Homeಮುಖಪುಟನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, 'ಬಹುಭಾಷೆಗಳಲ್ಲಿ ದ್ವಿಭಾಷೆ': ಕುವೆಂಪು

ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ, ‘ಬಹುಭಾಷೆಗಳಲ್ಲಿ ದ್ವಿಭಾಷೆ’: ಕುವೆಂಪು

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

- Advertisement -
- Advertisement -

ಭಾರತದಲ್ಲಿ ಭಾಷಾಭಿಮಾನದ ಅತೀರೇಕದಿಂದ ಉಂಟಾಗಬಹುದಾದ ಗೊಂದಲವನ್ನು ಪರಿಹರಿಸಲು ಜನರು ಮೂರು ಭಾಷೆಗಳನ್ನು ಕಲಿಯಬೇಕು ಎಂದು ‘ತ್ರಿಭಾಷಾ ಸೂತ್ರ’ವನ್ನು ಘೋಷಿಸಲಾಗಿದೆ. ಇಂಗ್ಲಿಷನ್ನು ಅಂತಾರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಹಿಂದಿಯನ್ನು ಭಾರತದ ರಾಷ್ಟ್ರೀಯ ಮಾಧ್ಯಮಕ್ಕಾಗಿಯೂ, ಕನ್ನಡವನ್ನು (ಇತರ ಭಾಷೆಗಳಲ್ಲಿ ಒಂದನ್ನು) ಕರ್ನಾಟಕ ರಾಜ್ಯದ ಮಾಧ್ಯಮಕ್ಕಾಗಿಯೂ ಎಂಬರ್ಥದಲ್ಲಿ. ಮೇಲು ನೋಟಕ್ಕೆ ಇದು ಸಾಧುವಾಗಿ ತೋರುತ್ತಿದೆಯಾದರೂ, ಸ್ವಲ್ಪ ವಿವರಿಸಿದರೆ ಗೊತ್ತಾಗುತ್ತದೆ ಇದು ಮಹಾ ಅಪಾಯಕಾರಿ ಎಂದು.

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಆ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ.

ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದೂ ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಯೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ? ಭರತಖಂಡಕ್ಕೀಗ ಬೇಕಾಗಿರುವುದು ಬಹುಭಾಷಾ ಸೂತ್ರ. ನಮ್ಮ ಜನ ಕಲಿಯಬೇಕಾಗಿರುವುದು ಇಂಗ್ಲಿಷನ್ನು ಮಾತ್ರವಲ್ಲ, ವೈಜ್ಞಾನಿಕ ಅವಶ್ಯಕತೆಗಳಿಗಾಗಿ ರಷ್ಯನ್, ಜರ್ಮನ್ ಮುಂತಾದ ಭಾಷೆಗಳನ್ನು ಕೂಡ ಕಲಿಯಬೇಕು.

‌‌ತ್ರಿಭಾಷಾ ಸೂತ್ರದ ಅಪಾಯ ಇಷ್ಟಕ್ಕೇ ಸೀಮಿತವಾಗಿಲ್ಲ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ರಾಜಕೀಯ ಕಾರಣಗಳಿಗಾಗಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳ ವೈಭವವನ್ನು ಏನೂ ಅರಿಯದ ನಮ್ಮ ಹಸುಳೆಗಳ ಮುಂದೆ ವರ್ಣಿಸಿ ಅದರ ಮನಸ್ಸನ್ನು ಅವುಗಳ ಕಡೆಗೇ ಎಳೆದು ದೇಶಭಾಷೆಗಳ ಅಧ್ಯಯನವನ್ನು ಹಿಂದಕ್ಕೊತ್ತರಿಸುವ ಪ್ರಯತ್ನವನ್ನು ಮಾಡುತ್ತಿರುವವರು ಅನೇಕರಿದ್ದಾರೆ.

ಆದ್ದರಿಂದ ನನ್ನ ವಾದ ಇಷ್ಟು: ನಮಗೆ ಬೇಕಾದುದು ತ್ರಿಭಾಷಾ ಸೂತ್ರವಲ್ಲ ದ್ವಿಭಾಷಾ ಸೂತ್ರ: ಅಂದರೆ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಅತ್ಯಂತ ಕ್ಷೇಮಕರವೂ ಲಾಭದಾಯಕವೂ ಆದ ಸೂತ್ರ. ನಮ್ಮ ವಿದ್ಯಾರ್ಥಿಗಳ ಮುಂದೆ ಅನೇಕ ಭಾಷೆಗಳನ್ನಿರಿಸಿ, ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯವನ್ನು ಅವರಿಗೇ ಕೊಡಬೇಕು. ಭರತಖಂಡದ ಯಾವ ವಿದ್ಯಾರ್ಥಿಯ ಮೇಲೂ ಯಾವ ಭಾಷೆಯನ್ನೂ ಬಲಾತ್ಕಾರವಾಗಿ ಹೇರಬಾರದು. ತಮ್ಮ ಅವಶ್ಯಕತೆಗೆ ಮತ್ತು ಸಾಮರ್ಥ್ಯಕ್ಕೆ ತಕ್ಕಂತೆ ಅವರೇ ನಿರ್ಧರಿಸಿಕೊಳ್ಳಲಿ. ಇದರಿಂದ ಬಲಾತ್ಕಾರದ ಅಂಶ ತೊಲಗುತ್ತದೆ; ಆವರಿಸಿಕೊಳ್ಳುವ ಸ್ವಾತಂತ್ರ್ಯ ಪ್ರಜಾಸತ್ತಾತ್ಮಕವಾಗುತ್ತದೆ.

ಶೈಕ್ಷಣಿಕ ದೃಷ್ಟಿಯಿಂದ ಮಾತ್ರವಲ್ಲದೆ ರಾಜಕೀಯ ದೃಷ್ಟಿಯಿಂದಲೂ ಈ ‘ಬಹುಭಾಷೆಗಳಲ್ಲಿ ದ್ವಿಭಾಷಾ’ ಸೂತ್ರ ತ್ರಿಭಾಷಾಸೂತ್ರಕ್ಕಿಂತ ಪರಿಣಾಮಕಾರಿಯಾಗಿ, ಎಲ್ಲ ಪ್ರದೇಶಗಳಿಗೂ ಸಮಾಧಾನವೊದಗಿಸಿ, ಸ್ವಭಾಷಾಭಿಮಾನ ಜನ್ಯವಾದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತದೆ.

ಯಾವುದಾದರೂ ಎರಡು ಭಾಷೆಗಳನ್ನು ಆರಿಸಿಕೊಳ್ಳಬಹುದು ಎನ್ನುವುದರಿಂದ ಹಿಂದಿ ಬೇಡ ಎನ್ನುವವರಿಗೆ, ಇಂಗ್ಲಿಷ್ ಬೇಡ ಎನ್ನುವವರಿಗೆ, ಅವುಗಳನ್ನು ಬಲಾತ್ಕಾರವಾಗಿ ಹೇರಿದಂತಾಗುವುದಿಲ್ಲ; ನಿಷೇಧಿಸಿದಂತೆಯೂ ಆಗುವುದಿಲ್ಲ. ಮಹಾಜನರೇ ಕಾಲಕ್ರಮೇಣ, ತಮ್ಮ ತಮ್ಮ ಅಭಿರುಚಿ ಅವಶ್ಯಕತೆಗಳಿಗೆ ತಕ್ಕಂತೆ ಹಿಂದಿ, ಇಂಗ್ಲಿಷ್, ರಷ್ಯನ್, ಸಂಸ್ಕೃತ ಮೊದಲಾದ ಭಾಷೆಗಳನ್ನು ಯಾವ ಶೇಕಡಾವಾರು ಪ್ರಮಾಣದಲ್ಲಿ ಕಲಿಯಬೇಕೆಂಬುದನ್ನು ತಮಗೆ ತಾವೇ ಗೊತ್ತು ಮಾಡಿಕೊಳ್ಳುತ್ತಾರೆ.

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ. ಶೇಕಡ ಒಂದರಷ್ಟು ಜನಕ್ಕೆ ಅರ್ಧಮರ್ಧ ಇಂಗ್ಲಿಷ್ ಕಲಿಸಿ ಬ್ರಿಟೀಷರು ಇನ್ನೂರು ವರ್ಷಕ್ಕೂ ಮೇಲೆ ಸಮರ್ಥವಾಗಿ ರಾಜ್ಯಭಾರ ನಡೆಸಲಿಲ್ಲವೆ?

ತ್ರಿಭಾಷಾ ಸೂತ್ರ ಎಂಬುದು, ನಾನು ಹಿಂದೆಯೆ ಅನೇಕ ಕಡೆ ಹೇಳಿರುವಂತೆ, ಭಾರತೀಯರಿಗೂ ತ್ರಿಶೂಲಪ್ರಾಯವಾಗುತ್ತದೆ. ಎಲ್ಲರಿಗೂ ಎಲ್ಲ ಭಾಷೆಗಳೂ ಬೇಕಾಗಿಲ್ಲ ಎಂದರೆ, ಎಲ್ಲರೂ ಇಂಗ್ಲಿಷನ್ನಾಗಲಿ ಹಿಂದಿಯನ್ನಾಗಲಿ ಕಲಿಯಬೇಕಾದದ್ದು ಏಕೆ? ಯಾರಿಗೆ ಅಗತ್ಯವಿದೆಯೋ ಅಂಥವರು ಅವರಿಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಇಂತಹ ಭಾಷೆಗಳನ್ನು ಶೀಘ್ರವಾಗಿ ಸಾಹಿತ್ಯದೃಷ್ಟಿಯಿಂದಲ್ಲದೆ ಭಾಷಾದೃಷ್ಟಿಯಿಂದ ಭೋಧಿಸುವ ಕಾರ್ಯಕ್ಕಾಗಿ ಭಾಷಾ ಸಂಸ್ಥೆಗಳ ಸ್ಥಾಪನೆಯಾಗಿದೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಆಗಲಿದೆ, ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಆದ್ದರಿಂದ ‘ಬಹುಭಾಷೆಗಳಲ್ಲಿ ದ್ವಿಭಾಷೆ’ ಎಂಬುದೇ ನಮಗಿಂದು ಕ್ಷೇಮಕರ ಸೂತ್ರವಾಗಿದೆ.

ಒಂದುವೇಳೆ ಮೂರೂ ಭಾಷೆಗಳನ್ನು ಕಲಿಯಬೇಕು ಎಂದು ಹಠ ಹಿಡಿದರೂ ಬಹುಭಾಷೆಗಳಲ್ಲಿ ಮೂರುಭಾಷೆಗಳನ್ನು ಆರಿಸಿಕೊಳ್ಳುವ ಸ್ವಾತಂತ್ರ್ಯ ವಿದ್ಯಾರ್ಥಿಗಿರಬೇಕು. ‘ಬಹುಭಾಷೆಗಳಲ್ಲಿ ತ್ರಿಭಾಷೆ’ ಆಗಬೇಕೇ ಹೊರತೂ ಬರಿಯ ‘ತ್ರಿಭಾಷೆ’ಯಾಗಬಾರದು. ಬರಿಯ ‘ತ್ರಿಭಾಷೆ’ಯಾದರೆ ಇಂಗ್ಲಿಷ್ ಮತ್ತು ಹಿಂದಿ ಬಲಾತ್ಕಾರದ ಭಾಷೆಗಳಾಗುತ್ತವೆ. ಕನ್ನಡ ತೆಲುಗು ಮಲಯಾಳ ಭಾಷೆಗಳು ತೃತೀಯ ಸ್ಥಾನಕ್ಕಿಳಿದು ಹಿಂದಿಯನ್ನು ‘ಓಲೈಸುವ ಅಡಿಯಾಳುಗಳಂತಾಗಿ ತೊತ್ತುಗಳಾಗುತ್ತವೆ.’

ಕೃಪೆ: ಕುವೆಂಪು ಸಮಗ್ರ ಗದ್ಯ- ಸಂಪುಟ ೨, ಕನ್ನಡ ವಿಶ್ವವಿದ್ಯಾಲಯದ ಪ್ರಕಟಣೆ


ಇದನ್ನೂ ಓದಿ: ಹಿಂದಿ ಭಾಷಾ ದಿನ ಬೇಡ: 22 ಭಾಷೆಗಳನ್ನು ಸೇರಿಸಿ ಭಾರತ ಭಾಷಾ ದಿವಸ ಆಚರಿಸಲು ಕನ್ನಡಿಗರ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...