Homeಕರ್ನಾಟಕನಿಮ್ಮ ಸುಳ್ಳು ನಮಗೆ ಬೇಡ: ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಎಂದ ಶಿವಮೊಗ್ಗ ಯುವಜನರು

ನಿಮ್ಮ ಸುಳ್ಳು ನಮಗೆ ಬೇಡ: ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಎಂದ ಶಿವಮೊಗ್ಗ ಯುವಜನರು

- Advertisement -
- Advertisement -

ವಿಶೇಷ ಉಪನ್ಯಾಸ ನೀಡಲು ಶಿವಮೊಗ್ಗಕ್ಕೆ ಆಗಮಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಜಿಲ್ಲಾ ನ್ಯಾಷನಲ್ ಸ್ಟೂಡೆಂಟ್ಸ್‌ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯು‌ಐ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನೆಹರು ಕ್ರೀಡಾಂಗಣದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರ ‘ಒಂದು ದೇಶ ಒಂದು ಚುನಾವಣೆ’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಹಿನ್ನಲೆಯಲ್ಲಿ ನೆಹರು ಕ್ರೀಡಾಂಗಣದ ಬಳಿ ಎನ್‌ಎಸ್‌ಯು‌ಐ ಕಾರ್ಯಕರ್ತರು ಗೋ ಬ್ಯಾಕ್ ಸೂಲಿಬೆಲೆ ಎಂದು ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಿದರು.

ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಅಲ್ಲದೆ ಚಕ್ರವರ್ತಿ ಸೂಲಿಬೆಲೆ ಅವರ ಭಾಷಣದ ವೇಳೆ ಹಲವು ಸುಳ್ಳುಗಳನ್ನು ಹೇಳಿ, ಯುವ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾರೆ. ಆದ್ದರಿಂದ ಅವರ ಭಾಷಣಕ್ಕೆ ಅವಕಾಶ ನೀಡಬಾರದು ಎಂದು ಕಾರ್ಯಕರ್ತರು ಆಗ್ರಹಿಸಿದರು.

ನೆಹರು ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಮಾತ್ರ ಅವಕಾಶ ನೀಡುವುದಾಗಿ ಇಲಾಖೆ ತಿಳಿಸಿತ್ತು. ಇತ್ತೀಚೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಬೇಕಿದ್ದ ರೈತ ಪಂಚಾಯಿತಿಗೆ ಅವಕಾಶ ನೀಡಿರಲಿಲ್ಲ, ಆದರೆ ಒಂದು ರಾಷ್ಟ್ರ ಒಂದು ಕಾನೂನು ಕಾರ್ಯಕ್ರಮಕ್ಕೆ ಕ್ರೀಂಡಾಗಣವನ್ನು ಹೇಗೆ ನೀಡಲಾಗಿದೆ ಎಂದು ಸಂಘಟನೆ ಪ್ರಶ್ನಿಸಿದೆ.

ನಿಮ್ಮ ಸುಳ್ಳು ನಮಗೆ ಬೇಕಾಗಿಲ್ಲ: ಸೂಲಿಬೆಲೆ ವಿರುದ್ಧ ಗೋಬ್ಯಾಕ್ ಎಂದ ಶಿವಮೊಗ್ಗ ಯುವಜನರು

ಇದನ್ನೂ ಓದಿ: ‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಕೇಂದ್ರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

ಮಾ.27 ಕ್ಕೆ ನರೇಂದ್ರ ಮೋದಿ ವಿಚಾರ ಮಂಚ್‌ನಿಂದ ಆಯೋಜಿಸಿರುವ ರಾಜಕೀಯ ಪ್ರೇರಿತ ಭಾಷಣದ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ತಾರತಮ್ಯ ಮಾಡುತ್ತಿರುವುದು ಸರಿಯಲ್ಲ. ಚಕ್ರವರ್ತಿ ಸೂಲಿಬೆಲೆ ಅವರ ರಾಜಕೀಯ ಪ್ರೇರಿತ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವುದು ಖಂಡನೀಯ ಎಂದು ಸಂಘಟನೆ ಆರೋಪಿಸಿದೆ.

“ಸೂಲಿಬೆಲೆ ಅವರು ಭಾಷಣದಲ್ಲಿ ಸುಳ್ಳುಗಳನ್ನು ಹೇಳುವ ಮೂಲಕ ಯುವಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಾರೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ಮೇಲೆ ಪೆಟ್ರೋಲ್, ಡಿಸೇಲ್ ದರ ಕಡಿಮೆ ಆಗುತ್ತದೆ. ಯುವಜನರಿಗೆ ಉದ್ಯೋಗ ಸಿಗುತ್ತದೆ. ದೇಶ ಅಭಿವೃದ್ಧಿ ಪಥದಲ್ಲಿ ಮುನ್ನಡೆಯುತ್ತದೆ ಎಂದೆಲ್ಲಾ ಸುಳ್ಳು ಹೇಳಿಕೆಗಳನ್ನು ಹಿಂದಿನ ಭಾಷಣಗಳಲ್ಲಿ ತಿಳಿಸಿದ್ದರು. ಆದರೆ ಕೇಂದ್ರ ಸರ್ಕಾರದ ನರೇಂದ್ರ ಮೋದಿ ಅಧಿಕಾರ ಅವಧಿಯಲ್ಲಿ ಯುವಜನರಿಗೆ ಸರಿಯಾದ ರೀತಿಯಲ್ಲಿ ಉದ್ಯೋಗ ಸಿಗುತ್ತಿಲ್ಲ. ಪೆಟ್ರೋಲ್, ಡೀಸೆಲ್ ದರ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದೆ. ಇಂತಹ ಸುಳ್ಳು ಭಾಷಣ ಮಾಡುವವರ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಸಂಘಟನೆ ಒತ್ತಾಯಿಸಿದೆ.

ನೆಹರು ಕ್ರೀಡಾಂಗಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಜಿಲ್ಲಾ ಎನ್‌ಎಸ್‌ಯು‌ಐ ಮುಖಂಡರಾದ ಚೇತನ್ ಗೌಡ, ಬಾಲಾಜಿ ಸೇರಿದಂತೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.


ಇದನ್ನೂ ಓದಿ: ಬಿಜೆಪಿ ಶಾಸಕನನ್ನು ಥಳಿಸಿ ಅಸಮಾಧಾನ ಹೊರಹಾಕಿದ ಪಂಜಾಬ್ ರೈತರು: ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ :...

0
ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನ ಸಮಾವೇಶದಲ್ಲಿ...