Homeಕರ್ನಾಟಕ40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

40% ಕಮಿಷನ್‌: ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಯಾರೆಂದೇ ಗೊತ್ತಿಲ್ಲ- ಈಶ್ವರಪ್ಪ

- Advertisement -
- Advertisement -

“ಸಂತೋಷ್‌ ಪಾಟೀಲ್ ಯಾರೆಂಬುದೇ ನನಗೆ ಗೊತ್ತಿಲ್ಲ. ಅವರು ಮಾತುಕತೆ ನಡೆಸಿದ್ದನ್ನು ಒಂದು ಸಲ ನೋಡಿದ್ದೆ. ಅದು ಡೆಲ್ಲಿಯಲ್ಲಿ ಆದದ್ದು” ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

‘ನನ್ನ ಸಾವಿಗೆ ಕೆ.ಎಸ್.ಈಶ್ವರಪ್ಪನವರೇ ಕಾರಣ’ ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಶೇ. 40ರಷ್ಟು ಕಮಿಷನ್‌ಗಾಗಿ ಪೀಡಿಸುತ್ತಿದ್ದಾರೆಂದು ಆರೋಪಿಸಿ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾಧ್ಯಮಗಳೊಂದಿಗೆ ಮಾತನಾಡಿರುವ ಈಶ್ವರಪ್ಪ, “ನನ್ನನ್ನು ಎಂಬತ್ತು ಸಲ ಭೇಟಿಯಾಗಿರುವುದಾಗಿ ಸಂತೋಷ್ ಪಾಟೀಲ್‌ ಹೇಳಿಕೊಂಡಿದ್ದಾರೆ. ಅವರು ಯಾರೆಂಬುದೇ ನನಗೆ ಗೊತ್ತೇ ಇಲ್ಲ. ಟಿವಿ 18ನಲ್ಲಿ ಮಾತನಾಡಿದ್ದು ನೋಡಿದ್ದೆ. ನಾಲ್ಕು ಕೋಟಿ ರೂ. ಕೆಲಸ ಮಾಡಿದ್ದೀನಿ, 40 ಪರ್ಸೆಂಟ್‌ ಕಮಿಷನ್‌ ಕೇಳುತ್ತಿದ್ದಾರೆಂದು ಹೇಳಿದ್ದರು” ಎಂದು ತಿಳಿಸಿದ್ದಾರೆ.

‘‘ಈಶ್ವರಪ್ಪನವರ ಕಡೆಯವರು ನನ್ನಿಂದ 40 ಪರ್ಸೆಂಟ್‌ ಕಮಿಷನ್‌ ಕೇಳಿದ್ದಾರೆ. ಇದನ್ನು ಮೋದಿಯವರಿಗೆ, ಅಮಿತ್‌ ಶಾ ಅವರಿಗೆ ತಿಳಿಸಿದ್ದೇನೆ ಎಂದು ಸಂತೋಷ್‌ ಹೇಳಿರುವುದನ್ನು ಟಿವಿಯಲ್ಲಿ ನೋಡಿದೆ. ಆ ಕಾಪಿ ನನಗೆ ಸಿಕ್ಕಿತು. ಬಳಿಕ ಕೇಸ್ ಹಾಕಿದ್ದೇನೆ. ಸಂತೋಷ್‌ ಪಾಟೀಲ್‌ಗೆ ನೋಟೀಸ್ ಹೋಗಿದೆ. ಈ ಮಧ್ಯೆ ಕೇಂದ್ರದ ಕಾಂಗ್ರೆಸ್ ನಾಯಕರಾದ ಡಿ.ಕೆ.ಸುರೇಶ್‌, ಎಲ್‌.ಹನುಮಂತಯ್ಯನವರು ದೆಹಲಿಯಲ್ಲಿ ಪ್ರೆಸ್‌ಮೀಟ್‌ ಮಾಡಿ ಕಮಿಷನ್ ಆರೋಪ ಮಾಡಿದ್ದರು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಮನವಿ ಮಾಡುತ್ತಿರುವ ಸಂತೋಷ ಪಾಟೀಲ್‌

ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್‌ ಸಿಂಗ್ ಅವರ ಕಚೇರಿಯಿಂದ ನಮ್ಮ ಕಚೇರಿಗೆ ಒಂದು ಪತ್ರ ಬಂದಿದೆ. ಕಮಿಷನ್‌ ಆರೋಪದ ಬಗ್ಗೆ ಕ್ಲಾರಿಫಿಕೇಷನ್‌ ಕೇಳಿದ್ದಾರೆ. ನನಗೆ ಅದೂ ಗೊತ್ತಿಲ್ಲ. ಉತ್ತರ ಹೋದ ಮೇಲೆ ಪ್ರತಿ ನನಗೆ ಸಿಕ್ಕಿತು ಎಂದಿದ್ದಾರೆ.

ಮತ್ತೊಂದು ಮಾಧ್ಯಮದೊಂದಿಗೆ ಮಾತನಾಡುತ್ತಾ, ‘ಸಂತೋಷ್‌ ಪಾಟೀಲ್‌ 108 ಕಾಮಗಾರಿ ಮಾಡಿರುವುದಾಗಿ ಹೇಳುತ್ತಿದ್ದಾರೆ. ನಾವು ಯಾವುದೇ ಕೆಲಸವನ್ನು ಅವರಿಗೆ ಕೊಟ್ಟಿಲ್ಲ. ದುಡ್ಡು ಕೊಡುವ ಪ್ರಶ್ನೆಯೇ ಬರುವುದಿಲ್ಲ. ಇದೆಲ್ಲವನ್ನು ಇಟ್ಟುಕೊಂಡು ಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹಾಕಿದ್ದೀನಿ’ ಎಂದಿದ್ದಾರೆ.

“ಸಂತೋಷ್ ಪಾಟೀಲ್‌ ಅವರಿಗೆ ನೋಟೀಸ್ ಹೋಗಿದೆ. ಸುದ್ದಿ ಪ್ರಸಾರ ಮಾಡಿದ ಟಿ.ವಿ. 18 ಅವರಿಗೂ ನೋಟೀಸ್ ಹೋಗಿದೆ. ಇದರ ಮಧ್ಯೆ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದು ತಕ್ಷಣವೇ ಈ ಕುರಿತು ತನಿಖೆ ಮಾಡಬೇಕು ಎಂದಿದ್ದೇನೆ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ನೋಡಿರಿ: ವಿಡಿಯೊ ➤➤ ‘ಮುಂದಿನ ಅನಾಹುತಕ್ಕೆ ಈಶ್ವರಪ್ಪನವರೇ ಕಾರಣ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...