆ ಮಾಡಿದ್ದು, ನಮ್ಮ ಪಕ್ಷ ಆ ಪ್ರದೇಶದಲ್ಲಿ ನ್ಯಾಯಕ್ಕಾಗಿ ಹೋರಾಡಲಿದೆ. ನಮ್ಮ ಪಕ್ಷ ಪಶ್ಚಿಮ ಬಂಗಾಳ, ಉತ್ತರಪ್ರದೇಶದಲ್ಲೂ ಸ್ಪರ್ಧಿಸುತ್ತದೆ. ನಾನು ದೇಶದ ಪ್ರತಿ ಚುನಾವಣೆಯಲ್ಲೂ ಸ್ಪರ್ಧಿಸುತ್ತೇನೆ. ಇದಕ್ಕಾಗಿ ನಾನು ಯಾರದ್ದಾದರೂ ಅನುಮತಿ ಪಡೆಯಬೇಕೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಹಾರ: ಈ ಗೆಲುವು ಮೋದಿಯವರದ್ದು; ನಿತೀಶ್‌ಗೆ ಒಳ ಏಟು ನೀಡಿದ ಚಿರಾಗ್ ಪಾಸ್ವಾನ್?

AIMIM ಬಿಜೆಪಿ ವಿರೋಧಿ ಮತಗಳನ್ನು ವಿಭಜಿಸುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ನಾವು ರಾಜಕೀಯ ಪಕ್ಷವನ್ನು ನಡೆಸುತ್ತಿದ್ದೇವೆ, ಆದ್ದರಿಂದ ಸ್ವಂತವಾಗಿ ಸ್ಪರ್ಧಿಸುವ ಹಕ್ಕನ್ನು ಹೊಂದಿದ್ದೇವೆ. ನೀವು ಮಹಾರಾಷ್ಟ್ರದಲ್ಲಿ ಶಿವಸೇನಾ ಮಡಿಲಲ್ಲಿ ಕುಳಿತುಕೊಂಡು ಅಧಿಕಾರ ನಡೆಸಬಹುದು. ಆದರೆ ನಾವು ಚುನಾವಣೆಗೆ ಸ್ಪರ್ಧಿಸಬಾರದೆ” ಎಂದು ಪರೋಕ್ಷವಾಗಿ ಕಾಂಗ್ರೆಸ್‌‌ಗೆ ಟಾಂಗ್ ನೀಡಿದ್ದಾರೆ.

ಒವೈಸಿಯವರ ಪಕ್ಷವನ್ನು ಕಾಂಗ್ರೆಸ್ ಸೇರಿದಂತೆ ಬಿಜೆಪಿಯೇತರ ಪಕ್ಷಗಳು, “ಬಿಜೆಪಿಯ ಬಿ-ಟೀಮ್” ಎಂದು ಟೀಕಿಸುತ್ತದೆ.

ಇದನ್ನೂ ಓದಿ: ಬಿಹಾರ: ‘ವಲಸೆ ಕಾರ್ಮಿಕರು’ ನಿತೀಶ್‌ ಕುಮಾರ್ ವಿರುದ್ಧ ಮತಚಲಾಯಿಸಿದ್ದಾರೆ- ತಜ್ಞರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಅಸಾಸುದ್ದೀನ್ ಓ.ವೈ.ಸಿ.ಯವರ ಪಕ್ಷಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಹಕ್ಕುಗಳೂ ಇವೆ.

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...