Homeಕರ್ನಾಟಕಬೆಂಗಳೂರಿನಲ್ಲಿ CAA NRC ವಿರುದ್ಧ ಇಂದು ಮತ್ತೆ ಬೀದಿಗಿಳಿದ ವಿದ್ಯಾರ್ಥಿಗಳು, ನೂರಾರು ನಾಗರಿಕರ ಬೆಂಬಲ...

ಬೆಂಗಳೂರಿನಲ್ಲಿ CAA NRC ವಿರುದ್ಧ ಇಂದು ಮತ್ತೆ ಬೀದಿಗಿಳಿದ ವಿದ್ಯಾರ್ಥಿಗಳು, ನೂರಾರು ನಾಗರಿಕರ ಬೆಂಬಲ…

- Advertisement -
- Advertisement -

CAA NRC ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದೂ ಕೂಡ ವಿದ್ಯಾರ್ಥಿಗಳು ಬೀದಿಗಿಳಿದಿದ್ದಾರೆ. ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜು ಬಳಿ ಸೇರಿದ ವಿದ್ಯಾರ್ಥಿಗಳು CAA NRC ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂರಾರು ವಿದ್ಯಾರ್ಥಿಗಳು ಅಂಬೇಡ್ಕರ್‌ ಫೋಟೊ ಹಿಡಿದು ಪೌರತ್ವ ಕಾಯ್ದೆಯ ವಿರುದ್ಧದ ಘೋಷಣೆಗಳುಳ್ಳ ಭಿತ್ತಿಪತ್ರಗಳೊಂದಿಗೆ ಸಂಜೆ 5 ಗಂಟೆಗೆ ಪ್ರತಿಭಟನೆ ಆರಂಭಿಸಿದ್ದಾರೆ. ಮುಂದಿನ ಸಾಲಿನಲ್ಲಿ ಪರಸ್ಪರ ಕೈ ಕೈ ಹಿಡಿದು ಪ್ರತಿಭಟನೆ ಮುನ್ನಡೆಸಿದರೆ ಅವರ ಹಿಂದೆ ನಾಗರಿಕರು ಬೆಂಬಲ ನೀಡಿದ್ದಾರೆ.

ಜಯನಗರ ಎನ್‌ಎಂಕೆಆರ್‌ವಿ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಮಾತನಾಡಿ “ಇಂದಿನ ಮಕ್ಕಳಾದ ನಾವು ನಾಳಿನ ಪ್ರಜೆಗಳು. ಹಾಗಾಗಿ ಅಸಂವಿಧಾನಕ ಹಾಗು ಬೇಧ ಭಾವ ಉತ್ತೇಜಿಸುವ NPR-NRC-CAA ಪೌರತ್ವ ತಿದ್ದುಪಡಿ ಕಾಯ್ದೆಯನ್ನು ನಾವು ಬೆಂಗಳೂರಿನ ವಿದ್ಯಾರ್ಥಿಗಳು ವಿರೋಧಿಸುತ್ತೇವೆ” ಎಂದು ತಿಳಿಸಿದ್ದಾರೆ.

ದೇಶದಾದ್ಯಂತ ನಡೆಯುತ್ತಿರುವ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಐಕ್ಯಮತ್ಯದೊಂದಿಗೆ ನಾವಿಂದು ಶಾಂತಿಯುತವಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದೇವೆ. ಧರ್ಮದ ಆಧಾರದಲ್ಲಿ ಈ ದೇಶದ ಒಗ್ಗಟ್ಟನ್ನು ಒಡೆಯುವ CAA NRCಗೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...