Homeಕರ್ನಾಟಕಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

ಸದಾಶಿವ ಆಯೋಗದ ವರದಿ ಜಾರಿಗಾಗಿ ಒತ್ತಾಯಿಸುತ್ತೇವೆ: ಪರಮೇಶ್ವರ್‌

- Advertisement -
- Advertisement -

“ಸದಾಶಿವ ಆಯೋಗದ ವರದಿಯನ್ವಯ ಒಳಮೀಸಲಾತಿ ಜಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಒತ್ತಾಯ ಮಾಡುತ್ತೇವೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ನಡೆದ ‘ಪರಿಶಿಷ್ಟ ಸಮುದಾಯಗಳ ಸಹೋದರತ್ವ’ ಸಮಾವೇಶದಲ್ಲಿ ಅವರು ಮಾತನಾಡಿದ್ದಾರೆ.

“ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ನನ್ನ ಅಧ್ಯಕ್ಷತೆಯಲ್ಲೇ ಆಗಿದೆ. ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲೇ ಮಂಡಿಸುವುದಾಗಿ ಭರವಸೆ ಕೊಟ್ಟಿದ್ದೇವೆ. ನಾನು ಹಾಗೂ ಸಚಿವರಾದ ಕೆ.ಎಚ್‌.ಮುನಿಯಪ್ಪ, ಡಾ.ಎಚ್.ಸಿ.ಮಹದೇವಪ್ಪ, ಪ್ರಿಯಾಂಕ್‌ ಖರ್ಗೆ, ಆರ್‌.ಬಿ.ತಿಮ್ಮಾಪೂರ್‌ ಅವರು ಮುಖ್ಯಮಂತ್ರಿಯವರಲ್ಲಿ ಒತ್ತಾಯ ಮಾಡುತ್ತೇವೆ. ಮುಂದಿನ ಅಧಿವೇಶನದಲ್ಲಿ ಅದನ್ನು ಮಂಡಿಸಬೇಕು ಅಂತ ಹೇಳುತ್ತೇವೆ. ಸಮುದಾಯದ ಸಮಸ್ಯೆ, ಬೇಡಿಕೆಗಳ ಬಗ್ಗೆ ನಾವು ಮಾತಾಡಿಲ್ಲ ಅಂದರೆ ಅಲ್ಲಿ ನಾವು ಯಾಕಿರಬೇಕು?” ಎಂದು ಪ್ರಶ್ನಿಸಿದ್ದಾರೆ.

ದಲಿತ ಮುಖ್ಯಮಂತ್ರಿ ವಿಚಾರವಾಗಿ ಮಾತನಾಡಿರುವ ಅವರು, “ನಾನು ಮುಖ್ಯಮಂತ್ರಿ ಯಾಕೆ ಆಗಬಾರದು?” ಎಂದು ಕೇಳಿದ್ದಾರೆ.

“ನಮ್ಮ ಪಕ್ಷದ ಆಂತರಿಕ ವಲಯದಲ್ಲಿ ಗೆಲುವಿನ ಪರಾಮರ್ಶೆ ಮಾಡುವಾಗ ಈ ಬಾರಿ ದಲಿತರು ನಮ್ಮ ಕೈ ಹಿಡಿದಿದ್ದಾರೆ, ಮುಸ್ಲಿಮರು ಶೇ.100 ನಮ್ಮ ಕೈ ಹಿಡಿದಿದ್ದಾರೆ ಅಂತ ಹೇಳುತ್ತಾರೆ. ನಮ್ಮ ಬಗ್ಗೆ ಈಗ ಎಲ್ಲರಿಗೆ ಗೊತ್ತಾಗಿದೆ, 51 ಮೀಸಲು ಕ್ಷೇತ್ರಗಳ ಪೈಕಿ 32ರಲ್ಲಿ ಗೆದ್ದಿದ್ದೇವೆ” ಎಂದಿದ್ದಾರೆ.

ಕಾಂಗ್ರೆಸ್ 2018ರಲ್ಲಿ ಸೋಲು ಕಂಡಿತು. ಯಾವ ಸಮುದಾಯವನ್ನು ಕಡೆಗಣಿಸಿದರೋ ಅದರಿಂದ ಪಾಠ ಕಲಿಯಬೇಕಾಯಿತು. ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದು ಪರಮೇಶ್ವರ್‌ ಅಸಮಾಧಾನ ಹೊರಹಾಕಿದ್ದಾರೆ.

ನಮ್ಮ ನಾಯಕರು ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ಜಗಜೀವನ್​ರಾಮ್ ಜಯಂತಿ‌ ಮಾಡಲು ಹೇಳಿದರು, ನನ್ನ ನೇತೃತ್ವದಲ್ಲಿ ಅಂಬೇಡ್ಕರ್ ಜಯಂತಿ ಮಾಡಲಿಕ್ಕೆ ಹೇಳಿದರು. ಅಲ್ಲೂ ನಮ್ಮನ್ನು ಒಡೆದು ಆಳೋಕೆ ನೋಡಿದರು ಎಂದಿರುವ ಅವರು​, ‘ಜಗಜೀವನ್​ರಾಮ್ ಎಡಗೈ, ಅಂಬೇಡ್ಕರ್ ಬಲಗೈ ಅಂತ ನಮಗೆ ಮಾಡಲು ಹೇಳುತ್ತಿದ್ದಾರೆ. ನಾವು ಮಾಡುವುದು ಬೇಡ, ಒಪ್ಪುವುದೂ ಬೇಡ ಅಂತ ಮುನಿಯಪ್ಪಗೆ ನಾನೇ ಹೇಳಿದೆ’ ಎಂದು ಹೇಳಿದ್ದಾರೆ.

ನಮ್ಮನ್ನು ಒಡೆದು ಆಳುವ ನೀತಿ ಒಪ್ಪುವುದು ಬೇಡ ಎಂದು ನಾವು ಇಬ್ಬರೂ ನಿರ್ಧಾರ ಮಾಡಿದೆವು. ಆ ನಂತರ ಒಂದಾಗಿ ಕಾರ್ಯಕ್ರಮ ಮಾಡುವ ತೀರ್ಮಾನ ತೆಗೆದುಕೊಂಡೆವು. ಆಮೇಲೆ ಚಿತ್ರದುರ್ಗದಲ್ಲಿ ಐಕ್ಯತೆ ಸಮಾವೇಶ ನಡೆಸಿದೆವು. ನಾವೆಲ್ಲರೂ ಐಕ್ಯತೆಯಿಂದ ಇರಬೇಕು ಎಂದು ಸಂದೇಶ ಹೋಯಿತು, ಆ ಸಂದೇಶ ಆದಮೇಲೆ ಎಸ್‌ಸಿ ಎಸ್ಟಿ ಒಂದಾಗಿದ್ದಾರೆ ಅಂತಾ ಮಾತಾಡೋಕೆ ಶುರು ಮಾಡಿದರು. ನಮ್ಮಲ್ಲಿ ಎಡ – ಬಲ ಇರಬಾರದು ಅನ್ನೋ ಪಾತ್ರದಲ್ಲಿ ಮುನಿಯಪ್ಪ ಪ್ರಮುಖರಾಗಿದ್ದಾರೆ ಎಂದು ಹೊಗಳಿದ್ದಾರೆ.

2013ರಲ್ಲಿ ನಾನೇ ಕೆಪಿಸಿಸಿ ಅಧ್ಯಕ್ಷನಾಗಿದ್ದೆ. ನನ್ನ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂತು. ಆದರೆ ನನ್ನ ನೇತೃತ್ವದಲ್ಲಿ ಅಧಿಕಾರಕ್ಕೆ ಬಂತು ಅಂತ ಯಾರೂ ಹೇಳಲಿಲ್ಲ, ನಾನೂ ಹೇಳಿಕೊಳ್ಳಲಿಲ್ಲ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಸಚಿವ ಕೆ.ಎಚ್.ಮುನಿಯಪ್ಪ, ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಸೇರಿದಂತೆ ಮೊದಲಾದವರು ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...