HomeಮುಖಪುಟINDIA ಇಷ್ಟಪಡದವರು ಪಾಕಿಸ್ತಾನಕ್ಕೆ ಹೋಗಿ ಎಂದು ನಾವು ಹೇಳುವುದಿಲ್ಲ: ಮೈತ್ರಿಕೂಟದ ಟೀಕೆಗೆ ಖೇರಾ ತಿರುಗೇಟು

INDIA ಇಷ್ಟಪಡದವರು ಪಾಕಿಸ್ತಾನಕ್ಕೆ ಹೋಗಿ ಎಂದು ನಾವು ಹೇಳುವುದಿಲ್ಲ: ಮೈತ್ರಿಕೂಟದ ಟೀಕೆಗೆ ಖೇರಾ ತಿರುಗೇಟು

- Advertisement -
- Advertisement -

ಕಾಂಗ್ರೆಸ್ ನೇತೃತ್ವದ ಒಕ್ಕೂಟವನ್ನು INDIA (ಇಂಡಿಯನ್ ನ್ಯಾಶನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್) ಎಂದು ಮರುನಾಮಕರಣ ಮಾಡಿರುವುದರ ಬಗ್ಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಟೀಕಿಸಿದ್ದಾರೆ. ಅದಕ್ಕೆ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು INDIAವನ್ನು ಇಷ್ಟಪಡದವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ನಾವು ಹೇಳುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.

INDIA ಮೈತ್ರಿಕೂಟವನ್ನು ಟೀಕಿಸಿ ಹಿಮಂತ ಬಿಸ್ವಾ ಶರ್ಮಾ ಟ್ವೀಟ್ ಮಾಡಿದ್ದು, ”ಬ್ರಿಟಿಷರು ದೇಶಕ್ಕೆ ಇಂಡಿಯಾ ಎಂದು ಹೆಸರಿಟ್ಟಿದ್ದರು. ಹೀಗಿರುವಾಗ ನಾವು ವಸಾಹತುಶಾಹಿ ಪರಂಪರೆಯಿಂದ ನಮ್ಮನ್ನು ಮುಕ್ತಗೊಳಿಸಲು ಶ್ರಮಿಸಬೇಕು. ನಮ್ಮ ನಾಗರಿಕ ಸಂಘರ್ಷವು ಇಂಡಿಯಾ ಮತ್ತು ಭಾರತದ ಸುತ್ತ ಇದೆ” ಎಂದು ಹೇಳಿದ್ದಾರೆ.

”ಬ್ರಿಟಿಷರು ನಮ್ಮ ದೇಶವನ್ನು ಇಂಡಿಯಾ ಎಂದು ಹೆಸರಿಸಿದರು, ಕಾಂಗ್ರೆಸ್ ಅದನ್ನು ಒಪ್ಪಿಕೊಂಡಿತು. ಈ ವಸಾಹತುಶಾಹಿ ಪರಂಪರೆಯಿಂದ ಮುಕ್ತಿ ಹೊಂದಲು ನಾವು ಶ್ರಮಿಸಬೇಕು. ನಮ್ಮ ಪೂರ್ವಜರು ಭಾರತಕ್ಕಾಗಿ ಹೋರಾಡಿದ್ದಾರೆ ಮತ್ತು ನಾವು ಭಾರತಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ” ಎಂದಿದ್ದಾರೆ.

”ಕಾಂಗ್ರೆಸ್ ಫಾರ್ ಇಂಡಿಯಾ ಮತ್ತು ಮೋದಿ ಜಿ ಭಾರತ್” ಎಂದು ಟ್ವೀಟ್ ಮಾಡಿದ್ದು, ನಂತರ ಅದನ್ನು ಡಿಲೀಟ್ ಮಾಡಿ ಹೊಸ ಟ್ವೀಟ್‌ನಲ್ಲಿ ”ಬಿಜೆಪಿ ಫಾರ್ ಭಾರತ್” ಎಂದು ಬದಲಾಯಿಸಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎಯನ್ನು ಎದುರಿಸಲಿರುವ ವಿರೋಧ ಪಕ್ಷದ ಮೈತ್ರಿಯನ್ನು I.N.D.I.A ಎಂದು ಕರೆಯಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.

ಬಿಜೆಪಿ ಮತ್ತು ಇತರ ಬಲಪಂಥೀಯ ಸಂಘಟನೆಗಳನ್ನು ಟೀಕಿಸಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ, ”ಆದರೆ INDIA ಇಷ್ಟಪಡದವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ನಾವು ಹೇಳುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಹೆಸರನ್ನು ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಭಾರತ ಎಂಬ ಪದದ ಪೂರ್ಣ ಸ್ವರೂಪದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿವೆ ಎಂದು ವರದಿಯಾಗಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ”ಬಿಜೆಪಿ, ನೀವು INDIAಗೆ ಸವಾಲು ಹಾಕಬಹುದೇ? ನಾವು ನಮ್ಮ ಮಾತೃಭೂಮಿಯನ್ನು ಪ್ರೀತಿಸುತ್ತೇವೆ. ನಾವು ದೇಶದ ದೇಶಭಕ್ತರು, ನಾವು ರೈತರು, ದಲಿತರು, ನಾವು ದೇಶಕ್ಕಾಗಿರುವವರು, ಜಗತ್ತಿಗಾಗಿ ಇರುವವರು. INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ” ಎಂದು ಬ್ಯಾನರ್ಜಿ ಗುಡುಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...